shreedevikalasad (ಲೇಖನಗಳು)
ಜಯಮ್ಮ ಮತ್ತು ಜನರೇಟರ್ ಶ್ರುತಿ
July 10, 2008 - 4:54pm — shreedevikalasadಕಪ್ಪು ಎರಡರ ಶ್ರುತಿ ಹಿಡಿದೇ ಇತ್ತು ಜನರೇಟರ್
ಯಾರದೋ ಒತ್ತಾಯಕ್ಕೆಂಬಂತೆ ಆಗೊಮ್ಮೆ ಈಗೊಮ್ಮೆ ತೂಗುತ್ತಿದ್ದವು ಎಲೆಗಳು, ಅವುಗಳಿಗಂಟಿದ ಕೊಂಬೆಗಳೂ... ನೋಡಲು ಬಂದ ಹುಡುಗನ ಮುಂದೆ ಕಾಫಿ ಟ್ರೇ ಹಿಡಿದು ಮನಸ್ಸಿಲ್ಲದ ಮನಸ್ಸಿನಿಂದ ಆರ್ಟಿಫೀಶಿಯಲ್ ಸ್ಮೈಲ್ ಕೊಡುವ ಹುಡುಗಿಯ ಹಾಗೆ. ಈ ನೀರಸ ಪ್ರತಿಕ್ರಿಯೆಗೋ ಏನೋ ಮುನಿಸಿಕೊಂಡು, ಮರ ಬಿಟ್ಟು ಕಟ್ಟಡದ ನೆತ್ತಿ ಏರಿದ್ದವು ಒಂದಿಷ್ಟು ಮೈನಾ, ಎಂಟ್ಹತ್ತು ಕಾಗೆಗಳು. ಚಲಿಸುವುದೇ ನಮ್ಮ ಧರ್ಮ ಕಣಯ್ಯಾ ಎಂದು ಭುಜ ತಟ್ಟಿ ಹೇಳುತ್ತಿತ್ತು ಬೂದುಬಣ್ಣದ ಮೋಡ ಬಿಳಯ ಮೋಡಕ್ಕೆ. ಆದರೂ ಆ ಬಿಳಿಯ ಮೋಡ ತಿರುತಿರುಗಿ ಮರವನ್ನ ಮೈನಾ-ಕಾಗೆಗಳನ್ನ, ಶ್ರುತಿ ಹಿಡಿದಿರುವ ಜನರೇಟರ್‌ನನ್ನ ನೋಡುವುದ ಮರೆಯಲಿಲ್ಲ ಮರೆಯಾಗುವತನಕ. ಹಗಲಿಗೆ ಹೆಗಲು ಕೊಡುವವನು ಅದ್ಯಾಕೋ ಏನೋ ತುಸು ಲೇಟಾಗಿಯೇ ಹಾಜರಾಗಿದ್ದ ಶಿಫ್ಟಿಗೆ. ಅದು ನಿದ್ದೆಗಣ್ಣಲ್ಲೇ. ಕನಸು-ಕನವರಿಕೆ ಗುಂಗಲ್ಲೇ. ಮನಸೊಲ್ಲದ ಮನಸಿನಿಂದ. ಮೊನಾಟನಸ್ ರೂಟಿನ್ ಲೈಫಿನಿಂದ.
ಜನರೇಟರ್ ಕಪ್ಪು ಎರಡರ ಶ್ರುತಿಯಲ್ಲೇ ಇತ್ತು...
ತುರುಕಿದ ಮಂತ್ರವನ್ನೇ ತಿರುಚಿ ತಿರುಚಿ ಪಟಪಟಿಸುತ್ತ, ಗೋಡೆಗೆ ಬೆನ್ನಂಟಿಸಿಕೊಂಡ ಟಿವಿ ಪೆಟ್ಟಿಗೆಗಳ ಸಾಲು ಕಾಲಾಯ ತಸ್ಮೈನ್ನಮಃ ಎನ್ನುತ್ತಿದ್ದವು ; ರಾಹುಲ್ ಗಾಂಧಿ ದಾಲ್-ಚಾವಲ್ ತಿಂದರೆ ಬ್ರೇಕಿಂಗ್! ಸಿಡಿದ ಒಂದೆರಡು ಮಳೆಹನಿಯಿಂದ ಬಿಗ್‌ಬಿಗೆ ಕೋಲ್ಡ್ ಅಟ್ಯಾಕ್ ಫ್ಲ್ಯಾಶ್! ಬೆಚ್ಚಗೆ ಕಾಲಸಂದಿಯೊಳಗೆ ಮುಖ ಮುಚ್ಚಿಕೊಂಡು ಮಲಗಬೇಕಿದ್ದ ಬೆಕ್ಕು ಸಜ್ಜಾ ಏರಿ ಹದಿನೈದು ಗಂಟೆಗಳಾದರೂ ಕೆಳಗಿಳಿಯದಿದ್ದುದು ಸ್ಪೆಶಲ್!
ಕಪ್ಪು ಎರಡರ ಶ್ರುತಿ ಹಿಡಿದ ಜನರೇಟರ್ ಯಾಕೋ ಒಂದರ ಶ್ರುತಿಗೆ ಇಳಿದ ಹಾಗಿತ್ತು... ಮುಂದೆ ಓದಿ »








RSS: