ತರ್ಲೆ ಮಂಜ

ನಗು ಎಂದಿದೆ ಮಂಜನ ಬಂಧು....

ತುಂಬಾ ದಿನಗಳಿಂದ ನಾನು ನನ್ನ ಎಲ್ಲ ಬ್ಲಾಗ್ ಲೇಖನಗಳನ್ನು ಸೇರಿಸಿ ಪುಸ್ತಕ ಮಾಡಬೇಕು ಎಂದು ಮಂಜನಿಗೆ ಹೇಳುತ್ತಾ ಬಂದಿದ್ದೆ. ಮಂಜ ದಿನಾಲೂ ನಾನು ತಲೆ ತಿನ್ನುವುದು ನೋಡಿ, ಒಮ್ಮೆ ನನ್ನ ಮಿತ್ರ ಒಬ್ಬರು ಪ್ರಕಾಶಕರು ಇರುವರು. ಅವರ ಹತ್ತಿರ ನಿನ್ನನ್ನು ಮಾತನಾಡಿಸುತ್ತೇನೆ ಎಂದು ಅಭಯ ನೀಡಿದ. ಅಂದು ರವಿವಾರ ಮುಂಜಾನೆ ಮಂಜ ಫೋನ್ ಮಾಡಿ ನನ್ನ ಮನೆಗೆ ಬೇಗನೆ ಬಾ ಒಬ್ಬರು ಪ್ರಕಾಶಕರು ಬಂದಿದ್ದಾರೆ ಎಂದು ಕರೆದ. ನಾನು ಶರವೇಗದಲ್ಲಿ ಅವನ ಮನೆ ತಲುಪಿದೆ. 


‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2.5 (2 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ತರ್ಲೆ ಮಂಜನ ಗೇಲಿ ಸ್ವಭಾವ ....

ಮಂಜನ ಮಡದಿಯಿಂದ ನನಗೆ ಮತ್ತು ಮನೋಜನಿಗೆ ರಾಖಿ ಕಟ್ಟಿಸಿಕೊಳ್ಳಲು ಆಹ್ವಾನ ಬಂದಿತ್ತು. ಮನೋಜ ಮೊದಲೇ ಹಾಜರ್ ಆಗಿ, ಪೇಪರ್ ಓದುತ್ತ ಕುಳಿತಿದ್ದ. ಕೆಳಗೆ ಇರುವ ಸುಖಮಯ ದಾಂಪತ್ಯಕ್ಕೆ ಉಪಯೋಗಿಸಿ ಎಂದು ಸುಂದರ ತರುಣಿಯ ಜಾಹಿರಾತು ರಾರಾಜಿಸುತ್ತಿತ್ತು. ಮಂಜ ಏನಪ್ಪಾ? ನಿನಗೂ ಔಷಧಿ ಬೇಕಾ? ಎಂದು ಗೇಲಿ ಮಾಡಿದ.  ಮನೋಜ ಲೇ.. ನಾನು ಮೇಲಿನ ಸುದ್ದಿ ಓದುತ್ತಿರುವೆ ಎಂದ. ಈ ಸುಂದರ ತರುಣಿಯನ್ನು ನೋಡಿದರೆ ಸಾಕು ಸುಖಮಯ ಆಗಬೇಕು. ಆದರೂ ಆಗಿಲ್ಲಾ ಎಂದರೆ, ಅದನ್ನು ಉಪಯೋಗಿಸಿದ ಮೇಲೆ ಆಗುತ್ತಾ? ಗೊತ್ತಿಲ್ಲ. ನನಗಂತೂ ಅದರ ಅಗತ್ಯ ಬಿದ್ದಿಲ್ಲಾ, ನಿನಗೆ ಏನೋ ಬೇಕಾಗಿರಬೇಕು ಎಂದು ಮಂಜನಿಗೆ ಡೈಲಾಗ್ ಹೊಡೆದ. ಅಷ್ಟರಲ್ಲಿ ಮಂಜನ ಮಡದಿ ಅಡುಗೆ ಮನೆಯಿಂದ ಬಂದಿದ್ದರಿಂದ ಎಲ್ಲರು ಸುಮ್ಮನಾದೆವು.


‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 1 (1 vote)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಕಮಲೇ ಕಮಲೋತ್ಪತ್ತಿಃ....

ಮೊನ್ನೆ ನನ್ನ ಹಳೆಯ ಮಿತ್ರ ಪ್ರಶಾಂತ ಗಾಂಧೀ-ಬಜಾರಿನಲ್ಲಿ ಭೇಟಿಯಾದ, ಅವನನ್ನು ನಾವೆಲ್ಲರೂ ಪ್ರಳಯಾಂತಕ ಅಥವಾ ಪ್ರಣಯಾoತಕ ಎಂದು ಸಂಭೋದಿಸುತ್ತಿದ್ದೆವು. ನಮ್ಮ ಮಂಜ ಕೂಡ ಅವನಿಗೆ ಹೆದರುತ್ತಿದ್ದ.ಎಲ್ಲ ಕ್ಷೇಮ ಸಮಾಚಾರ ಅದ ಮೇಲೆ, ನಾನು ಬ್ಲಾಗ್,ಕಥೆ ಕವನ ಬರೆಯುತ್ತ ಇರುತ್ತೇನೆ ಎಂದಾಗ, ನನ್ನ ಗೆಳೆಯ ಪ್ರಶಾಂತ ಅಪಾದಮಸ್ತಕ ವಿಚಿತ್ರವಾಗಿ ನೋಡಿ, ನಗಲಾರಂಬಿಸಿದ. ಏಕೆ? ಎಂದು ಕೇಳಿದೆ. ನಿನಗೆ ಬರಹಗಾರರಿಗೆ ಇರಬೇಕಾದ ಆಭೂಷಣವೆ ಇಲ್ಲ ಎಂದ. ಏನಪ್ಪಾ? ಇರಬೇಕು ಎಂದು ಕೇಳಿದಾಗ, ನಿನಗೆ ಮೊದಲು ಒಂದು ಕನ್ನಡಕ ಇರಬೇಕು. ಅದು ಇಲ್ಲದಿದ್ದರೆ ಯಾರು ನೀನು ಒಬ್ಬ ಬರಹಗಾರ ಎಂದು ನಂಬುವುದಿಲ್ಲ ಎಂದ. ಕನ್ನಡಕದಲ್ಲಿ ಕನ್ನಡ ಅಡಕವಾಗಿದೆ ಗೊತ್ತ? ಎಂದು ಹಿಯಾಳಿಸಿದ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2.5 (2 votes)
To prevent automated spam submissions leave this field empty.

ದಂತದ ಗೊಂಬೆ.....

ಮಂಜ ಮತ್ತು ಸುಧೀರ್ ಇಬ್ಬರ ಮನೆ ಅಕ್ಕ-ಪಕ್ಕ ಇತ್ತು. ಇಬ್ಬರು ಒಂದೇ ಸಮಯದಲ್ಲಿ ಮದುವೆಗೆಂದು ಹೆಣ್ಣು ಹುಡುಕುತ್ತಿದ್ದರು. ಒಂದು ದಿವಸ ಮಂಜ ಒಂದು ಹೆಣ್ಣು ನೋಡುವ ಶಾಸ್ತ್ರ ಇತ್ತು.ಸಂಜೆ ಸುಧೀರ್ ನ ಅಮ್ಮ ಹೆಣ್ಣು ಹೆಂಗಿತ್ತು ಎಂದು ಮಂಜನನ್ನು ವಿಚಾರಿಸಿದರು. ಅದಕ್ಕೆ ಮಂಜ ಹುಡುಗಿ ದಂತದ ಗೊಂಬೆ ಹಾಗೆ ಇದ್ದಳು, ಸೌಂದರ್ಯ ದೇವತೆ ಆದರೆ, ನನಗೆ ಅವಳ ಖರ್ಚನ್ನು ತೂಗಿಸಲು ಆಗುವುದಿಲ್ಲ ಎಂದ. ಹಾಗೇನಾದರು ಮದುವೆ ಆದರೆ, ಒಂದು ಬ್ಯಾಂಕ್ ಲೂಟಿ ಮಾಡಬೇಕು ಅಷ್ಟೇ ಅಂದ. ಅಲ್ಲೇ ಇದ್ದ ಸುಧೀರ್ ಸುಮ್ಮನಿರದೆ ಹಾಗಾದರೆ, ನನಗೆ ಅವಳನ್ನು ತೋರಿಸು ಎಂದ. ಏಕೆಂದರೆ, ಸುಧೀರ್ ನಿಗೆ ತಲೆ ಇಲ್ಲದಿದ್ದರೂ ತಲೆತಲಾಂತರದಿಂದ ಬಂದ ಅಸ್ತಿಗೇನು ಕಡಿಮೆ ಇರಲಿಲ್ಲ. ಅದನ್ನು ಕೇಳಿದ ಅವರ ಅಮ್ಮ ಇದೇನೋ? ಕಪಿ ಚೇಷ್ಟೆ ಎಂದು ಬೈದರು.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2 (2 votes)
To prevent automated spam submissions leave this field empty.

ಬರಿಬೇಕು.. ಬರಿಬೇಕು ..

ಅದೆನೋ ಗೊತ್ತಿಲ್ಲ, ಏನೋ? ಒಂದು ಕಸಿವಿಸಿ, ಮನಸು ಬರಿದಾಯಿತೆ ಎಂದು. ನನಗು ಹಾಗೆ ಅನ್ನಿಸಿರಲಿಲ್ಲ, ಏಕೆಂದರೆ ಕೆಲಸದ ಒತ್ತಡದಿಂದ ಬರೆಯುವುದಕ್ಕೆ ವಿರಾಮ ಹಾಡಿದ್ದೆ. ತುಂಬಾ ದಿನಗಳಿಂದ ಏನು ಬರೆಯದೆ ಇದ್ದಿದ್ದರಿಂದ, ಇವತ್ತು ಏನಾದರು? ಬರೆದೆ ತೀರಬೇಕು ಎಂದು ಯೋಚನೆ ಮಾಡುತ್ತಾ ಕುಳಿತಿದ್ದೆ.

ಕೆಲವರಿಗೆ ಕೆಲವೊಂದು ಹುಚ್ಚು ಖಂಡಿತ ಇರುತ್ತವೆ. ನಮ್ಮ ಮಂಜನಿಗೆ ಯಾವುದೇ ದೊಡ್ಡ ಸಮೆಸ್ಯೆಯಲ್ಲೂ ಹಾಸ್ಯ ಕಾಣುವ ಪ್ರವರ್ತಿ. ಒಮ್ಮೆ ನಾನು ಮಂಜ ನನ್ನ ಬೈಕ್ ನಲ್ಲಿ ಹೋಗುತ್ತಿರುವಾಗ, ಬೈಕ್ ಮುಂದಿನ ಒಂದು ಹುಡುಗಿಯ ಬೈಕ್ ಗೆ ತಾಗಿತು. ಅವಳು ಬಂದು ಜಗಳ ಶುರು ಮಾಡಿದಳು. ಅಷ್ಟರಲ್ಲಿ, ಮಂಜ ಏನೋ.. ಸ್ವಲ್ಪ ಪ್ರೆಸ್ ಆಯಿತು ಅಷ್ಟೇ ಎಂದ. ಏನ್ರೀ? ಹಾಗೆ ಅಂದರೆ ಎಂದಳು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3.5 (2 votes)
To prevent automated spam submissions leave this field empty.

ತರ್ಲೆ ಮಂಜನ ಫ್ರೆಂಡ್ಶಿಪ್ ಪುರಾಣ....

ಮಂಜನ ಮನೆಗೆ ಹೋಗಿದ್ದೆ. ನಾನು ಫ್ರೆಂಡ್ಶಿಪ್ ಡೇ ವಿಶ್ ಮಾಡಲು, ನಾನು ವಿಶ್ ಮಾಡಬೇಕು ಎಂದು ಅನ್ನುಕೊಳ್ಳುವಷ್ಟರಲ್ಲಿ, ಸುಬ್ಬ ಬಂದವನೇ "ಹ್ಯಾಪಿ ಫ್ರೆಂಡ್ಶಿಪ್ ಡೇ" ಎಂದು ನನಗೆ ಮತ್ತು ಮಂಜನಿಗೆ ಕೈ ಕುಲುಕಿದ. ಮಂಜ ಸಿಟ್ಟಿನಿಂದ ಏನೋ? ಇದು ಫ್ರೆಂಡ್ಶಿಪ್ ಡೇ ಅಂತೆ. ಗೆಳೆತನಕ್ಕೆ ಕೂಡ ಒಂದು ದಿನ ಬೇಕಾ?, ಹಾಗಾದ್ರೆ ಗೆಳೆತನ ಅನ್ನುವುದು ಒಂದೇ ದಿನಕ್ಕೆ ಸೀಮಿತನಾ?. ಮೊದಲು, ನಾವೆಲ್ಲ ಗೆಳೆಯರು ದಿನವು ಸೇರುತ್ತಿದ್ದೆವು. ಗೆಳೆಯರ ಒಂದು ದೊಡ್ಡ ಅಡ್ಡ ಇರುತಿತ್ತು. ಆದರೆ ಈಗ ಅವರ ಅಡ್ರೆಸ್ ನೆನಪು ಆಗುವುದು ವರ್ಷದಲ್ಲಿ ಒಂದು ದಿನ ಮಾತ್ರ. ಫ್ರೆಂಡ್ಶಿಪ್ ಎನ್ನುವ ಶಿಪ್ ಮುಣುಗೋದು ಗ್ಯಾರಂಟೀ. ನೋಡುತ್ತಾ ಇರು ಮುಂದೊಂದು ದಿನ ಆಫೀಸ್ ನಿಂದ ಹಸಿದು ಬಂದ ಗಂಡನಿಗೆ ತಿಂಡಿ ಕೊಡದೆ ಇದ್ದರೂ, ಹಸ್ಬಂಡ್ ಡೇ ಎಂದು ಕೂಡ ಬರುತ್ತೆ. ಗಂಡನ ದುಡ್ಡಿನಿಂದ ಗುಂಡಿನ ಪಾರ್ಟಿ ಬೇರೆ ಇರುತ್ತೆ ಎಂದ. ಅಷ್ಟರಲ್ಲಿ ಮಂಜನ ಮಡದಿ ಒಳಗಿನಿಂದ ಬಂದು ಮೂವರಿಗೂ ತಿಂಡಿ ಕೊಟ್ಟು, ಮಂಜನಿಗೆ ಮಾತ್ರ ಟೇಬಲ್ ಮೇಲೆ ಕುಕ್ಕಿ ಹೋದಳು. ಸಧ್ಯ ನಾನು ವಿಶ್ ಮಾಡದೇ ಬಚಾವ್ ಎಂದು ಕೊಂಡೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 3 (1 vote)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಭೀಮನ ಅಮಾವಾಸ್ಯೆ!!!!

ಭೀಮನ ಅಮಾವಾಸ್ಯೆ ಹಿಂದಿನ ದಿನ ಪೂಜೆ ಸಾಮಗ್ರಿ ತರಲು ಮಡದಿ ಹೇಳಿದ್ದಳು. ಮಂಜನ ಜೊತೆ ಮಾರ್ಕೆಟಿಗೆ ಹೋಗಿದ್ದೆ. ಮಂಜ ಸ್ಕೂಟರ್ ನಲ್ಲಿ ಹೋಗುವ ಇಬ್ಬರು ಹುಡುಗರನ್ನು ನೋಡಿ "ದೋ ಚಕ್ಕಾ ಚಕ್ಕಾ ಸಾಥ್ ಸಾಥ್" ಎಂದು ಹೇಳಿದ. ನನಗೆ ಗಾಬರಿ ಅವನಿಗೆ ಹೇಗೆ ತಿಳಿಯಿತು ಮತ್ತು ಹೀಗೆ ಏಕೆ? ಹೇಳಿದ ಎಂದು. ನಾನು ಕೇಳಿದೆ. ಅಷ್ಟು ನಿಖರವಾಗಿ ಹೇಗೆ ಹೇಳುತ್ತಿ ಎಂದೆ. ಅದಕ್ಕೆ ಮಂಜ ನೋಡು ಅಲ್ಲಿ ಅವರ ಗಾಡಿ ನಂಬರ್ ಎಂದು ತೋರಿಸಿದ. ಅದು ೨೬೭೭ ಇತ್ತು. ಇವನು ಅದನ್ನು ಹಿಂದಿಯಲ್ಲಿ ಹೇಳಿ ನನಗೆ ಗಲಿಬಿಲಿಗೊಳಸಿದ್ದ. ಮುಂದೆ ಹೋಗುವಷ್ಟರಲ್ಲಿ ಒಂದು ಅಂಗಡಿ ಕಾಣಿಸಿತು. ಅದರ ಹೆಸರು ಬೈ ಅಂಡ್ ಸೇವ್ ಎಂದು ಕಂಗ್ಲಿಷ್ನಲ್ಲಿ ಬರೆದಿತ್ತು. ಅದನ್ನು ನೋಡಿ ನಾನು ಇಲ್ಲೇ ಸಾಮಾನು ತೆಗೆದುಕೊಂಡು ಹೋಗೋಣ ಎಂದೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 2 (1 vote)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಬುರುಡೆ ಪುರಾಣ ....

ಮೊನ್ನೆ ತುಂಬಾ ಕೆಲಸವಿದ್ದ ಕಾರಣ, ಆಫೀಸ್ ನಿಂದ ಸ್ವಲ್ಪ ತಡವಾಗಿ ಹೋದೆ. ಮಡದಿ, ಮಗ ಇಬ್ಬರು ನಿದ್ದೆಯಲ್ಲಿ ಇದ್ದರು. ತೊಂದರೆ ಏಕೆ? ಮಾಡಬೇಕು ಎಂದು ಅವರನ್ನು ಎಬ್ಬಿಸದೇ, ನಾನೇ ಊಟ ಮಾಡಿ, ಬೆಡ್‌ರೂಮ್ ಗೆ ಹೋಗದೇ, ಹಾಲ್ ನಲ್ಲಿ ನಿದ್ದೆಗೆ ಜಾರಿದೆ. ಹಾಸಿಗೆ ಮೇಲೆ ಒರಗಿದ ಕೂಡಲೇ, ನಿದ್ರಾ ದೇವಿಗೆ ಶರಣಾಗಿ ಬಿಟ್ಟೆ. ಮಧ್ಯ ರಾತ್ರಿ ಯಾರೋ... ನನ್ನನ್ನು ಎಬ್ಬಿಸಿದ ಹಾಗೆ ಆಯಿತು. ಆ ಕಡೆ ಒರಗಿ ಮಲಗಿಕೊಂಡೆ. ಮತ್ತೆ ಬಡಿದು ಎಬ್ಬಿಸಿದ ಹಾಗೆ ಆಯಿತು. ಕಣ್ಣು ಬಿಟ್ಟೆ, ಚಾಕು ಹಿಡಿದು ಯಾರೋ.. ನಿಂತ ಹಾಗೆ ಅನ್ನಿಸಿತು. ನನ್ನ ಉಸಿರೇ ನಿಂತ ಹಾಗೆ ಆಗಿತ್ತು. ಪಕ್ಕದಲ್ಲಿ ಬೇರೆ ಮಡದಿ ಇಲ್ಲಾ, ಇದ್ದಿದ್ದರೆ ಸ್ವಲ್ಪ ಧೈರ್ಯ ಬರಬಹುದಿತ್ತು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (1 vote)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಸೀರೆಯಲ್ಲಿರುವ ನೀರೆ ....

ನನ್ನ ಮಡದಿ ತುಂಬಾ ಸಂತೋಷದಿಂದ ಇದ್ದಳು. ತವರು ಮನೆಗೆ ಹೋಗುವ ಸಂಭ್ರಮ. ಅವಳು ಇಷ್ಟು ಸಂತೋಷದಿಂದ ಇರುವದನ್ನು ನಾನು ನೋಡಿದ್ದು ಎರಡು ವಾರದ ಹಿಂದೆ ಹೊಸ ಸೀರೆ ಕೊಡಿಸಿದ್ದಾಗ.ಕಾಫೀ ಕುಡಿಯುತ್ತಾ ತುಂಬಾ ಸೀರಿಯಸ್ ಆಗಿ ಪೇಪರ್ ನೋಡುತ್ತಿದ್ದಳು. ಎರಡು ದಿನಗಳ ಹಿಂದೆ ಅಷ್ಟೇ ಮಹಾ ಸಂಗ್ರಾಮ ನಡೆದಿತ್ತು. ನೀನು ತವರು ಮನೆಗೆ ಹೋಗಬೇಡ ಎಂದು ಹೇಳಿದರು ಕೇಳಿರಲಿಲ್ಲ. ಸುಮ್ಮನೇ ಅವಳ ಮೇಲೆ ನನಗೆ ಎಷ್ಟು ಪ್ರೀತಿ ಎಂದು ತೋರಿಸಲು ಈ ಪೂರ್ವನಿಯೋಜಿತ ಸಂಗ್ರಾಮಕ್ಕೆ ನಾಂದಿ ಹಾಡಿದ್ದೇ. ನನಗೂ ಒಳಗೊಳಗೆ ಖುಷಿ, ಒಬ್ಬನೇ ಸಕ್ಕತ್ ಮಜಾ ಮಾಡಬಹುದು ಎಂದು. ಹೆಂಡತಿ ತವರು ಮನೆಗೆ ಹೋಗುತ್ತಾಳೆ ಎಂದರೆ ಯಾರಿಗೆ ತಾನೇ ಖುಷಿ ಇಲ್ಲ ನೀವೇ ಹೇಳಿ. ಇದೆಲ್ಲವೂ ನಮ್ಮ ಮಂಜ ಹೇಳಿ ಕೊಟ್ಟ ಟ್ರಿಕ್ಸ್.ಅದನ್ನು ನನ್ಮಗ ಮಂಜ ಟಿಪ್ಸ್(ಎಣ್ಣೆ ಪಾರ್ಟೀ) ಕೊಟ್ಟ ಮೇಲೆ ಟ್ರಿಕ್ಸ್ ಹೇಳಿಕೊಟ್ಟಿದ್ದ. ಮಂಜ ತನ್ನ ಮಡದಿಗೆ, ಗೊತ್ತು ಆಗಬಾರದು ಎಂದು ಕೆಮ್ಮಿನ ಔಷಧ ಬಾಟಲಿಯಲ್ಲಿ ಬ್ಲ್ಯಾಕ್ ಲೇಬಲ್ ಇಟ್ಟು ಕೊಂಡಿದ್ದಾನೆ. ಸುಮ್ಮನೆ ಕೆಮ್ಮಿದ ಹಾಗೆ ಮಾಡಿ ಅದನ್ನು ದಿನ ಸ್ವಾಹಾ ಮಾಡುತ್ತಾನೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
Subscribe to ತರ್ಲೆ ಮಂಜ