ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › User account

aniljoshi (ಬ್ಲಾಗ್ ಬರಹಗಳು)

ಒಂದಿಷ್ಟು ಸ್ವಗತ, ಒಂದಿಷ್ಟು ಕನ್ನಡ ಶಬ್ದ

February 7, 2008 - 8:15am — aniljoshi

ಸಂಪದದಾಗ ಭಾಷಾದ ಮ್ಯಾಲೆ ಮಸ್ತ ಡಿಸ್ಕಶನ್ ನಡದದ. ಇದನ್ನೆಲ್ಲ ಬಾಜೂಕ ನಿಂತು ನೋಡ್ಲಿಕತ್ತೀನಿ ಇನ್ನ ಹೆಂಗ-ಹೆಂಗ, ಯಾ-ಯಾ ಕಡೆ ಹರಿತದ ವಿಚಾರ ಅಂತ. ಬಾಜೂಕ ನಿಂತು ಅವರೇನಂದ್ರು, ಇವರೇನಂದ್ರು ಅಂತ ನೋಡೊದ್ರಾಗ ಮಜ ಅದ, ಜೊತೀಗೆ ನನ್ನವೇ ಎಷ್ಟೊ ಅಭಿಪ್ರಾಯನ ಪ್ರಶ್ನೆ ಮಾಡ್ಕೊಳ್ಳೊದೂ ನಡದದ. ಇರಲಿ, ಆದರ ಈ ವೀಕೆಂಡಿನ್ಯಾಗ ಒಂದು ಸಣ್ಣ ಟಿಪ್ಪಣಿ ಬರೀಬೇಕು.

ಅಲ್ಲೀತನಕ ಈ ಕೆಳಗಿನ ಕನ್ನಡ ಪ್ರಯೋಗ ನೋಡ್ರಿ. ಇವನ್ನ ಜಗನ್ನಾಥದಾಸರು ಹರಿಕಥಾಮೃತಸಾರದಾಗ ಬಳಸ್ಯಾರ. ಹಂಗ ನೋಡಿದ್ರ ಹರಿಕಥಾಮೃತಸಾರದಾಗ ಬೇಕಾದಷ್ಟು ಸಂಸ್ಕೃತ ಪದ ಅವ. ಜೊತೀಗೆ ಎಷ್ಟು ಛೊಲೊ ಕನ್ನಡ ಬಳಸ್ಯಾರ ನೋಡ್ರಿ.  ಮುಂದೆ ಓದಿ »

  • ಕನ್ನಡ
  • ಖಾಲಿ-ಪುಕಟ್
~.~
  • aniljoshi ರವರ ಬ್ಲಾಗ್
  • 10 ಪ್ರತಿಕ್ರಿಯೆಗಳು
  • 321 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸ್ಟೈನ್ಬೆಕ್ಕನ 'ದಿ ಪರ್ಲ್'; ಒಂದು ಮುತ್ತಿನ ಕಥೆ

January 14, 2008 - 10:39am — aniljoshi

ಹೋದವಾರ ಜಾನ್ ಸ್ಟೈನ್ಬೆಕ್ ಬರೆದ ’ದಿ ಪರ್ಲ’ ಓದಿದೆ. ಸುಮಾರು ೧೧೦ ಪುಟಗಳ ಚಿಕ್ಕ ಪುಸ್ತಕ. ೧೯೪೫ರಲ್ಲಿ ಬರೆದದ್ದು. ಲೈಬ್ರರಿಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳ ಮಾರಾಟದಲ್ಲಿ ೨೫ ಸೆಂಟಿಗೆ ಕೊಂಡ ಪುಸ್ತಕ. ಸರಳ ಕಥೆ, ಅದ್ಭುತ ಎನಿಸುವಂತಹ ನಿರೂಪಣೆ.

ದಿನನಿತ್ಯ ತನ್ನ ಸೊಂಟಕ್ಕೊಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ಸಮುದ್ರದ ತಳಕ್ಕೆ ಇಳಿದು ಅಲ್ಲಿನ ಚಿಪ್ಪುಗಳಲ್ಲಿ ಮುತ್ತು ಹುಡುಕುವ ಕಾಯಕದ ಕೀನೊ ಕಥಾನಾಯಕ. ಯುವಾನ ಅವನ ಹೆಂಡತಿ ಹಾಗೂ ಅವರಿಗೊಬ್ಬ ಮಗ ಕೊಯೊಟಿಟೊ. ಒಂದಾನೊಂದು ದಿನ ಕೊಯೊಟಿಟೊನಿಗೆ ಚೇಳು ಕುಟುಕುತ್ತದೆ. ಕುಟುಕಿದ ಕ್ಷಣವೇ ಯುವಾನ ಚೇಳು ಕುಟುಕಿದ ಸ್ಥಳದಿಂದ ವಿಷವನ್ನು ಹೀರಿ ತೆಗೆಯುವ ಪ್ರಯತ್ನ ಮಾಡುತ್ತಾಳೆ. ಕೊನೆಗೆ ವೈದ್ಯನ ಹತ್ತಿರ ಹೋಗುವದೇ ಒಳ್ಳೆಯದು ಎಂದುಕೊಂಡು ಆ ಊರ ವೈದ್ಯನ ಮನೆಗೆ ಹೋಗುತ್ತಾರೆ. ಇವರ ಹತ್ತಿರ ಕೊಡಲು ಏನೂ ದುಡ್ಡಿಲ್ಲ ಎಂದು ತಿಳಿದುಕೊಂಡ ವೈದ್ಯ ಮನೆಯೊಳಗೇ ಕುಳಿತುಕೊಂಡು ತಾನು ಮನೆಯಲ್ಲಿಲ್ಲ ಎಂದು ಹೇಳಿಸುತ್ತಾನೆ.

ಇಂಥ ಪರಿಸ್ಥಿತಿಯಲ್ಲಿ ಹೇಗಾದರೂ ವೈದ್ಯ ತಮ್ಮ ಮಗನನ್ನು ನೋಡುವಂತಾಗಲಿ, ಆ ವೈದ್ಯನಿಗೆ ಕೊಡಲು ಒಂದು ಮುತ್ತಾದರೂ ಸಿಗಬಹುದೇನೋ ಎಂದುಕೊಂಡು ಅವತ್ತು ಮತ್ತೆ ಸಮುದ್ರಕ್ಕಿಳಿಯುತ್ತಾನೆ. ಅವನ ಅದೃಷ್ಟ, ಎಂದೂ ಕಂಡಿರದಂತಹ ಮುತ್ತೇ ಸಿಗುತ್ತದೆ ಅವತ್ತು. ಕೋಳಿ ಮೊಟ್ಟೆ ಗಾತ್ರದ ಮುತ್ತನ್ನು ನೋಡಿ ಕೀನೊ ಮತ್ತು ಯುವಾನಾಗೆ ಸ್ವರ್ಗವೇ ಸಿಕ್ಕಷ್ಟು ಖುಷಿ. ಈ ದೊಡ್ಡ ಮುತ್ತು ಸಿಕ್ಕ ಕಥೆ ಕ್ಷಣದಲ್ಲಿ ಊರ ತುಂಬೆಲ್ಲ ಹರಡಿ ಆ ಕ್ಷಣದಲ್ಲೆ ಕೀನೋಗೆ ಎಲ್ಲರಿಗೂ ಬೇಕಾದವನಾಗಿಬಿಡುತ್ತಾನೆ. ಹಿತಶತ್ರುಗಳೂ ಹುಟ್ಟಿಕೊಳ್ಳುತ್ತಾರೆ. ಚಿಕ್ಕ ಊರಿನಲ್ಲಿ ಇಂತಹ ವಿಷಯಗಳು ಹೇಗೆ ಹಲವರ ಮನಸ್ಸಿನಲ್ಲಿ ತಮ್ಮ ಸ್ವಾರ್ಥದ ವಿಚಾರಗಳನ್ನು ಪ್ರೇರಿಸುತ್ತವೆ ಎನ್ನುವದು ಬಹಳ ಸಮರ್ಥವಾಗಿ ಚಿತ್ರಿತವಾಗಿದೆ. ಆ ಊರ ಚರ್ಚಿನ ಪಾದ್ರಿಗೆ ಆಗಬೇಕಾದ ಚರ್ಚಿನ ರಿಪೇರಿಗಳ ನೆನಪಾಗುತ್ತದೆ. ಮನೆಯಲ್ಲಿದ್ದೂ ಹೊರಹೋಗಿದ್ದೇನೆ ಎಂದು ಹೇಳಿಸಿದ್ದ ವೈದ್ಯ ಇನ್ನೊಬ್ಬರ ಮುಂದೆ ಕೀನೋನ ಮಗನಿಗೆ ಕುಟುಕಿದ ಚೇಳಿನ ವಿಷಕ್ಕೆ ತಾನು ಮದ್ದು ಮಾಡುತ್ತಿರುವದಾಗಿ ಕೊಚ್ಚಿಕೊಳ್ಳುತ್ತಾನೆ. ಊರ ಬಟ್ಟೆ ಅಂಗಡಿ ಮಾಲೀಕರಿಗೆ ಕೀನೊ ಬಟ್ಟೆ ಕೊಳ್ಳುತ್ತಾನೆ ಎನ್ನುವ ಖುಷಿ. ಚರ್ಚಿನ ಬಾಗಿಲ ಬಳಿ ಕೂಡುವ ಭಿಕ್ಷುಕರಿಗಂತೂ ಒಮ್ಮಿಂದೊಮ್ಮೆಲೆ ಸಾಹುಕಾರನಾದ ಕೀನೊ ಒಳ್ಳೆ ಭಿಕ್ಷೆ ಹಾಕುತ್ತಾನೆ ಎನ್ನುವ ಭಾವನೆಯೇ ಖುಷಿಕೊಡುತ್ತದೆ. ಒಟ್ಟಿನಲ್ಲಿ ಕೀನೊ ಮತ್ತು ಅವನ ಮುತ್ತು ಆ ಮಲಗಿದಂತಹ ಊರಿನಲ್ಲಿ ಒಂದು ಸಂಚಲನವನ್ನೇ ಮಾಡುತ್ತದೆ.  ಮುಂದೆ ಓದಿ »

  • ಪುಸ್ತಕ
~.~
  • aniljoshi ರವರ ಬ್ಲಾಗ್
  • Login or register to post comments
  • 346 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಭಕ್ರಿ ಸಮಾರಾಧನೆ

January 2, 2008 - 8:31am — aniljoshi

(ಇತ್ತೀಚೆಗೆ ಬಹಳ ದಿನಗಳ ನಂತರ ಭಕ್ರಿ (ಜೋಳದ ರೊಟ್ಟಿ) ತಿಂದದ್ದರ ಪರಿಣಾಮ ಈ ಬರಹ - ಸಂಪದದಲ್ಲಿ ಮೊದಲ ಬ್ಲಾಗು ಕೂಡ!)

ಕೆಲವು ದಿವಸಗಳ ಹಿಂದೆ ನಮ್ಮ ಮನೆಯಲ್ಲಿ ಒಂದು ವಾರ ಪೂರ್ತಿ ಭಕ್ರಿ ಸಮಾರಾಧನೆ. ಹೆಚ್ಚು ಕಡಿಮೆ ಎರಡು ವರ್ಷಗಳಿಂದ ಭಕ್ರಿ ರುಚಿ ಕಾಣದ ನಾಲಿಗೆಗೆ ಭಕ್ರಿ ಔತಣ! ಇಲ್ಲಿ ಸ್ಯಾನ್ ಹೋಸೆಯಲ್ಲಿ ನನ್ನ ಹೆಂಡತಿ ಪಲ್ಲವಿ, ಬೆಂಗಳೂರಿನಲ್ಲಿ ಅವಳಣ್ಣ ರಮೇಶ ಮತ್ತು ಭಾರತ ಯಾತ್ರೆಯಿಂದ ಮರಳುತ್ತಿದ್ದ ಮಿತ್ರ ಪ್ರಮೋದ; ಇವರೆಲ್ಲರ coordination ಇಂದಾಗಿ ನನಗೆ ಭಕ್ರಿ ತಿನ್ನುವ ಯೋಗ ಒದಗಿ ಬಂದಿತ್ತು. ಆ ಭಕ್ರಿಗಳೋ ಕಟಿ ರೊಟ್ಟಿಗಳಾಗಿರದೆ ನನ್ನಮ್ಮನ ತೆಳು ಭಕ್ರಿಗಳಂತಿದ್ದು (ಹರವಿನಲ್ಲಿ ಅಮ್ಮನ ಭಕ್ರಿಗಿಂತ ಚಿಕ್ಕವಾಗಿದ್ದರೂ) ತಿನ್ನುತ್ತಿದ್ದಂತೆ ಒಮ್ಮಿಂದೊಮ್ಮೆಲೆ ೧೫-೨೦ ವರ್ಷಗಳಷ್ಟು ಹಿಂದಿನ ಗುಲ್ಬರ್ಗದ ನಮ್ಮ ಮನೆ, ಅಲ್ಲಿ ಅಡಿಗೆ ಮನೆಯಲ್ಲಿ ನೆಲದ ಮೇಲಿಟ್ಟ ಗ್ಯಾಸಿನ ಮುಂದೆ ಕುಳಿತ ಅಮ್ಮ ಜೋಳದ ಹಿಟ್ಟಿನ ಮಿನಿ ಗುಡ್ಡದಲ್ಲಿ ಒಂದು ತಗ್ಗು ಮಾಡಿ, ಅದೇ ಆಗ ಮರಳಿಸಿದ ಬಿಸಿನೀರ ಸುರಿದು, ಕೈ ಖಡಚಿಯಿಂದ ಚಕಚಕನೆ ಕಲಸಿ ಭಕ್ರಿ ಬಡಿಯಲಿಕ್ಕೆ ಸಿದ್ಧವಾಗುತ್ತಿದ್ದ ದೃಶ್ಯ ಕಂಡಾಗ ಪಲ್ಲವಿ ಮಾಡಿದ ಸೌತೆಕಾಯಿ ರಸಪಲ್ಯಕ್ಕೆ ಅಮ್ಮನ ನೆನಪೂ ಸೇರಿ ಮತ್ತಷ್ಟು ರುಚಿಯಾಯಿತು!  ಮುಂದೆ ಓದಿ »

  • ತಿನಿಸು
~.~
  • aniljoshi ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 322 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vidhata
    ಉ: ವಿವೇಕಾನಂದರ ಭಾಷಣ
    October 8, 2008 - 11:17am
  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
ಇನ್ನಷ್ಟು


ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.

— ಉಪನಿಷತ್ತುಗಳು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator