ಊಟದ ಬಳಿಕ ಅಥವಾ ನಡುವೆ ನೀರು ಕುಡಿತೀರಾ?

ಊಟದ ಬಳಿಕ ಅಥವಾ ನಡುವೆ ನೀರು ಕುಡಿತೀರಾ?

ಸಾಮಾನ್ಯವಾಗಿ ಊಟವಾದ ಬಳಿಕ ಅಥವಾ ಊಟ ಮಾಡುವಾಗ ಬಹಳಷ್ಟು ಮಂದಿಗೆ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಈ ಅಭ್ಯಾಸವು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ. ಕೆಲವರು ಆರೋಗ್ಯಕರವಾಗಿ ಜೀವನ ನಡೆಸಿ ಆರೋಗ್ಯಕರವಾದ ಆಹಾರ ಪದಾರ್ಥಗಳನ್ನು ತಿನ್ನುತ್ತಿದ್ದರೂ ಕೂಡ ದೇಹದ ತೂಕದ ಮೇಲೆ ಮಾತ್ರ ನಿಯಂತ್ರಣ ಹೊಂದಿರುವುದಿಲ್ಲ. ಇದಕ್ಕೆ ಪ್ರಮುಖ ಕಾರಣವೆಂದರೆ ಅವರು ಆಹಾರ ತಿನ್ನುವಾಗ ಮಧ್ಯ ಮಧ್ಯ ನೀರು ಕುಡಿಯುವುದು. ಆದರೆ ಊಟವಾದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ, ಚರ್ಮ ಮತ್ತು ದೇಹದ ಇತರ ಭಾಗಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಊಟವಾದ ತಕ್ಷಣ ನೀರು ಕುಡಿಯುವುದರಿಂದ ಆಗುವ ಹಾನಿಯ ಬಗ್ಗೆ ತಿಳಿಯೋಣ. ಊಟದ ಜೊತೆ ನೀರು ಕುಡಿಯುವುದರಿಂದ ದೇಹದಲ್ಲಿನ ಪೋಷಕಾಂಶಗಳನ್ನು ಹೀರಿಕೊಳ್ಳುವಲ್ಲಿ ತೊಂದರೆ ಉಂಟಾಗುತ್ತದೆ. ಊಟವಾದ ತಕ್ಷಣ ಅಥವಾ ಊಟದ ಜೊತೆಗೆ ನೀರು ಕುಡಿಯುವುದರಿಂದ ಮೊಡವೆಗಳು, ಕಲೆಗಳು ಇತ್ಯಾದಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು. ಊಟದ ಜೊತೆ ನೀರು ಕುಡಿಯುವ ಅಭ್ಯಾಸವಿದ್ದರೆ ಕೂಡಲೇ ಈ ಅಭ್ಯಾಸವನ್ನು ಬದಲಿಸಿಕೊಳ್ಳಿ. ಏಕೆಂದರೆ ಊಟದ ಜೊತೆಗೆ ನೀರು ಕುಡಿಯುವುದರಿಂದ ದೇಹದಲ್ಲಿ ಕ್ಯಾಲೋರಿಗಳ ಹೀರಿಕೊಳ್ಳುವಿಕೆಯನ್ನು ಹೆಚ್ಚಿಸುತ್ತದೆ, ಇದರಿಂದಾಗಿ ತೂಕವು ವೇಗವಾಗಿ ಹೆಚ್ಚಾಗುತ್ತದೆ. ಆಹಾರದ ಜೀರ್ಣಕ್ರಿಯೆಗೆ ನೀರು ಅಡ್ಡಿಯಾಗುವುದರಿಂದ ಊಟದ ಜೊತೆಗೆ ನೀರು ಕುಡಿಯುವುದರಿಂದ ಮಲಬದ್ಧತೆ ಉಂಟಾಗುತ್ತದೆ. ಊಟದ ಜೊತೆ ಅಥವಾ ಊಟವಾದ ನಂತರ ತಕ್ಷಣ ನೀರು ಕುಡಿಯುವವರಲ್ಲಿ ಕೀಲು ನೋವು, ದೇಹದ ದೌರ್ಬಲ್ಯ, ಆಯಾಸ ಇತ್ಯಾದಿ ಆರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಊಟವಾದ ತಕ್ಷಣ ನೀರು ಕುಡಿಯುವುದು ಅಥವಾ ಊಟದ ಜೊತೆ ನೀರು ಕುಡಿಯುವುದರಿಂದ ಜೀರ್ಣಾಂಗದಲ್ಲಿರುವ ಕಿಣ್ವಗಳು ದುರ್ಬಲಗೊಂಡು ಆಹಾರ ಸರಿಯಾಗಿ ಜೀರ್ಣವಾಗದೆ ಗ್ಯಾಸ್, ಹೊಟ್ಟೆ ನೋವು ಮತ್ತು ಅಜೀರ್ಣಕ್ಕೆ ಕಾರಣವಾಗುತ್ತದೆ. ಊಟವಾದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ನಿಧಾನಗೊಳಿಸುತ್ತದೆ. ಇದು ದೀರ್ಘಾವಧಿಯಲ್ಲಿ ದೊಡ್ಡ ಹಾನಿಯನ್ನುಂಟು ಮಾಡುತ್ತದೆ.

(ಆಧಾರ)

ಚಿತ್ರ ಕೃಪೆ: ಅಂತರ್ಜಾಲ ತಾಣ