ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › User account

hisushrutha (ಲೇಖನಗಳು)

ಹೊಸ ವರ್ಷದ ಶುಭಾಶಯ

December 29, 2006 - 11:36am — hisushrutha

"ಏಯ್... ಎರಡ್ಸಾವ್ರದ ಆರು ಹೋಗುತ್ತಿದೆ.. ಟಾಟಾ ಮಾಡು ಬಾರೇ..."
"ಎಲ್ಲೇ?"  ಮುಂದೆ ಓದಿ »

  • ಪ್ರಚಲಿತ
~.~
  • Login or register to post comments
  • 607 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೊಸ ವರ್ಷದ ಶುಭಾಶಯ

December 29, 2006 - 11:32am — hisushrutha

NewYearGreeting2007

"ಏಯ್... ಎರಡ್ಸಾವ್ರದ ಆರು ಹೋಗುತ್ತಿದೆ.. ಟಾಟಾ ಮಾಡು ಬಾರೇ..."
"ಎಲ್ಲೇ?"
"ಅದೇ.... ಅಲ್ಲಿ....!"
"ಓಹ್... ಹೊರಟೇಬಿಡ್ತಾ? ನಿನ್ನೆ ಮೊನ್ನೆ ಬಂದಂಗಿತ್ತಲ್ಲೇ.."
"ಬಂದಿದ್ದೂ ಆಯ್ತು ಹೊರಟಿದ್ದೂ ಆಯ್ತು; ಬೇಗಬೇಗ ಟಾಟಾ ಮಾಡೇ..."

* * *

ಧಾನ್ಯ ದಾಸ್ತಾನಿನ ಗೋಡೌನಿನಲ್ಲಿ ಬಂದಿಯಾಗಿದ್ದ ಹೆಗ್ಗಣವೊಂದು ಗೋಡೆಯಲ್ಲಿ ದೊಡ್ಡದೊಂದು ಕನ್ನ ಕೊರೆಯುತ್ತಿದೆ.. ಬೇಗ ಬೇಗ ಕೊರೆ ದೊಡ್ಡಿಲಿಯೇ: ಹೊಸ ವರ್ಷ ಬರುತ್ತಿದೆ...

ಎರಡು ಬಾರಿ ಕೆಮ್ಮಿ, ಗಂಟಲನ್ನು ಶ್ರುತಿಗೊಳಿಸಿ, ಹಾಡಲು ಕುಳಿತಿದ್ದಾನೆ ಗಾಯಕ.. ಪಲ್ಲವಿ ಮುಗಿದು, ಅನುಪಲ್ಲವಿ ಮುಗಿದು, ಇದು ಎಷ್ಟನೇ ಚರಣ..? ಬೇಗ ಬೇಗ ಹಾಡು ಗೆಳೆಯಾ: ಹೊಸ ವರ್ಷ ಬರುತ್ತಿದೆ...

ಮಗುವನ್ನು ಕಾಲ ಮೇಲೆ ಹಾಕಿಕೊಂಡು, 'ಉಶ್‍ಶ್‍ಶ್‍ಶ್ಶ್...' ಎನ್ನುತ್ತಾ ಕುಳಿತಿದ್ದಾಳೆ ತಾಯಿ; ಉಚ್ಚೆಯನ್ನೇ ಮಾಡುತ್ತಿಲ್ಲ ಪಾಪು! ಬೇಗ ಬೇಗ ಉಚ್ಚೆ ಮಾಡು ಮಗೂ: ಹೊಸ ವರ್ಷ ಬರುತ್ತಿದೆ...

ದನದ ಕೆಚ್ಚಲಿಗೆ ನೀರು ಸೋಕಿ, ಮೊಲೆಗಳನ್ನು ತೊಳೆದು, ದೊಡ್ಡ ಕೌಳಿಗೆಯನ್ನಿಟ್ಟುಕೊಂಡು ಕುಳಿತಿದ್ದಾನೆ ಅಪ್ಪ.. ಸೊರೆಯುತ್ತಲೇ ಇಲ್ಲ ದನ! ಬೇಗ ಬೇಗ ಹಾಲು ಕೊಡು ದನವೇ: ಹೊಸ ವರ್ಷ ಬರುತ್ತಿದೆ...

ನ್ಯಾಲೆಯ ಮೇಲೆ ಬಟ್ಟೆಗಳನ್ನು ನೇತುಹಾಕಿ, ಒಣಗುವುದನ್ನೇ ಕಾಯುತ್ತಾ ಕುಳಿತಿದ್ದಾನೆ ರೂಂಮೇಟ್.. ಅಂಡರ್ ವೇರ್ ಒಣಗುವುದಂತೂ ಯಾವಾಗಲೂ ಲೇಟ್! ಬೇಗ ಒಣಗು ಚಡ್ಡಿಯೇ: ಹೊಸ ವರ್ಷ ಬರುತ್ತಿದೆ...

ಶಾಪಿಂಗಿಗೆ ಹೋದ ಗೆಳೆಯ ಸ್ವೀಟು, ಕೇಕು, ಪಟಾಕಿ.. ಎಲ್ಲಾ ತಂದಿದ್ದಾನೆ. ಆದರೆ ಹೊಸ ಕ್ಯಾಲೆಂಡರು ತರುವುದನ್ನೇ ಮರೆತುಬಿಟ್ಟಿದ್ದಾನೆ! ಮತ್ತೆ ಓಡಿಸಿಯಾಗಿದೆ ಪೇಟೆಯೆಡೆಗೆ. ಬೇಗ ಬಾ ಗೆಳೆಯಾ: ಹೊಸ ವರ್ಷ ಬರುತ್ತಿದೆ...

ಭಟ್ಟರು ಗಂಧ ತೇಯ್ದು, ದೇವರನ್ನು ತೊಳೆದು, ಹೂವೇರಿಸಿ, ಕುಂಕುಮ-ಅರಿಶಿನ ಹಚ್ಚಿ, ಊದುಬತ್ತಿ ಬೆಳಗಿ, ಕಾಯಿ ಓಡೆದು, ನೈವೇದ್ಯ ಮಾಡಿ.... ಅಯ್ಯೋ, ಅವೆಲ್ಲಾ ಇರಲಿ ಭಟ್ರೇ, ಬೇಗ ಮಂಗಳಾರತಿ ಮಾಡಿ: ಹೊಸ ವರ್ಷ ಬರುತ್ತಿದೆ...

*

* *

ಅಗೋ.... ಹೊಸ ವರ್ಷ ಬಂದೇಬಿಟ್ಟಿತು..! ಕೊರೆದೂ ಕೊರೆದು ಕೊನೆಗೂ ಗೋಡೆಯಲ್ಲೊಂದು ಸಣ್ಣ ಕಿಂಡಿಯನ್ನು ಮಾಡಿಯೇಬಿಟ್ಟಿದೆ ಹೆಗ್ಗಣ. ಆ ಸಣ್ಣ ಕಿಂಡಿಯಿಂದಲೇ ತೂರಿ ಬರುತ್ತಿದೆ ಹೊಸ ವರ್ಷದ ಆಶಾಕಿರಣ; ಹೊಸ ಬೆಳಕು. ಮಗು ಹಾರಿಸಿದ ಉಚ್ಚೆ ಇಡೀ ಭುವಿಯನ್ನೇ ಒದ್ದೆ ಮಾಡಿದೆ. ಕೌಳಿಗೆ ತುಂಬಿದರೂ ಮುಗಿದಿಲ್ಲ ದನದ ಕೆಚ್ಚಲಿನ ಹಾಲು. ಅಪ್ಪ ಕೂಗುತ್ತಿದ್ದಾನೆ: 'ಏಯ್, ಇನ್ನೊಂದು ಗಿಂಡಿ ತಗಂಬಾರೇ..' ಅಮ್ಮ ಅಡುಗೆ ಮನೆಯಿಂದಲೇ ಉತ್ತರಿಸುತ್ತಿದ್ದಾಳೆ: 'ಸಾಕು ನಮಗೆ; ಉಳಿದಿದ್ದನ್ನು ಕರುವಿಗೆ ಬಿಡಿ.' ಒಣಗಿದ ಚಡ್ಡಿಯ ಮೇಲೆ ಹೊಸ ಪ್ಯಾಂಟೇರಿಸುತ್ತಿದ್ದಾನೆ ರೂಂಮೇಟ್. ಗೆಳೆಯನಂತೂ ಓಡೋಡಿ ಬರುತ್ತಿದ್ದಾನೆ. ಅವನ ಕೈಯಲ್ಲಿ ಪೂರ್ತಿ ಮುನ್ನೂರಾ ಅರವತ್ತೈದು ದಿನಗಳುಳ್ಳ ಕ್ಯಾಲೆಂಡರಿದೆ. ದೇವರಿಗೇ ಆಶ್ಚರ್ಯವಾಗುವಷ್ಟು ದಕ್ಷಿಣೆ ಬಿದ್ದಿದೆ ಭಟ್ಟರ ಮಂಗಳಾರತಿ ಹರಿವಾಣದಲ್ಲಿ.

ಎಲ್ಲರಿಗೂ ಖುಷಿ; ಎಲ್ಲರಿಗೂ ಸಂಭ್ರಮ; ಎಲ್ಲರಿಗೂ ಸಡಗರ.. ಏಕೆಂದರೆ, ಹೊಸ ವರ್ಷ ಬಂದಿದೆ! ಈ ಮಧ್ಯೆ, ಹಾಡುತ್ತಿರುವವನನ್ನು ಎಲ್ಲರೂ ಮರೆತೇ ಬಿಟ್ಟಿದ್ದಾರೆ. ಆತ ಹಾಡುವುದನ್ನು ಒಂದು ಕ್ಷಣ ನಿಲ್ಲಿಸಿಬಿಟ್ಟಿದ್ದಾನೆ. ತಕ್ಷಣ ಎಲ್ಲರಿಗೂ ಅರಿವಾಗಿದೆ. ಎಲ್ಲಾ ಅವನ ಬಳಿ ಹೋಗಿ ಹೇಳುತ್ತಿದ್ದಾರೆ:

"ಹಾಡು ಗೆಳೆಯಾ, ಮುಂದುವರೆಸು. ಹಾಡು ಹಳೆಯದಾದರೇನು, ಭಾವ ಹೊಸತಿದ್ದರೆ ಸಾಕು.."

ಹೊಸ ವರ್ಷದ ಹೊಸ ಕ್ಯಾಲೆಂಡರು ನಿಮ್ಮ ಬದುಕಿನ ಹಾಡಿಗೆ - ಹಾದಿಗೆ ಹೊಸ ಭಾವ ಬೆರೆಸಲಿ ಎಂದು ಹಾರೈಸುತ್ತೇನೆ.

ನೂತನ ವರ್ಷದ ಶುಭಾಶಯಗಳು.

~.~
  • Login or register to post comments
  • 275 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಾದಲೀಲೆ: ಬೇಂದ್ರೆ ಕಾವ್ಯ ವಾಚನ ಕಾರ್ಯಕ್ರಮದ ವರದಿ

November 27, 2006 - 11:45am — hisushrutha

'ದೀಪದ ಮಲ್ಲಿ' ಎಂಬ ನನ್ನ ಪದ್ಯದಲ್ಲಿ 'ಮೌನ'ದ ಮಾತು ಬರುತ್ತದೆ. ಆ ದೀಪದ ಮಲ್ಲಿ ನನ್ನ ಹತ್ತಿರಿರುವ ಒಂದು ಗೊಂಬೆ; ಶಿವಮೊಗ್ಗದಲ್ಲಿ ಒಬ್ಬರು ಅದನ್ನು ನನಗೆ ಕೊಟ್ಟರು. ಕೈಯಲ್ಲಿ ಒಂದು ಆರತಿ ಹಿಡಕೊಂಡು ನಿಂತುಬಿಟ್ಟಿದೆ 'ದೀಪದ ಮಲ್ಲಿ'ಯ ಗೊಂಬೆ! ಅದಕ್ಕೆ ನಾನು ಕೇಳಿಯೇ ಕೇಳುತ್ತೇನೆ: "ಯಾರ ಸಲುವಾಗಿ ಈ ಪ್ರಣತಿಯನ್ನು ಹಿಡಿದು ನಿಂತುಬಿಟ್ಟಿದ್ದೀಯಾ? ಒಳಗೆ ಎಣ್ಣೆ ಇಲ್ಲ, ಬತ್ತಿ ಇಲ್ಲ, ದೀಪವಂತೂ ಇಲ್ಲವೇ ಇಲ್ಲ! ಆದರೆ ನಿನ್ನ ಮುಖದ ಮೇಲೆ ಸ್ಮಿತ ಇದೆಯಲ್ಲ; ಆ ಸ್ಮಿತದಲ್ಲಿ ಎಲ್ಲ ಇದೆ- ಆ ದೀಪ, ಆ ಸ್ನೇಹ, ಆ ಪ್ರಣತಿ, ಆ ವರ್ತಿಕಾ. ಈ ಆರತಿ ಯಾರಿಗೆ ಎತ್ತಿರುವೆ, ತಾಯಿ?" ಹೀಗೆ ಕೇಳಿದರೆ, ಅದು ಕೊನೆಗೆ ಹೇಳುತ್ತದೆ: "ಶ್...! ನಾನು ಹ್ಯಾಂಗ ಸುಮ್ಮನಿದ್ದೀನಿ, ಹಾಗೆ ಸ್ವಲ್ಪ ಸುಮ್ಮನಿರು." ಸುಮ್ಮನಿದ್ದಾಗ ಕಾಣುವಂಥಾದ್ದು- ಆ ಸ್ನೇಹ, ಆ ಪ್ರಣತಿ, ಆ ವರ್ತಿಕಾ, ಆ ದೀಪಶಿಖೆ!  ಮುಂದೆ ಓದಿ »

  • ಸುದ್ದಿ ಸ್ವಾರಸ್ಯ
~.~
  • 2 ಪ್ರತಿಕ್ರಿಯೆಗಳು
  • 671 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

'ಸರ್ವಸ್ವ'ದ ಬಗ್ಗೆ ಸರ್ವೇಸಾಮಾನ್ಯನ ಒಂದು ಸರ್ವೆ!

September 26, 2006 - 12:01pm — hisushrutha

ಇಷ್ಟೊತ್ತಿನ ತನಕ ಗೆಳೆಯ ಸಂತೋಷನೊಂದಿಗೆ ಮಾತನಾಡುತ್ತಿದ್ದೆ. ಸಂತೋಷ ಮತ್ತು ನಾನು ಆಗೀಗೊಮ್ಮೆ ಫೋನ್ ಮಾಡಿಕೊಂಡು ಗಂಟೆಗಟ್ಟಲೆ ಮಾತನಾಡುವ ಸ್ನೇಹಿತರು. ನಮ್ಮ ಮಾತು ತೀರಾ ಭಾವನಾತ್ಮಕವಾಗಿರೊತ್ತೆ. ಸಾಮಾನ್ಯವಾಗಿ ಅದೊಂದು ಚರ್ಚೆಯೇ ಆಗಿರೊತ್ತೆ. ಯಾವುದೋ ಒಂದು topic ಅವನನ್ನು ಕಾಡಲಾರಂಭಿಸಿದಾಗ ಅವನು ನನಗೆ call ಮಾಡುತ್ತಾನೆ. ಆಮೇಲೆ ನಾವಿಬ್ಬರೂ ಗಂಟೆಗಟ್ಟಲೆ ಮಾತನಾಡುತ್ತೇವೆ. ನಮ್ಮ ಬಹಳಷ್ಟು ಚರ್ಚೆಗಳು ಎಲ್ಲೋ ಶುರುವಾಗಿ ಎಲ್ಲೋ ಹೋಗಿ ಮುಗಿಯುತ್ತವೆ. ಕೆಲವೊಮ್ಮೆ ಅವು right way ನಲ್ಲೇ ಸಾಗುತ್ತವೆ. ಅನೇಕ ಸಲ ಚರ್ಚೆ ದಾರಿ ತಪ್ಪುತ್ತದೆ. ನನ್ನ ಕೆಲ concept ಗಳನ್ನು ಆತ ಒಪ್ಪುವುದಿಲ್ಲ; ಹಾಗೆಯೇ ಅವನ ಕೆಲ ವಾದಗಳನ್ನು ನಾನು ಅಲ್ಲಗಳೆಯುತ್ತೇನೆ. ಒಟ್ಟಿನಲ್ಲಿ ಕೊನೆಯಲ್ಲಿ ಇಬ್ಬರೂ satisfy ಆಗದೇ ಮಾತು ಮುಗಿಸುತ್ತೇವೆ.  ಮುಂದೆ ಓದಿ »

  • ಚಿಂತನೆ
~.~
  • Login or register to post comments
  • 903 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಒಂದು ಪೂರ್ಣ ಕತೆ; ಒಂದು ಅಪೂರ್ಣ ಕತೆ..!

September 18, 2006 - 6:06pm — hisushrutha

ಕೊಕ್ಕರೆ ಕಥೆ

 ಮುಂದೆ ಓದಿ »

ಒಮ್ಮೆ ಕೊಕ್ಕರೆಯೊಂದು ಕೆರೆಯಲ್ಲಿ ಮೀನುಗಳನ್ನು ಹೆಕ್ಕಿ ತಿನ್ನುತ್ತಿರುವಾಗ ಅಲ್ಲಿಗೆ ನರಿಯೊಂದು ಬಂತು. ಕೊಕ್ಕರೆ ಮೀನುಗಳನ್ನು ತಿನ್ನುತ್ತಾ ಸುಗ್ರಾಸ ಭೋಜನದಲ್ಲಿ ತೊಡಗಿರುವುದನ್ನು ಕಂಡು ನರಿಗೆ ಆಶೆಯಾಯಿತು. ಅದು ಕೊಕ್ಕರೆಯೊಂದಿಗೆ ಸ್ನೇಹ ಸಂಪಾದಿಸಲು ನೋಡಿತು. 'ಕೊಕ್ಕರೆಯಣ್ಣಾ ಕೊಕ್ಕರೆಯಣ್ಣಾ, ನೀನು ಅದೆಷ್ಟು ಸುಂದರವಾಗಿದ್ದೀಯೆ! ನಿನ್ನ ಮೈಬಣ್ಣ ಅದೆಷ್ಟು ಬಿಳಿ! ಕೋಮಲವಾದ ನಿನ್ನ ಮೈಮಾಟ, ನೀಳವಾದ ಕತ್ತು, ಊದ್ದ-ಚೂಪು ಕೊಕ್ಕು.. ಆಹಾ! ನೀನು ನಿಜಕ್ಕೂ ಸುಂದರಾಂಗ! ನೀನು ನೆಲದ ಮೇಲೆ ಓಡಬಲ್ಲೆಯಷ್ಟೇ ಅಲ್ಲ, ನೀರಿನಲ್ಲಿ ಈಜಬಲ್ಲೆ, ಆಕಾಶದಲ್ಲಿ ಹಾರಬಲ್ಲೆ.. ನನಗೋ, ಆ ಅದೃಷ್ಟ ಇಲ್ಲ...' ಎಂಬುದಾಗಿ ಕೊಕ್ಕರೆಯನ್ನು ಹೊಗಳಲು ಪ್ರಾರಂಭಿಸಿತು. ಕೊಕ್ಕರೆ ನರಿಯ ಹೊಗಳಿಕೆ ಮರುಳಾಯಿತು. ನರಿ ಮತ್ತು ಕೊಕ್ಕರೆ ಸ್ನೇಹಿತರಾದರು. ನರಿ ಹಸಿದಿರುವುದನ್ನು ತಿಳಿದ ಕೊಕ್ಕರೆ, ಒಂದಷ್ಟು ಮೀನುಗಳನ್ನು ಹೆಕ್ಕಿ ನರಿಗೆ ತಿನ್ನಲು ದಡಕ್ಕೆ ಹಾಕಿತು.
  • ಸಣ್ಣ ಕಥೆ
~.~
  • Login or register to post comments
  • 547 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
12ಮುಂದಿನ ›ಕೊನೆಯ »

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vidhata
    ಉ: ವಿವೇಕಾನಂದರ ಭಾಷಣ
    October 8, 2008 - 11:17am
  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
ಇನ್ನಷ್ಟು


"ಅಮ್ಮ ಯಾವಾಗ್ಲೂ ಹೇಳ್ತಿದ್ರು, ಜೀವನವೆಂದರೆ ಚಾಕ್‌ಲೇಟಿನ ಡಬ್ಬಿಯಂತೆ, ನಿನಗೆ ಯಾವುದು ಸಿಗುತ್ತೋ ಗೊತ್ತಿಲ್ಲ"

— ಫಾರೆಸ್ಟ್ ಗಂಪ್, ಆಂಗ್ಲ ಸಿನೆಮಾ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator