ಕನ್ನಡವೇ ಸತ್ಯ ಕನ್ನಡವೇ ನಿತ್ಯ

ಕನ್ನಡವೇ ಸತ್ಯ ಕನ್ನಡವೇ ನಿತ್ಯ

ಬರಹ

ರಾಷ್ಟ್ರ ಕವಿ ಕುವೆಂಪುರವರ ಈ ಕವಿತೆಯಲ್ಲಿ ಕನ್ನಡ ಕಂಪು ಎಷ್ಟು ಚೆನ್ನಾಗಿ ಮೂಡಿಬಂದಿದೆ.  ಕನ್ನಡ ನಾಡಿನ ಸೊಗಸನ್ನು ಕವಿ ಕುವೆಂಪುರವರು ಕನ್ನಡಿಗರ ಮನ ತಲುಪಿ ಕನ್ನಡದ ಅಭಿಮಾನ ಮೊಳಗಲಿ ಎಂಬುದು ಅವರ ಆಶಯ..

ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಕನ್ನಡ ಗೋವಿನ ಓ ಮುದ್ದಿನ ಕರು
ಕನ್ನಡತನವೊಂದಿದ್ದರೆ ನೀ ನಮ್ಮಗೆ ಕಲ್ಪತರು
ಕನ್ನಡವೇ ಸತ್ಯ ಕನ್ನಡವೇ ನಿತ್ಯ

ನೀ ಮುಟ್ಟುವ ನೆಲ ಅದೆ ಕರ್ನಾಟಕ
ನೀನೇರುವ ಮಲೆ ಸಹ್ಯಾದ್ರಿ
ನೀ ಮುಟ್ಟುವ ಮರ ಶ್ರೀಗಂಧದ ಮರ
ನೀ ಕುಡಿಯುವ ನೀರ್ ಕಾವೇರಿ
ಪಂಪನೋದುವ ನಿನ್ನಾ ನಾಲಗೆ ಕನ್ನಡವೇ ಸತ್ಯ
ಕುಮಾರವ್ಯಾಸನನಾಲಿಪ ಕಿವಿಯದು ಕನ್ನಡವೇ ನಿತ್ಯ
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು

ಹರಿಹರ ರಾಘವರಿಗೆ ಎರಗುವ ಮನ
ಹಾಳಾಗಿಹ ಹಂಪೆಗೆ ಕೊರಗುವ ಮನ
ಪಿಂಪಿನ ಬನವಾಸಿಗೆ ಕರಗುವ ಮನ
ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ
ಜೊಗದ ಜಲಪಾತದಿ ಧುಮುಕುವ ಮನ
ಮಲೆನಾಡಿಗೆ ಒಂಪುಳಿಹೋಗುವ ಮನ
ಕನ್ನದವೇ ಸತ್ಯ ಕನ್ನಡವೇ ನಿತ್ಯ
ಎಲ್ಲಾದರು ಇರು ಎಂತಾದರು ಇರು
ಎಂದೆಂದಿಗು ನೀ ಕನ್ನಡವಾಗಿರು

ಕಾಜಾಣಕೆ ಗಿಳಿ ಕೋಗಿಲೆ ಇಂಪಿಗೆ
ಮಲ್ಲಿಗೆ ಸಂಪಿಗೆ ಕೇದಗೆ ಕಂಪಿಗೆ
ಮಾವಿನ ಹೊಂಗೆಯ ತಳಿರಿನ ತಂಪಿಗೆ
ರಸರೋಮಾಂಚನಗೊಳುವಾತನಾ ಮನ
ಎಲ್ಲಿದ್ದರೆ ಏನ್ ಎಂತಿದ್ದರೆ ಏನ್
ಎಂದೆಂದಿಗು ತಾನ್ ಕನ್ನಡವೇ ಸತ್ಯ ಕನ್ನಡವೇ ನಿತ್ಯ
ಅನ್ಯವೆನಲದೇ ಮಿತ್ಯ
ಕನ್ನಡವೇ ಸತ್ಯ ಕನ್ನಡವೇ ನಿತ್ಯ

 

|| ಕನ್ನಡ ಗೊತ್ತಿರೊರ್ಗೆ.... ಕನ್ನಡ ಗೊತ್ತಿಲ್ಲದವರಿಗೆ.... ಕನ್ನಡ ಗೊತ್ತಿದ್ದು ಮಾತಾಡದವರಿಗೆ.... ಈ ಪುಟ್ಟ ಕನ್ನಡ ಅಭಿಮಾನಿಯಿಂದ ಕನ್ನಡ ರಾಜ್ಯೋತ್ಸವದ ಶುಭಾಷಯಗಳು... ಜೈ ಕರ್ನಾಟಕ ಮಾತೆ||