ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

Abhaya Simha (ಲೇಖನಗಳು)

ಆಟ ಮುಗಿಸಿ ಹೊರಟು ಹೋದ ಚಿತ್ರ ಮಾಂತ್ರಿಕ

August 1, 2007 - 12:46pm — Abhaya Simha
Ingmar Bergman
- ಇಂಗ್ಮಾರ್ ಬರ್ಗ್ಮನ್‌ರಿಗೊಂದು ನುಡಿ ನಮನ -

ಚಲನ ಚಿತ್ರವು ಒಂದು ಕನಸಿನಂತೆ, ಸಂಗೀತದಂತೆ. ಅದು ಸಾಮಾನ್ಯ ಪ್ರಜ್ಞೆಯನ್ನು ಮೀರಿ ಹೋಗುತ್ತದೆ. ಚಲನ ಚಿತ್ರವು ಆತ್ಮದ ಬೆಚ್ಚನ ಗೂಡಿನೊಳಗೆ ಭಾವದ ಧಾರೆ ಸುರಿಸುತ್ತದೆ. ಇದು ಬರೇ ಕಣ್ಣಿನ ಮಾಯೆಯಲ್ಲ, ಚಮತ್ಕಾರವಲ್ಲ. ಪ್ರತಿ ಕ್ಷಣ ಹಾರುವ ಇಪ್ಪತ್ನಾಲ್ಕು ಬೆಳಕಿನ ಕಿಂಡಿಗಳು, ನಡುವೆ ಕತ್ತಲೆಯ ವಾಸ.
- ಮ್ಯಾಜಿಕ್ ಲಾಂಟರ್ನ್, ೧೯೮೭

ನಾನು ವಿಶ್ವ ಸಿನೆಮಾ ನೋಡಲಾರಂಭಿಸಿದ ಮೊದಲ ದಿನಗಳಲ್ಲೇ ನೋಡಿದ, ಸದಾ ಕಾಲ ನನ್ನನ್ನು ಕಾಡಿಸಿದ ಒಂದು ಚಿತ್ರ ‘ಸೆವೆನ್ತ್ ಸೀಲ್’, ನಿರ್ದೇಶಕ ಇಂಗ್ಮಾರ್ ಬರ್ಗ್ಮನ್ (೧೯೧೮-೨೦೦೭). ಮತ್ತೆ ಇವರ ‘ಥ್ರೂ ದ ಗ್ಲಾಸ್ ಡಾರ್ಕ್‌ಲೀ’, ‘ವರ್ಜಿನ್ ಸ್ಪ್ರಿಂಗ್’, ‘ವಿನ್ಟರ್ ಲೈಟ್’, ‘ವೈಲ್ಡ್ ಸ್ಟ್ರಾಬರೀ’ ಹೀಗೆ ಅನೇಕ ಚಿತ್ರಗಳನ್ನು ನೋಡುವ ಅವಕಾಶ ಸಿಕ್ಕಿತು. ನೂರಕ್ಕೂ ಮಿಗಿಲಾದ ರಂಗಪ್ರಸ್ತುತಿ, ೧೫೦ರಷ್ಟು ರೇಡಿಯೋ ನಾಟಕಗಳು, ಐವತ್ತಕ್ಕೂ ಹೆಚ್ಚು ಸಿನೆಮಾ ಮಾಡಿದ ಸ್ವೀಡನ್ನಿನ ಈ ಮಹಾ ವ್ಯಕ್ತಿ ಇದೀಗ (೩೦ ಜುಲೈ ೨೦೦೭) ಕಣ್ಮರೆಯಾಗಿದ್ದಾರೆ. ಅವರದೇ ಪ್ರತಿಮೆಯನ್ನು ಬಳಸಿದರೆ, ಸಾವಿನೊಡನೆ ಚೆಸ್ ಆಟ ಮುಗಿಸಿ ಹೊರಟಿದ್ದಾರೆ. ಅವರಿಗೆ ಕನ್ನಡ ನೆಲದಿಂದ ಕಿರಿಯನೊಬ್ಬನ ನುಡಿ ನಮನ ಇದು.  ಮುಂದೆ ಓದಿ »

  • ವ್ಯಕ್ತಿ ವಿಷಯ, ಪರಿಚಯ, ಸಾಧನೆ
~.~
  • 6 ಪ್ರತಿಕ್ರಿಯೆಗಳು
  • 1137 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಗೋಡೆಯ ಆಚೆಯಿಂದ ಈಚಿನ ಕಥೆ

March 17, 2007 - 10:35pm — Abhaya Simha

Shawshank Redemption ಆಂಡೀ ಡುಫ್ರ್ರೆನ್ಸ್ ಒಬ್ಬ ಚತುರ, ಚಾಣಾಕ್ಷ ಬ್ಯಾಂಕ್ ಅಧಿಕಾರಿ. ಸುಂದರ ಪತ್ನಿ, ದೌಲತ್ತಿನ-ಸವಲತ್ತಿನ ಜೀವನ, ಅಮೇರಿಕಾದ ಮುಕ್ತ ಬದುಕಿನ ಸುಂದರ ಕನಸುಗಳು. ಜೀವನ ಇದಕ್ಕಿಂತ ಇನ್ನೇನು ತಾನೇ ಕೊಟ್ಟೀತು? ಜೀವನದಿಂದ ಇನ್ನೇನು ತಾನೇ ಕೇಳಬಹುದು? ಆಂಡೀ ಡುಫ್ರ್ರೆನ್ಸ್ ಸಂತುಷ್ಟನಾಗಿದ್ದ ಎನ್ನಲೇ? ಅಥವಾ ಅದೆಲ್ಲವೂ ಒಂದು ಸುಂದರ ಕನಸಾಗಿತ್ತು ಎನ್ನಲೇ? ಬಹುಷಃ ಕನಸು ಎಂಬುದೇ ಸರಿಯಾದ ಶಬ್ದ. ಏಕೆಂದರೆ ಕನಸುಗಳು ಕಣ್ಣುಬಿಡುತ್ತಿದ್ದಂತೆಯೇ ಕರಗಿಹೋಗುತ್ತವೆ. ಒಂದು ಸರಳವಾದ ಕೇಸ್. ಖಚಿತವಾಗಿ ಸಿಗುವ ಪುರಾವೆಗಳು. ದಕ್ಷ ಪೊಲೀಸರು, ಗೌರವಾನ್ವಿತ ಸಮಾಜ, ನಿಷ್ಟಾವಂತ ಅಧಿಕಾರಿಗಳು ಇವೆಲ್ಲಾ ಸೇರಿ ಸಂಶಯಕ್ಕೆಡೆಯಿಲ್ಲದಂತೆ ಆನ್ಡಿ ಡುಫ್ರ್ರೆನ್ಸನನ್ನು ೧೯೪೭ರಲ್ಲಿ ಸ್ವಶಾಂಕ್ ಎಂಬ ಅಮೇರಿಕಾದ ಜೈಲಿಗೆ ತಳ್ಳಿತು. ಸಮಾಜ ತನ್ನೊಳಗಿನೊಂದು ಮುಳ್ಳನ್ನು ಕಳೆಯಿತೆಂದು ಅಂದುಕೊಂಡು ನಿಟ್ಟುಸಿರಿಟ್ಟಿತು. ಇಲ್ಲಿಂದ ಆರಂಭವಾಗುತ್ತೆ ಒಂದು ಮಹಾಪಲಾಯನ ಕಥನ ಸ್ವಶಾಂಕ್ ರಿಡೆಂಪ್ಶನ್ ಎನ್ನುವ ಚಿತ್ರದ್ದು. (೧೯೯೪) Shawshank Redemption (1994)

ಡರಬೌನ್ಟ್ ನಿರ್ದೇಶಿತ ಮೊದಲ ಚಿತ್ರವಾದ ಇದು ಆತನ ಆಗಲೇ ಪ್ರಸಿದ್ಧವಾಗಿದ್ದ ಬರವಣಿಗೆ ಹಾಗೂ ಇತರ ಚಿತ್ರನಿರ್ಮಾಣ ಸಂಬಂಧೀ ಕುಶಲತೆಗಳ ಪಟ್ಟಿಗೆ ಇನ್ನೊಂದು ಗರಿಯನ್ನಿಟ್ಟಿತು. ಮಾನವನ ಮೂಲಭೂತ ಭಾವನೆಗಳು ಪರೀಕ್ಷೆಗಿಟ್ಟಾಗ ಹೇಗೆ ಬೇರೆ ಬೇರೆ ರೂಪಗಳಿಂದ ಚಿಮ್ಮಿ ಹೊರಹೊಮ್ಮುತ್ತದೆ ಎನ್ನುವುದು ಈ ಕಥೆಯ ಕಥನ. ನಮ್ಮ ಮನಸ್ಸನ್ನಾವರಿಸಿ ಮುದಕೊಡುವ ಕಥೆಗಳು ಶ್ರೀಸಾಮಾನ್ಯರಿಂದಲ್ಲ (ಸ್ಟೀರಿಯೋ ಟೈಪ್) ಅವರೊಳಗಿನ ಒಬ್ಬೊಬ್ಬ ವಿಶೇಷ ವ್ಯಕ್ತಿಯಿಂದ (ಆರ್ಖಿಟೈಪ್) ಹುಟ್ಟುತ್ತವೆ ಎಂದು ಒಮ್ಮೆ ಓದಿದ್ದೆ. ಆನ್ಡಿ ಡುಫ್ರ್ರೆನ್ಸ್ ಅಂಥಾ ಒಬ್ಬ ಕಥಾನಾಯಕ. ಆತ ತೀರಾ ಸರಳ, ಸಾಮಾನ್ಯ ಸಜ್ಜನ. ಮೇಲ್ನೋಟಕ್ಕೆ ತೀರಾ ಸಾಧಾರಣ ವ್ಯಕ್ತಿ. ಆದರೆ ಪರಿಸ್ಥಿತಿ ಕೂಡಿಬಂದಾಗ ಆವರೆಗೆ ಅಡಗಿದ್ದ ಒಂದು ಅದಮ್ಯ ಶಕ್ತಿ ಹೊರಬಂದು ಪವಾಡಗಳನ್ನು ಆತ ಸಾಧಿಸುತ್ತಾನೆ.  ಮುಂದೆ ಓದಿ »

  • ಸಿನೆಮಾ ವಿಮರ್ಶೆ
~.~
  • Login or register to post comments
  • 786 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Achala Sethu
    ಉ: ಬಹಳ ಕಾಡಿದ ನುಡಿಮುತ್ತು...ಅರ್ಥೈಸುವಿರಾ?
    November 24, 2008 - 12:39am
  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
ಇನ್ನಷ್ಟು


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator