ದೇವರು, ಭಕ್ತಿ, ನಂಬಿಕೆ, ಜ್ಯೋತಿಷ್ಯ, ಪ್ರಾರ್ಥನೆ, ನಮಾಜು, ವಿಧ ವಿಧದ ಪೂಜೆ, ಹೋಮ ಹವನ, ತೀರ್ಥಯಾತ್ರೆ, ಮೆಕ್ಕಾ ಪ್ರವಾಸ, ವ್ಯಾಟಿಕನ್ ಭೇಟಿ, ಕಾಶಿ ಯಾತ್ರೆ ಇತ್ಯಾದಿಗಳನ್ನು ಅತ್ಯಂತ ಶ್ರದ್ದೆ ಪ್ರಾಮಾಣಿಕತೆ ನಿಷ್ಠೆಯಿಂದ ನೀವು ನೆರವೇರಿಸಿದರೆ ನಿಮಗೆ ಒಂದಷ್ಟು ಮಾನಸಿಕ ನೆಮ್ಮದಿ ಆತ್ಮವಿಶ್ವಾಸ ಮತ್ತು ಸಂಕಷ್ಟ ಸಮಯದಲ್ಲಿ ಸ್ವಲ್ಪ ಧೈರ್ಯ ದೊರೆಯಬಹುದು ಅಥವಾ ದೊರೆಯುತ್ತದೆ. ಇದು ಸಾರ್ವತ್ರಿಕವಲ್ಲ. ಅವರವರ ದೃಷ್ಟಿಕೋನ, ಸಂದರ್ಭ, ಕಾಕಾತಳೀಯ, ಆಯಾ ದೇಶದ ಪರಿಸ್ಥಿತಿ ಅವಲಂಬಿಸಿರುತ್ತದೆ. ಆದರೆ ಇದಕ್ಕೆ ಭಿನ್ನವಾಗಿ…
ದೇವರು ಎಂಬ ಯಾವ ವ್ಯಕ್ತಿ ಅಥವಾ ಶಕ್ತಿಯೂ ಇಲ್ಲ, ಯಾವುದೇ ಅತಿಮಾನುಷ ಪ್ರಭಾವ ಅಸ್ತಿತ್ವದಲ್ಲಿ ಇಲ್ಲ. ಇರುವುದು ಸ್ವಾಭಾವಿಕ ಸೃಷ್ಟಿ ಮಾತ್ರ. ಗಾಳಿ ನೀರು ಬೆಳಕು ಭೂಮಿ ಆಹಾರ ಪರಿಸರ ಜೀವಿಗಳು ಸಂವಿಧಾನಗಳು ಇತ್ಯಾದಿ. ನಮ್ಮ ಎಲ್ಲಾ ಒಳಿತು ಕೆಡಕುಗಳು ನಾವು ಹುಟ್ಟಿದ ಪ್ರದೇಶ, ಅಲ್ಲಿನ ಒಟ್ಟು ವಾತಾವರಣ, ರಾಜಕೀಯ ಸಾಮಾಜಿಕ ವ್ಯವಸ್ಥೆ, ತಂದೆ ತಾಯಿಗಳ ಗುಣಮಟ್ಟ, ನಮ್ಮ ದೇಹ ಮತ್ತು ಮನಸ್ಸಿನ ಸಾಮರ್ಥ್ಯ ಇವುಗಳನ್ನೇ ಅವಲಂಬಿಸಿರುತ್ತದೆ. ಯಾವುದೇ ಹೊರಗಿನ ದೈವತ್ವದ ಶಕ್ತಿ ನಮ್ಮ ಮೇಲೆ ನಿಯಂತ್ರಣ ಹೊಂದಿಲ್ಲ. ನಮ್ಮ ಎಲ್ಲಾ ಕಷ್ಟಗಳು ಅಂದರೆ ಮುಖ್ಯವಾಗಿ ಬಡತನ ನಿರುದ್ಯೋಗ ವಿವಾಹ ಆಗದಿರುವುದು ಅನಾರೋಗ್ಯ ಅಪಘಾತ ಅನಕ್ಷರತೆ, ಅಕಾಲಿಕತೆ, ಕೌಟುಂಬಿಕ ಕಲಹ, ಸೋಲು, ನಷ್ಟ.
ಹಾಗೆಯೇ, ಅಧಿಕಾರ, ಶ್ರೀಮಂತಿಕೆ, ಜನಪ್ರಿಯತೆ, ಸಾಧನೆ, ಯಶಸ್ಸು ಎಲ್ಲವೂ ನಮ್ಮ ಒಟ್ಟು ಸಾಮಾಜಿಕ ವ್ಯವಸ್ಥೆಯ ಮತ್ತು ನಮ್ಮ ಸಾಮರ್ಥ್ಯದ ಪ್ರತಿಫಲನ, ಅದನ್ನು ಅಗೋಚರ ಶಕ್ತಿ ನಿಯಂತ್ರಿಸುತ್ತಿಲ್ಲ. ನಾವೇ ಸ್ವತಃ ನಮ್ಮ ಸಂಪೂರ್ಣ ಶಕ್ತಿ ಸಾಮರ್ಥ್ಯ ವಿವೇಚನೆ ಬಳಸಿ ಇದನ್ನು ನಿರ್ವಹಿಸಬೇಕು. ಕೆಲವೊಮ್ಮೆ ಯಶಸ…
ಮುಂದೆ ಓದಿ...