ನಾನು ಮತ್ತು ಗಿಳಿ !!
ಕವನ
೧
ಏನೋ ಕನಸಿನ ಹಿಂದೆ ಕೈಚಾಚುತ್ತಿದ್ದಾಗ
ಕಂಡೆ ನಾನೊಂದು ಗಿಳಿ ಕಿಟಕಿಯಲ್ಲಿ
ಹಸುರುಟ್ಟ ಗದ್ದೆಯ ಬಣ್ಣ, ಕೆಂಪು ಕೊಕ್ಕು
ಈ ಹಕ್ಕಿ ಎಸ್ಟೊಂದು ಚೆನ್ನ
ಪ್ರಕೃತಿದೇವಿಗೆ ನನ್ನದೊಂದು ನಮನ
ಅಷ್ಟು ಸ್ನೇಹಿಯೇ ನಾನು ?
ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡುವ ಹಕ್ಕಿ
ಹೆದರದೇ ಕುಳಿತಿದೆಯಲ್ಲ
ಸವಿಯ ಭಾವವ ತುಂಬಿ ಹರಸುತ್ತಿದ್ದೇನೆ !!
೨
ಸರಿಯಾಗಿ ನೋಡಿದರೆ
ಸಣ್ಣ ಮೆಣಸಿನ ಬೀಜ ಕೊಕ್ಕಂಚಿನಲ್ಲಿ
ನಾನು ಸಾಕಿದ ಗಿಡದ್ದೇ ಇರಬೇಕು .!
ಹಾಳು ಹಕ್ಕಿ ! ಬಿಡಲೇಬಾರದು ಇದನು
ಕೈಗೆ ಸಿಕ್ಕಿದ್ದನ್ನೆಸೆದೆ .
ಹಾರಿಹೋಯಿತೆ ಗಿಳಿ ಛೆ !?
ಸರಿಯಾಗಿ ಬೀಳಬೇಕಿತ್ತು ಪೆಟ್ಟು
ಇನ್ನೊಮ್ಮೆ ಬರಲಿ ಎಂದು
ಕಲ್ಲು ಕೈಯೊಳಗಿಟ್ಟು ಕಾಯುತ್ತಿದ್ದೇನೆ !!
ISHWARA BHAT K
೨೦-೦೨-೨೦೦೫
Comments
ಉ: ನಾನು ಮತ್ತು ಗಿಳಿ !!
ಉ: ನಾನು ಮತ್ತು ಗಿಳಿ !!