ಜುಂಪಾ ಲಾಹಿರಿಯವರ ಹೊಸ ಪುಸ್ತಕ

ಜುಂಪಾ ಲಾಹಿರಿಯವರ ಹೊಸ ಪುಸ್ತಕ

ಬರಹ

Unaccustomed Earth ಹೆಸರಿನ ನೀಳ್ಗಥೆಗಳ ಸಂಕಲನ ಹೊರಬಿದ್ದಿದೆ. ಮನುಷ್ಯ ಸಂಬಂಧಗಳು, ಅವನ ಭಾವನೆಗಳು ಕ್ರಮೇಣ ಅರ್ಥಕಳೆದುಕೊಳ್ಳುವುದನ್ನು, ಸಡಿಲಗೊಳ್ಳುವುದನ್ನು ಮೌನವಾದ ತಲ್ಲಣಗಳಲ್ಲಿ ಗುರುತಿಸುತ್ತಲೇ ಅವುಗಳಿಂದ ಆತ ಬಿಡುಗಡೆ ಪಡೆಯುವ ಹಂತದಲ್ಲಿ ಅಥವಾ ಬಿಡುಗಡೆ ಪಡೆದ ನಂತರ ಉಳಿಯುವ ಶಿಲ್ಕು ಏನಿದೆ ಅದರಲ್ಲಿ ಆ ಸಂಬಂಧಗಳ, ಭಾವನೆಗಳ ಪ್ರಾಮಾಣಿಕತೆಯನ್ನು ಅರಸುವ ಕತೆಗಳು, ಬೇರೆ ಹೊಸ ಸಂಬಂಧದ ಹುರುಪಿನ ಆಳದಲ್ಲಿ ಹಳೆಯ ಸಂಬಂಧದ ನೆರಳುಗಳನ್ನು ಕಾಣುವ ಕಥೆಗಳು, ನಡುವಯಸ್ಸಿನಲ್ಲಿ ಸಂಬಂಧಗಳು ಪಡೆದುಕೊಂಡ ಅನಿವಾರ್ಯ ಆಕಾರ ವಿಕಾರಗಳನ್ನು ಮೌನವಾಗಿ ಚಿತ್ರಿಸುತ್ತ ಅವರ ಅಥವಾ ಎಳೆಯರ ಹೊಸ ಸಂಬಂಧಗಳನ್ನು ನಿರೂಪಿಸುವ ಕಥೆಗಳು ಇಲ್ಲಿವೆ. ಹೆಚ್ಚಾಗಿ ಇಲ್ಲಿ ಗಂಡು ಹೆಣ್ಣು ಸಂಬಂಧಗಳೇ ಪ್ರಾಮುಖ್ಯ ಪಡೆದಂತಿದೆಯಾದರೂ ತಂದೆ ಮಗಳು, ತಾಯಿ ಮಗ, ಅಕ್ಕ ತಮ್ಮ, ಕೇವಲ ಇಬ್ಬರು ಬಾಡಿಗೆದಾರರ ನಡುವಿನ ಸಂಬಂಧದ ಎಳೆಗಳು ಕೂಡ ಸಮಾನಾಂತರ ಗತಿಯಲ್ಲಿ ಕತೆಯ ಇನ್ನೊಂದು ಪಾತಳಿಯಲ್ಲಿ ತನ್ನ ಹುಟ್ಟು, ಬೆಳವಣಿಗೆ, ಕುಸಿತ ಅಥವಾ ಮಿಡಿತ ದಾಖಲಿಸುತ್ತ ಹೋಗುತ್ತವೆ ಎಂಬುದನ್ನು ಗಮನಿಸಬಹುದು. ಈ ಎಲ್ಲ ಕತೆಗಳು ಅಮೆರಿಕೆಯಲ್ಲಿ ಅಥವಾ ವಿದೇಶದಲ್ಲಿ ನಡೆಯುತ್ತವೆ, ಭಾರತದ ಬಂಗಾಳಿ ನೆರಳು ಎಷ್ಟೇ ಗಾಢವಾಗಿ ಹರಡಿದ್ದರು ಕತೆಯ ನಡೆ ಭಾರತದ ನೆಲದಲ್ಲಿಲ್ಲ.

 

 

Unaccustomed Earth - Jhumpa Lahiri, Random House, 333pp; Rs.450.