ನನ್ನ ದೇಹದ ಬೂದಿ
ಬರಹ
ನಾನು ಕೆಲ ದಿನಗಳಿಂದ ದಿನಕರ ದೇಸಾಯಿ ಅವರ "ನನ್ನ ದೇಹದ ಬೂದಿ" ennuva ಕವನಕ್ಕಾಗಿ ಹುಡುಕುತ್ತಿದ್ದೇನೆ.
ಸಾಹಿತ್ಯ ಸಿಕ್ಕಿದೆಯಾದರು ಹಾಡು ಸಿಕ್ಕಿಲ್ಲ. ನಿಮ್ಮಲ್ಲಿ ಯಾರಿಗಾದರು ಡೌನ್ಲೋಡ್ ಲಿಂಕ್ ಗೊತ್ತಿದ್ದರೆ ತಿಳಿಸಿ ಪುಣ್ಯ ಕಟ್ಟಿಕೊಳ್ಳಿ. ನಿಮ್ಮ ಬಳಿ ಹಾಡು ಇದ್ದಾರೆ 007san.shetty@gmail.com ಗೆ ಕಳುಹಿಸಿ ಕೊಡಿ.
ಸಾಹಿತ್ಯ :
ನನ್ನ ದೇಹದ ಬೂದಿ-ಗಾಳಿಯಲಿ ತೂರಿ ಬಿಡಿ
ಹೋಗಿ ಬೀಳಲಿ ಬತ್ತ ಬೆಳೆಯುವಲ್ಲಿ ;
ಬೂದಿ-ಗೊಬ್ಬರದಿಂದ ತೆನೆಯೊಂದು ನೆಗೆದು ಬರೆ
ಧನ್ಯವಾಯಿತು ಹುಟ್ಟು ಸಾವಿನಲ್ಲಿ.
ಹೋಗಿ ಬೀಳಲಿ ಬತ್ತ ಬೆಳೆಯುವಲ್ಲಿ ;
ಬೂದಿ-ಗೊಬ್ಬರದಿಂದ ತೆನೆಯೊಂದು ನೆಗೆದು ಬರೆ
ಧನ್ಯವಾಯಿತು ಹುಟ್ಟು ಸಾವಿನಲ್ಲಿ.
ನನ್ನ ದೇಹದ ಬೂದಿ-ಹೊಳೆಯಲ್ಲಿ ಹರಿಯಬಿಡಿ
ತೇಲಿ ಬೀಳಲಿ ಮೀನ ಹಿಡಿಯುವಲ್ಲಿ ;
ಮುಷ್ಟಿಬೂದಿಯ ತಿಂದು ಪುಷ್ಟವಾಗಲು ಮೀನು
ಧನ್ಯವಾಯಿತು ಹುಟ್ಟು ಸಾವಿನಲ್ಲಿ.
ತೇಲಿ ಬೀಳಲಿ ಮೀನ ಹಿಡಿಯುವಲ್ಲಿ ;
ಮುಷ್ಟಿಬೂದಿಯ ತಿಂದು ಪುಷ್ಟವಾಗಲು ಮೀನು
ಧನ್ಯವಾಯಿತು ಹುಟ್ಟು ಸಾವಿನಲ್ಲಿ.
ಧನ್ಯವಾದಗಳು
ನನ್ನ ದೇಹದ ಬೂದಿ-ಕೊಳದಲ್ಲಿ ಬೀರಿ ಬಿಡಿ
ತಾವರೆಯು ದಿನದಿನವು ಅರಳುವಲ್ಲಿ ;
ಬೂದಿ ಕೆಸರನು ಕೂಡಿ ಹೊಸ ಪಂಕಜವು ಮೂಡೆ
ಧನ್ಯವಾಯಿತು ಹುಟ್ಟು ಸಾವಿನಲ್ಲಿ.
ತಾವರೆಯು ದಿನದಿನವು ಅರಳುವಲ್ಲಿ ;
ಬೂದಿ ಕೆಸರನು ಕೂಡಿ ಹೊಸ ಪಂಕಜವು ಮೂಡೆ
ಧನ್ಯವಾಯಿತು ಹುಟ್ಟು ಸಾವಿನಲ್ಲಿ.
ಸತ್ತ ಮೇಲಾದರೂ ದೇಹ ಸೇವೆಗೆ ನಿಲಲಿ
ಇಂದಿಗೀ ನರಜನ್ಮ ಸೇವೆಯಿಂದು
ತನ್ನ ಸ್ವಾರ್ಥವ ನೆನೆದು ವ್ಯರ್ಥವಾಗಿದೆ, ದೇವ,
ನಿಜ ಸೇವೆಗೈಯಲಿಕೆ ಬರಲಿ ಮುಂದು.
ಇಂದಿಗೀ ನರಜನ್ಮ ಸೇವೆಯಿಂದು
ತನ್ನ ಸ್ವಾರ್ಥವ ನೆನೆದು ವ್ಯರ್ಥವಾಗಿದೆ, ದೇವ,
ನಿಜ ಸೇವೆಗೈಯಲಿಕೆ ಬರಲಿ ಮುಂದು.
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ