hpn ರವರು ಸೇರಿಸಿರುವ ನುಡಿಮುತ್ತುಗಳು
ಮಂಕುತಿಮ್ಮ ೫೪೪
August 4, 2006 - 9:20pm — hpnಅನುಭವದ ಪಾಲೊಳು ವಿಚಾರ ಮಂಥನವಾಗೆ |
ಜನಯಿಕುಂ ಜ್ಞಾನನವನೀತವೆ ಸುಖದಂ ||
ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ |
ನಿನಗೆ ಧರುಮದ ದೀಪ -- ಮಂಕುತಿಮ್ಮ ||

ಮಂಕುತಿಮ್ಮ ೬೧೬
August 4, 2006 - 9:13pm — hpnಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||
ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |
ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||

ಮಂಕುತಿಮ್ಮ ೬೩೨
August 4, 2006 - 9:02pm — hpnಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||

ಕನ್ನಡ ದೀಕ್ಷೆ
February 3, 2006 - 7:25pm — hpn"ನಾನು ಅವಧೂತನಾಗಿ ಹೋಗುವುದಿಲ್ಲ. ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ, ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು, ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು, ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ. ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

ಮುಠ್ಠಾಳ ಜಗದ್ಗುರು
February 3, 2006 - 7:21pm — hpn"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."








RSS: