ಕನ್ನಡದ ನುಡಿಮುತ್ತುಗಳು

ಕನ್ನಡದ ನುಡಿಮುತ್ತುಗಳು

ಬರಹ

ಸಾಲ ಕೊಳ್ಳುವಾಗ ಒಂದುರಾಗ, ಸಾಲ ಹೊಳ್ಳಿ ಕೊಡುವಾಗ ನಾನಾರಾಗ

ಬಾಳಿಬದುಕಿದವ ಕಲಿ(=ವಿದ್ಯೆ)ಕಲಿತ, ಬಾಳಲಾರದವ ಪಾಠ ಕಲಿತ

ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?

ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ

ಎತ್ತ ಹೋದರೂ ಬಿಡದು ಒತ್ತಿ ಕಾಡುವ ವಿಧಿ

ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ

ಬೆನ್ನಹಿಂದೆ ಬಿದ್ದು ಬನ್ನ ಪಟ್ಟ

ಬಡವನಿಗೆ ಉಳಿದಷ್ಟೆ ಅಭಿಮಾನ

ಬಡವ ನೀ ಸೆಣಸಿ ಕೆಡಬೇಡ

ಎಚ್ಚರಿಕೆ ಇಲ್ಲದೆ ಹರಕೆಯ ಕುರಿಯಾದ

ಬಂಧುಗಳಿಲ್ಲದಿರೊ ಬಡತನ ಎಂದಿಗೂ ಬೇಡ

ರಸಿಕನ ನುಡಿ ತಿಂಗಳ ಬೆಳಕಿನಂತೆ

ಎಂಜಲ ತಿಂದರೂ ಅಂಜದೆ ತಿನ್ನು

ಅಂಜುತ್ತಾ ಅಳುಕುತ್ತಾ ತಿಂದ ಅಮೃತ ನಂಜು

ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು

ಗಂಧದ ಮರವನ್ನು ಸುಟ್ಟು ಬೂದಿಯ ತಂದು ಪೂಸಿದ

ಜೀವ ಜೀವವ ತಿಂದು ಜೀವಿಸುತಿದೆ ಜಗವೆಲ್ಲ

ನಾ ಬಲ್ಲೆ ಅನ್ನೊ ಮಾತು ಎಲ್ಲರಿಗು ಸಲ್ಲದು