ಆವ ರೋಗವೊ ಎನಗೆ ದೇವ ಧನ್ವಂತ್ರಿ
ಬರಹ
ಆವ ರೋಗವೊ ಎನಗೆ ದೇವ ಧನ್ವಂತ್ರಿ |ಪ|
ಸಾವಧಾನದಿ ಎನ್ನ ಕೈ ಪಿಡಿದು ನೋಡಯ್ಯ |ಅ ಪ|
ಹರಿಮೂರ್ತಿಗಳು ಕಾಣಿಸವು ಎನ್ನ ಕಂಗಳಿಗೆ
ಹರಿಯ ಕೀರ್ತನೆಯು ಕೇಳಿಸದೆನ್ನ ಕಿವಿಗೆ
ಹರಿ ಮಂತ್ರ ಸ್ತೋತ್ರ ಬಾರದು ಎನ್ನ ನಾಲಿಗೆಗೆ
ಹರಿ ಪ್ರಸಾದವು ಜಿಹ್ವೆಗೆ ಸವಿಯಾಗದಯ್ಯ 1
ಹರಿ ಪಾದ ಸೇವೆಗೆನ್ನ ಹಸ್ತಗಳು ಚಲಿಸವು
ಗುರುಹಿರಿಯರಂಘ್ರಿಗೆ ಶಿರ ಬಾಗದು
ಹರಿಯ ನಿರ್ಮಾಲ್ಯವಾಘ್ರಾಣಿಸದು ನಾಸಿಕವು
ಹರಿ ಯಾತ್ರೆಗಳಿಗೆನ್ನ ಕಾಲೇಳದಯ್ಯ 2
ಅನಾಥಬಂಧು ಗೋಪಾಲವಿಠಲರೇಯ
ಎನ್ನ ಭಾಗ್ಯದ ವೈದ್ಯ ನೀನೆ ಆ
ದಿ ಅನಾದಿ ಕಾಲದ ಭವರೋಗ ಕಳೆಯಯ್ಯ
ನಾನೆಂದಿಗೂ ಮರೆಯೆ ನೀ ಮಾಡಿದುಪಕಾರ
-ಗೋಪಾಲದಾಸರು