ಬರಹಗಳು: ಇಂದು ಓದಿದ ವಚನ
ನನಗಿದು ಸಾಧ್ಯ ಅಥವಾ ನನಗಿದು ಅಸಾಧ್ಯ; ಈ ಎರಡರಲ್ಲಿ ನೀವೇನು ಯೋಚಿಸುತ್ತೀರೋ ಅದು ಬಹುತೇಕ ನಿಜವಾಗುತ್ತದೆ.
- ಹೆನ್ರಿ ಫೋರ್ಡ್
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ಕುಡಿಯುವ ನೀರು? (ಫೋಟೋ: Kedarnath, Dharwad)
ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ | ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ || ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ | ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||
ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.
— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.