ನಾನು, ಗಣಪ ಹಾಗೂ ಮೂಗಿಲಿ

ನಾನು, ಗಣಪ ಹಾಗೂ ಮೂಗಿಲಿ

ಬರಹ

ಪ್ರಿಯ ಓದುಗರಿಗೇ, ಗೌರಿ ಗಣೇಶ ಹಬ್ಬದ ಹಾರ್ಧಿಕ ಶುಭಾಶಯಗಳು

ಹಬ್ಬ..ಹಬ್ಬ..ಗೌರಿ ಗಣೇಶ ಹಬ್ಬ ಬಂತು ನಾಡಲಿ|
ಹಬ್ಬಕ್ಕೆಂದು ಅಮ್ಮ ಮಾಡಿದ ಬಿಸಿಬಿಸಿ ಚಕ್ಕುಲಿ
ತಿನ್ನುತಾ ನಾ ಏರಿದ ಮನೆಯಂಗಳದ ಜಗುಲಿ|

ಪೂಜೆಗೆ ಮುಂಚಿತವಾಗಿ ಚಕ್ಕುಲಿ ನಾ ತಿನ್ನವುದಾ
ಮರೆಯಲಿ ಓರೆಗಣ್ಣಲಿ ನೋಡಿದ ದಪ್ಪನೆಯ ಮೂಗಿಲಿ|
ದೂರನು ಹೇಳಲು ಶರವೇಗದಲಿ ಓಡಿತು ಗಣಪನ ಬಳಿ|

ಗಜಾನನನಲಿ ನನ್ನ ಬಗ್ಗೆ ಚಾಡಿ ಹೇಳಿತು ವಿಧವಿಧ ಪರಿ|
ಚಾಡಿ ಮಾತನು ಕೇಳಿ ಮೈಯೆಲ್ಲ ಹಸಿ ಕೋಪ ಮೂಡಿ|
ಗೌಡರ ಮನೆಯಲಿ ಕಡುಬನು ತಿನ್ನುವುದಾ ಅರ್ಧಕ್ಕೆ ಬಿಟ್ಟೆದ್ದ ಗಣಪ|
ಮೂಗಿಲಿಯೊಡನೆ ಪ್ರತ್ಯಕ್ಷನಾದ ನಮ್ಮ ಮನೆಯಂಗಳದ ಸಮೀಪ|

ಆದರೆ ತಿನ್ನುತ್ತಾ ತಿನ್ನುತ್ತಾ ಬಿಸಿಬಿಸಿ ಚಕ್ಕುಲಿ
ನಾ ಆಗಲೇ ಸೆರೆಯಾಗಿದ್ದೆ ನಿದ್ರಾದೇವಿಯ ಮಡಿಲಲಿ
ಇನ್ನೂ ವಿನಾಯಕ ಬಂದ ಅರಿವು ನನಗೆಲ್ಲಿ?

ಇದನ್ನು ಕಂಡು ಕಡುಕೋಪದಲಿ ಮೂಗಿಲಿ ಏರಿತು ಜಗುಲಿ
ನನ್ನ ಮೈ ಮೇಲೆ ಓಡಾಡುತಾ ಇಟ್ಟಿತು ತಾಜಾ ತಾಜಾ ಕಚಗುಳಿ
ನಂತರದಲಿ ಕೈಯಲಿ ಇದ್ದ ಚಕ್ಕುಲಿ ಕಿತ್ತೊಯ್ದಿತು ಮೂಗಿಲಿ
ನಿಂತಿತು ಗಣಪನ ಸನಿಹದಲಿ! ನಾ ತಪ್ಪಿನ ಅರಿವಿನಲಿ
ಗಣಪನ ಕ್ಷಮೆ ಕೇಳಲು| ಜಗುಲಿಯಿಂದ ಎದ್ದೇಳಲು
ಇದ್ದೆನು ಹಾಸಿಗೆಯಲಿ| ಸೊಗಸಾದ ಕನಸ ಕಂಡಿದ್ದೆನು ನಿದ್ರೆಯಲಿ!

- ನಿಮ್ಮ ಸುನಿಲ್ ಮಲ್ಲೇನಹಳ್ಳಿ