ಚಿತ್ರದುರ್ಗ

ಗುಬ್ಬಚ್ಚಿ

ಗುಬ್ಬಚ್ಚಿ, sparrow

ಮೊನ್ನೆ ಚಿತ್ರದುರ್ಗಕ್ಕೆ ಹೋಗುವಾಗ ದಾರಿಯಲ್ಲಿ ಕ್ಯಾಮೆರಕ್ಕೆ ಗುಬ್ಬಚ್ಚಿಗಳು ಸಿಕ್ಕಿಬಿದ್ದವು. ಬೆಂಗಳೂರಿಗರಿಗೆ ಅಷ್ಟು ನೋಡಲು ಸಿಗದು ಇದು. ಫೋಟೋ ಕೆಳಗಿವೆ. 

ಗುಬ್ಬಚ್ಚಿ, sparrow

ಗುಬ್ಬಚ್ಚಿಗಳು, sparrows

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಸವಾರೀನೋ ಪಯಣವೋ (ಭಾಗ-೨)

ಪಯಣ ಅಂದ್ರೆ ಇದೇನಾ !

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಅರೆ ಇದು ನಾನು ಅಂದು ಕಂಡ ಚಿತ್ರದುರ್ಗನಾ !

ಅರೆ ಇದು ನಾನು ಅಂದು ಕಂಡ ಚಿತ್ರದುರ್ಗನಾ!

ಹೌದು ಮೊನ್ನೆ ಸೋಮವಾರ(19/01/2009) ಚಿತ್ರದುರ್ಗ ಬಸ್‌ ನಿಲ್ದಾಣದ ಬಳಿ ಬಂದಾಗ. ನನ್ನ ಮನಸ್ಸು ಫ್ಲಾಶ್‌ ಬ್ಯಾಕ್ ಹೋಗಿತ್ತು.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಜನಿಸಿ, ಅಲ್ಲೇ ಪ್ಲಸ್‌ ೨ ತನಕ ಶಿಕ್ಷಣ ಪಡೆದ ನನಗೆ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮ ಪದವಿ ಶಿಕ್ಷಣ ಕೊಟ್ಟಿದ್ದು ಕರ್ನಾಟಕ. ಗಡಿನಾಡ ಕನ್ನಡಿಗರು ಎನಿಸಿಕೊಂಡಿದ್ದಾಗಿದೆ. ಹಾಗಾಗಿ ಅಲ್ಲಿ ಕೆಲಸ ಖಾತ್ರಿ ಇಲ್ಲ. ಇನ್ನೇನು ಅನ್ನೋ ಹೊತ್ತಿಗೆ ಕರಾವಳಿಯ ನಂ.೧ ಕನ್ನಡ ದೈನಿಕ ಉದಯವಾಣಿ ನನ್ನ ಕೈ ಬೀಸಿ ಕರೆದಿತ್ತು. ಹಾಗೆ ಉದಯವಾಣಿಯಲ್ಲಿ ವೃತ್ತಿ ಜೀವನದ ಎರಡನೇ ಇನ್ನಿಂಗ್ಸ್‌ ಪ್ರಾರಂಭಿಸಿದ್ದೆ. ಪದವಿ ಶಿಕ್ಷಣ ಪಡೆಯುತ್ತಿದ್ದಾಗ ಎಂದೋ ಚಿತ್ರದುರ್ಗಕ್ಕೆ ಹೋಗಬೇಕು ಎಂಬ ಕನಸು ಕಂಡಿದ್ದೆ. ಅಲ್ಲಿ ಇತಿಹಾಸ ಕೇಳಿದ್ದರಿಂದಲೇ ಇರಬೇಕು. ಅದು ಹೀಗೆ ನನಸಾಗತ್ತೆ ಅಂತ ಊಹಿಸಿ ಕೂಡಾ ಇರಲಿಲ್ಲ. ಅಂಥದ್ದೊಂದು ಅವಕಾಶ ನೀಡಿತ್ತು ಕರ್ನಾಟಕದ ನಂ.೧ ದಿನ ಪತ್ರಿಕೆ.

ಅದು ೨೦೦೫ರ ಜುಲೈ ೨೧ರ ಸಂಜೆ ೫.೩೦ರ ಸಮಯ. ಇನ್ನೇನು ಸೂರ್ಯ ಕಂತುವ ಆ ಹೊತ್ತು. ಬಾನು ಕೆಂಪಾಗಿತ್ತು. ಅಂತಹ ಸುಂದರ ಸಂಜೆಯಲ್ಲಿ ಚಿತ್ರದುರ್ಗಕ್ಕೆ ಕಾಲಿರಿಸಿದ ಆ ಕ್ಷಣ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
Subscribe to ಚಿತ್ರದುರ್ಗ