ಚಕ್ರದೃಷ್ಟಿ

ಚಕ್ರದೃಷ್ಟಿ

ಪುಸ್ತಕದ ಲೇಖಕ/ಕವಿಯ ಹೆಸರು
ನಾ. ಕಸ್ತೂರಿ
ಪ್ರಕಾಶಕರು
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ನೃಪತುಂಗ ರಸ್ತೆ, ಬೆಂಗಳೂರು
ಪುಸ್ತಕದ ಬೆಲೆ
ರೂ. ೯.೦೦, ಮುದ್ರಣ: ೧೯೯೦

ಕನ್ನಡದಲ್ಲಿ ಲೇಖಕ-ಪ್ರಕಾಶಕ-ಓದುಗರ ನಡುವೆ ಗಾಢ ಸಂಬಂಧವನ್ನು ಏರ್ಪಡಿಸುತ್ತಾ, ಶ್ರೀಸಾಮಾನ್ಯರಲ್ಲಿ ಉತ್ತಮ ವಾಚನಾಭಿರುಚಿಯನ್ನು ಹಾಗೂ ಪುಸ್ತಕ ಪ್ರೀತಿಯನ್ನು ಮೂಡಿಸುತ್ತಾ ರಾಜ್ಯಾದ್ಯಂತ ಓದುಗರಿಗೆ ಒಳ್ಳೆಯ ಪುಸ್ತಕಗಳು ಸುಲಭ ಬೆಲೆಯಲ್ಲಿ ದೊರೆಯುವಂಥ ಸ್ಥಾಯೀ ವ್ಯವಸ್ಥೆಯೊಂದನ್ನು ರೂಪಿಸಿ, ಕನ್ನಡ ಪುಸ್ತಕೋದ್ಯಮವನ್ನು ಜನಪರವಾಗಿ ಮತ್ತು ಧೃಢವಾಗಿ ಬೆಳೆಸುವ ಉದ್ದೇಶದಿಂದ ‘ಕನ್ನಡ ಪುಸ್ತಕ ಪ್ರಾಧಿಕಾರ' ಎಂಬ ದೀರ್ಘಕಾಲಿಕ ಯೋಜನೆಯೊಂದನ್ನು ಸರ್ಕಾರವು ರೂಪಿಸಲು ಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ೧೯೮೯-೯೦ರ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯವು ಕೈಗೊಂಡಿರುವ 'ಜನಪ್ರಿಯ ಪುಸ್ತಕ ಮಾಲೆ' ಒಂದು ಮೊದಲ ಹೆಜ್ಜೆ. ಇಂದಿನ ಈ ಪುಸ್ತಕ ಪ್ರಕಟಣೆ ಯೋಜನೆಯು ಮುಂದೆ ‘ಪುಸ್ತಕ ಪ್ರಾಧಿಕಾರ'ವಾಗಿ ಬೆಳೆದು, ಒಂದು ಸ್ವಾಯತ್ತ ಸಂಸ್ಥೆಯಾಗಿ ರೂಪುಗೊಳ್ಳಲೆಂದು ಸದ್ಯದ ಆಶಯ. 

ಈ ಆಶಯದಂತೆ ‘ಜನಪ್ರಿಯ ಪುಸ್ತಕ ಮಾಲೆ' ಸರಣಿಯಲ್ಲಿ ಪ್ರಕಟವಾದ ಪುಸ್ತಕ ನಾ.ಕಸ್ತೂರಿ ಅವರ ‘ಚಕ್ರದೃಷ್ಟಿ'. ಈ ಪುಸ್ತಕದಲ್ಲಿ ೧೧ ಅಧ್ಯಾಯಗಳಿವೆ. ಕರಕರಪ್ರಿಯ, ಕದನ ಕುತೂಹಲ, ದೂರವಾಣಿ, ಶುದ್ಧ ಸಾವೇರಿ, ಸ್ನೇಹಪ್ರಭಾ, ಮಾಯಾ ಮಾನವ ಗೌಳ, ಹಿಂಸಧ್ವನಿ, ನೀತಿಗೌಡ, ತೋಡಿ, ಪಠಾಣ, ಸಹನ. ೧೫೪ ಪುಟಗಳ ಈ ಪುಸ್ತಕವು ಮಾರುಕಟ್ಟೆಯಲ್ಲಿ ಅಲಭ್ಯವಾಗಿದ್ದರೂ ಹಳೆಯ ಓದುಗರಲ್ಲಿ ಅಥವಾ ಗ್ರಂಥಾಲಯದಲ್ಲಿ ಸಿಕ್ಕಿದರೆ ಅವಶ್ಯ ಓದಿ.