ಬೆಂಗಳೂರಲ್ಲಿ ರಿಯಾಯಿತಿ ಪುಸ್ತಕ ಮೇಳ

ಬೆಂಗಳೂರಲ್ಲಿ ರಿಯಾಯಿತಿ ಪುಸ್ತಕ ಮೇಳ

ಪ್ರತಿ ಪುಸ್ತಕಕ್ಕೆ ಕನಿಷ್ಠ ಶೇಕಡ 25ರಷ್ಟು ರಿಯಾಯಿತಿ ನೀಡುವ ಪುಸ್ತಕ ಮಾರಾಟ ಮೇಳ ಇದೇ 5ರಿಂದ 8ರವರೆಗೆ ಇಲ್ಲಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ನಡೆಯಲಿದೆ. ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿರುವ ಈ ಮೇಳದಲ್ಲಿ ರಾಜ್ಯದ 70 ಪ್ರಕಾಶನ ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ಮೈಸೂರು ವಿಶ್ವವಿದ್ಯಾಲಯ ಮತ್ತು ಹಂಪಿ ಕನ್ನಡ ವಿ.ವಿ.ಯ ಪ್ರಕಟಣೆಗಳು ಶೇಕಡ 50ರಷ್ಟು ರಿಯಾಯಿತಿಯಲ್ಲಿ ಲಭ್ಯವಾಗಲಿವೆ.
ಉದ್ಘಾಟನೆಯ ದಿನ ಹೊರತುಪಡಿಸಿ ಉಳಿದ ದಿನಗಳಂದು, ಬೆಳಿಗ್ಗೆ 10.30ರಿಂದ ರಾತ್ರಿ 8 ಗಂಟೆಯವರೆಗೆ ಪುಸ್ತಕ ಮಳಿಗೆಗಳು ತೆರೆದಿರುತ್ತವೆ. ಜನಪ್ರಿಯ ಪ್ರಕಾಶನ ಸಂಸ್ಥೆಗಳಾದ ನವ ಕರ್ನಾಟಕ ಪ್ರಕಾಶನ, ಸಪ್ನಾ ಬುಕ್ ಹೌಸ್, ರಾಜ್ಯದ ಎಲ್ಲಾ ಅಕಾಡಮಿಗಳು ಮಳಿಗೆಗಳನ್ನು ತೆರೆಯಲಿವೆ


ಕೃಪೆ: ಪ್ರಜಾವಾಣಿ