ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...
"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)