ಮಲೆನಾಡಿನ ಪವಿತ್ರ ಸ್ಥಳ ಶೃಂಗೇರಿ

ಮಲೆನಾಡಿನ ಪವಿತ್ರ ಸ್ಥಳ ಶೃಂಗೇರಿ

ಬರಹ

ಶೃಂಗೇರಿ ಶಾರದಾಪೀಠವು ೮ ನೇ ಶತಮಾನದಲ್ಲಿ ಅದ್ವೈತ ವೇದಾಂತದ ಪ್ರತಿಪಾದಕರಾದ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪ್ರಮುಖ ಮಠಗಳಲ್ಲಿ ಮೊದಲನೆಯದು. ಆದಿ ಶಂಕರರು ಸ್ಥಾಪಿಸಿದ ೪ ಪೀಠಗಳಗಳ್ಲಿ ಇದುನ್ನು ದಕ್ಷಿಣಾಮ್ನಾಯ ಪೀಠವೆನ್ನುತಾರೆ. ಶೃಂಗೇರಿಯ ಮಠವು ಯಜುರ್ವೇದದ ಉಸ್ತುವಾರಿ ಹೊಂದಿದೆ. ನವರಾತ್ರಿಯ ಸಂದರ್ಭದಲ್ಲಿ ಶಾರದಾ ದೇವಿಗೆ ಚಂಡಿಕಾಹವನ, ರಥೋತ್ಸವ, ಕುಂಕುಮಾರ್ಚನೆ, ಚಿನ್ನರಥ ಸೇವೆ ಮುಂತಾದ ಸೇವೆಗಳು ನಡೆಯುತ್ತವೆ.

ಶೃಂಗೇರಿ ಭಾರತದ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳ ಮಡಿಲಿನಲ್ಲಿರುವ ಒಂದು ಪಟ್ಟಣ - ೮ ನೇ ಶತಮಾನದಲ್ಲಿ ಅದ್ವೈತ ವೇದಾಂತದ ಪ್ರತಿಪಾದಕರಾದ ಶಂಕರಾಚಾರ್ಯರು ಸ್ಥಾಪಿಸಿದ ನಾಲ್ಕು ಪ್ರಮುಖ ಮಠಗಳಲ್ಲಿ ಮೊದಲನೆಯದನ್ನು ಹೊಂದಿರುವ ಕ್ಷೇತ್ರ ಶೃಂಗೇರಿ. ಶಂಕರಾಚಾರ್ಯರು ಸ್ಥಾಪಿಸಿದ ಇತರ ಮಠಗಳು ಬದರಿನಾಥ, ಪುರಿ ಮತ್ತು ದ್ವಾರಕೆಗಳಲ್ಲಿವೆ. ಇದು ತುಂಗಾ ನದಿ ತಟದಲ್ಲಿರುವ ಚಿಕ್ಕ ಪಟ್ಟಣ. ಇದುಚಿಕ್ಕಮಗಳೂರು ಜಿಲ್ಲೆಯ ತಾಲೂಕುಗಳಲ್ಲಿ ಒಂದಾಗಿದೆ.

ಶೃಂಗೇರಿ ಎಂಬ ಹೆಸರು ಋಷ್ಯಶೃಂಗಗಿರಿ ಎಂಬ ಹೆಸರಿನಿಂದ ಬಂದಿದೆ - ಇದು ಸಮೀಪದಲ್ಲೇ ಇರುವ ಒಂದು ಬೆಟ್ಟದ ಹೆಸರು. ಪ್ರತೀತಿಗನುಸಾರವಾಗಿ ಈ ಬೆಟ್ಟದಲ್ಲೇ ಋಷಿ ವಿಭಾಂಡಕ ಮತ್ತು ಅವನ ಮಗ ಋಷ್ಯಶೃಂಗ ಇದ್ದದ್ದು. ಋಷ್ಯಶೃಂಗನ ಪ್ರಸ್ತಾಪ ರಾಮಾಯಣದ ಬಾಲಕಾಂಡದಲ್ಲಿ ಬರುತ್ತದೆ. ವಸಿಷ್ಠ ತಿಳಿಸುವ ಉಪಕಥೆಗಳಲ್ಲಿ ಒಂದರಲ್ಲಿ ಋಷ್ಯಶೃಂಗ ರೋಮಪಾದ ರಾಜ್ಯದಲ್ಲಿ ಮಳೆ ತರಿಸಿದ ಕಥೆ ಇದೆ.

ಶೃಂಗೇರಿಯ ಅನೇಕ ದೇವಸ್ಥಾನಗಳಲ್ಲಿ ಮುಖ್ಯವಾದದ್ದು ವಿದ್ಯಾಶಂಕರ ದೇವಸ್ಥಾನ. ಇದನ್ನು ೧೪ ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದ ಸಂಸ್ಥಾಪಕರಾದ ಹಕ್ಕ-ಬುಕ್ಕರ ಗುರು ಮಹರ್ಷಿ ವಿದ್ಯಾರಣ್ಯರು ಕಟ್ಟಿಸಿದರು. ಈ ದೇವಾಲಯದ ಶಾಸನಗಳಲ್ಲಿ ನಂತರದ ಅನೇಕ ವಿಜಯನಗರದ ಅರಸರು ಈ ದೇವಾಲಯಕ್ಕೆ ಕೊಟ್ಟ ಕಾಣಿಕೆಗಳ ದಾಖಲೆಗಳಿವೆ. ವಿಜಯನಗರ ಕಾಲದಲ್ಲಿ ಕಟ್ಟಿಸಿದ್ದಾದರೂ ಈ ದೇವಾಲಯ ಇನ್ನೂ ಹಿಂದಿನ ಹೊಯ್ಸಳ ದೇವಾಲಯದ ಸ್ಥಾನದಲ್ಲಿ ಕಟ್ಟಿದ್ದೆಂದು ನಂಬಲಾಗಿದೆ. ವಿಜಯನಗರದ ಕಾಲದ ಶಿಲ್ಪಕಲೆ ಮತ್ತು ಹೊಯ್ಸಳ ಶಿಲ್ಪಕಲೆ - ಎರಡರ ಸಮಾಗಮವನ್ನು ಈ ದೇವಸ್ಥಾನದಲ್ಲಿ ಕಾಣಬಹುದು. ವಿದ್ಯಾಶಂಕರ ದೇವಾಲಯದಲ್ಲಿ ಮೇಷಾದಿ ರಾಶಿ ಸೂಚಕ ಕಂಬಗಳಿವೆ.ಈ ರಾಶಿ ಕಂಬಗಳ ವೈಶಿಷ್ಟ್ಯವೆಂದರೆ ಸೂರ್ಯ ಯಾವ ರಾಶಿಯಲ್ಲಿರುತ್ತಾನೊ ಆ ರಾಶಿ ಸೂಚಕ ಕಂಬದ ಮೇಲೆ ಪ್ರಥಮ ಉಷಾ ಕಿರಣಗಳು ಬೀಳುತ್ತವೆ.

ಶೃಂಗೇರಿಯ ಇತಿಹಾಸಕ್ಕೆ ನೇರವಾಗಿ ಸಂಬಂಧಿಸಿದ ಎರಡು ಪ್ರಮುಖ ದೇವಾಲಯಗಳಿವೆ. ಋಷ್ಯಶೃಂಗರ ತಂದೆಯವರಾದ, ವಿಭಾಂಡಕ ಮಹರ್ಷಿಗಳು, ತಾವು ಪೂಜಿಸುತ್ತಿದ್ದ ಶಿವಲಿಂಗದಲ್ಲಿ ಕಡೆಗೆ, ಐಕ್ಯರಾದರೆಂಬ ಪ್ರತೀತಿ ಇದೆ. ಅದು ಶೃಂಗೇರಿಪಟ್ಟಣದ ಹತ್ತಿರದ ಒಂದು ಗುಡ್ಡದ ಮೇಲಿದೆ. ಇದಕ್ಕೆ ಮಲಹಾನಿಕರೇಶ್ವರ ಎಂಬ ಹೆಸರಿದ್ದು, ಈ ಸ್ಥಳದಲ್ಲಿ ಒಂದು ದೇವಸ್ಥಾನವನ್ನು ಕಟ್ಟಿಸಿದ್ದಾರೆ.

ಶೃಂಗೇರಿಗೆ ೧೦ ಕಿ. ಮೀ. ಗಳ ದೂರದಲ್ಲಿ ಕಿಗ್ಗ, ಅಥವಾ ಋಶ್ಯಶೃಂಗಪುರವೆಂಬ ಊರಿದೆ. ಇಲ್ಲಿ ಋಶ್ಯಶೃಂಗರ ಆತ್ಮಜ್ಯೋತಿ,ತಾವು ನಿತ್ಯವೂ ಆರಾಧಿಸುತ್ತಿದ್ದ ಶಿವಲಿಂಗದೊಳಗೆ ಐಕ್ಯವಾಯಿತೆಂಬ ಪ್ರತೀತಿ ಇದೆ. ಈ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ.

ಶೃಂಗೇರಿ ತಾಲೂಕು ಕೊಪ್ಪ, ನರಸಿಂಹರಾಜಪುರನ್ನೊಳಗೊಂಡ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದೆ. ಇದು ಜಿಲ್ಲಾ ಕೇಂದ್ರವಾದ ಚಿಕ್ಕಮಗಳೂರಿನಂದ ೮೯ ಕಿ ಮೀ ಗಳ ದೂರದಲ್ಲಿದೆ. ಬೀರೂರು ಮತ್ತು ಶಿವಮೊಗ್ಗದ ರೈಲ್ವೆ ಸ್ಥಾನಕದಿಂದ ಶೃಂಗೇರಿ ಸುಮಾರು ೯೬ ಕಿ.ಮೀ.ದೂರದಲ್ಲಿದೆ. ರಸ್ತೆಯಲ್ಲಿ ಪ್ರಯಾಣ ಮಾಡಿದರೆ, ಮಂಗಳೂರು ಇಲ್ಲಿಗೆ ೧೦೭ ಕಿ.ಮೀ.ದೂರದಲ್ಲಿದೆ. ೩೨೦ ಕಿ. ಮೀ. ದೂರದ ಬೆಂಗಳೂರಿಗೆ ಹಗಲು-ರಾತ್ರಿಗಳ ಬಸ್ ಸೌಲಭ್ಯವಿದ್ದು,ಕಾಡು, ಕಣಿವೆ, ಗಿರಿಗಳಮಧ್ಯೆ, ನಿಸರ್ಗದ ರುದ್ರರಮಣೀಯತೆಯನ್ನು, ಪ್ರಯಾಣಿಸುವಾಗ ನೋಡಿ ಅನುಭವಿಸಬಹುದಾಗಿದೆ.

ಇಲ್ಲಿನ ಬಹುಪಾಲು ಜನ ಜೀವನಕ್ಕೆ ಕೃಷಿಯನ್ನು ಅವಲಂಬಿಸಿದ್ದಾರೆ. ಅಡಿಕೆ ಹಾಗು ಭತ್ತ ಇಲ್ಲಿನ ಮುಖ್ಯ ಬೆಳೆಗಳಾಗಿವೆ. ಕಾಫಿ , ಬಾಳೆ

------------------------------------:"ತುಂಗಾ ನದಿ":--------------------------

ತುಂಗಾ ನದಿ ಭಾರತದ ಕರ್ನಾಟಕ ರಾಜ್ಯದ ಒಂದು ನದಿ.
ಮಳೆಗಾಲದಲ್ಲಿ ತುಂಬಿ ಹರಿಯುತ್ತಿರುವ ತುಂಗಾ ನದಿ

ತುಂಗಾ ನದಿ ಪಶ್ಚಿಮ ಘಟ್ಟಗಳ ವರಾಹ ಪರ್ವತದಲ್ಲಿರುವ ಗಂಗಾ ಮೂಲದಲ್ಲಿ ಹುಟ್ಟುತ್ತದೆ. ಅಲ್ಲಿಂದ ಇದು ಕರ್ನಾಟಕದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮೂಲಕ ಹರಿಯುತ್ತದೆ. ಸುಮಾರು 147 ಕಿಮೀ ದೂರದವರೆದೆ ಹರಿದು ಶಿವಮೊಗ್ಗ ಜಿಲ್ಲೆಯ ಕೂಡ್ಲಿಯಲ್ಲಿ ಭದ್ರಾ ನದಿಯೊಂದಿಗೆ ಸಂಗಮಗೊಳ್ಳುತ್ತದೆ. ಇದರ ನಂತರ ತುಂಗಭದ್ರಾ ಎಂಬ ಹೆಸರು ಪಡೆದು ಮುಂದೆ ಆಂಧ್ರ ಪ್ರದೇಶದಲ್ಲಿ ಕೃಷ್ಣಾ ನದಿಯನ್ನು ಸೇರುತ್ತದೆ.

ತುಂಗಾ ನದಿ ಸಿಹಿನೀರಿಗೆ ಪ್ರಸಿದ್ಧ. "ತುಂಗಾ ಪಾನಂ ಗಂಗಾ ಸ್ನಾನಂ" ಎಂಬ ಗಾದೆಯೇ ಇದೆ!

ತುಂಗಾ ನದಿಗೆ ಗಾಜನೂರಿನಲ್ಲಿ ಒಂದು ಅಣೆಕಟ್ಟನ್ನು ಕಟ್ಟಲಾಗಿದೆ. ಭದ್ರಾ ನದಿಯೊಂದಿಗೆ ಸೇರಿದ ಮೇಲೆ ತುಂಗಭದ್ರಾ ನದಿಗೆ ಹೊಸಪೇಟೆಯಲ್ಲಿ ಇನ್ನೊಂದು ಅಣೆಕಟ್ಟನ್ನು ಕಟ್ಟಲಾಗಿದೆ. ತುಂಗಾ ನದಿಯ ದಡದ ಮೇಲಿರುವ ಒಂದು ಪ್ರಸಿದ್ಧ ಸ್ಥಳವೆಂದರೆ ಶೃಂಗೇರಿ.ತೀರ್ಥಹಳ್ಳಿ ಮತ್ತು ಶಿವಮೊಗ್ಗ ತುಂಗಾ ನದಿಯ ತೀರದಲ್ಲಿರುವ ಇತರ ಪ್ರಮುಖ ಪಟ್ಟಣಗಳು.

-----------------------------------:ಆದಿ ಶಂಕರ :-------------------------------------

ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು ಎಂದು ನಂಬಲಾಗಿರುವ ಶಂಕರಾಚಾರ್ಯರು ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು. ಶೈವ,ವೈಷ್ಣವ,ಶಾಕ್ತ,ಗಾಣಪತ್ಯ,ಸೌರ ಹಾಗು ಸ್ಕಾಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು. ಆದಿಶಂಕರರು ಭಗವದ್-ಗೀತೆ,ಉಪನಿಶತ್ ಹಾಗು ಬ್ರಹ್ಮ ಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಅಚಾರ್ಯರಾದರು.
---------------------------------:ಶ್ರೀ ಶಂಕರರ ಜನನ:-----------------------------------
ಶಂಕರಾಚಾರ್ಯರ ಕಾಲದ ಬಗ್ಗೆ ವಿದ್ವಾಂಸರಲ್ಲಿ ಇನ್ನೂ ಜಿಜ್ಞಾಸೆಯಿದೆ. ಒಂದು ವಾದದ ಪ್ರಕಾರ ಇವರು ೮ ನೇ ಶತಮಾನದಲ್ಲಿ ಜನಿಸಿದರು ಎಂದು ನಂಬಲಾಗಿದೆ. ಇವರು ಹುಟ್ಟಿದ್ದು ಕೇರಳ ರಾಜ್ಯದ ಕಾಲಟಿ ಎಂಬ ಹಳ್ಳಿಯ ಒಂದು ಬಡ ಬ್ರಾಹ್ಮಣ ಕುಟುಂಬದಲ್ಲಿ. ಹುಟ್ಟಿದ ದಿನ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯಂದು.ತಂದೆ ಶಿವಗುರು ಹಾಗೂ ತಾಯಿ ಆರ್ಯಾಂಬೆ ಶಿವಭಕ್ತರಾಗಿದ್ದು ಶಿವನ ವರಪ್ರಸಾದದಿಂದಲೇ ಶಂಕರರ ಜನನವಾಯಿತು ಎಂಬ ನಂಬಿಕೆಯಿದೆ.

-----------------------------------:ಶ್ರೀ ಶಂಕರರ ಬಾಲ್ಯ:-------------------------------------
ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡರು. ಆಧ್ಯಾತ್ಮಿಕತೆಯಲ್ಲಿ ಆಸಕ್ತಿತಳೆದ ಇವರು ಸನ್ಯಾಸತ್ವವನ್ನು ಸ್ವೀಕರಿಸುವತ್ತ ಒಲವು ತೋರಿದರು. ಆದರೆ ಒಬ್ಬನೇ ಮಗನಾಗಿದ್ದ ಶಂಕರರನ್ನು ಸನ್ಯಾಸಿಯಾಗಿ ನೋಡಲು ತಾಯಿಗೆ ಮನಸ್ಸಿರಲಿಲ್ಲ. ಹಾಗಾಗಿ ತಾಯಿಯ ಮನವೊಲಿಸಲು ಶಂಕರರು ಬಹಳ ಕಷ್ಟಪಡಬೇಕಾಯಿತು. ಆಕೆಯ ಅಂತಿಮ ಕ್ಷಣಗಳಲ್ಲಿ ತಾನು ಎಲ್ಲಿದ್ದರೂ ಆಕೆಯ ಎದುರು ಬಂದು ನಿಲ್ಲುವುದಾಗಿ ಮಾತು ಕೊಟ್ಟ ಶಂಕರರು ಸೂಕ್ತ ಗುರುವಿಗಾಗಿ ಹುಡುಕುತ್ತಾ ತಮ್ಮ ಪಯಣವನ್ನಾರಂಭಿಸಿದರು. ನರ್ಮದಾ ನದಿ ತೀರದಲ್ಲಿ ಗೋವಿಂದ ಭಗವತ್ಪಾದರನ್ನು ಭೇಟಿಯಾದ ಶಂಕರರು ಅವರನ್ನು ತನ್ನ ಗುರುಗಳನ್ನಾಗಿ ಸ್ವೀಕರಿಸಿದರು. ಅವರಿಂದ ಯೋಗ, ವೇದ, ಉಪನಿಷತ್, ವೇದಾಂತಗಳನ್ನು ಅಭ್ಯಯಿಸಿದ ನಂತರ ಕಾಶಿಗೆ ತೆರಳಿ ಅಲ್ಲಿ ಕೆಲವರನ್ನು ತಮ್ಮ ಶಿಷ್ಯರನ್ನಾಗಿಸಿಕೊಂಡು ಅವರಿಗೂ ವೇದಾಂತದ ಪಾಠ ಹೇಳಿಕೊಟ್ಟರು.

-------------------------:ಶ್ರೀ ಶಂಕರರ ಜೀವನದ ಮೈಲಿಗಲ್ಲುಗಳು:------------------
ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ಶಂಕರರು ಅನೇಕರನ್ನು ಅಧ್ಯಾತ್ಮಕ್ಕೆ ಸಂಬಂಧಪಟ್ಟ ವಾದದಲ್ಲಿ ಸೋಲಿಸಿದರು.ಇವುಗಳಲ್ಲಿ ಮಂಡನಮಿಶ್ರರನ್ನು ವಾದದಲ್ಲಿ ಸೋಲಿಸಿದ ಘಟನೆ ಬಹು ಪ್ರಮುಖವಾದುದು. ಮಂಡನ ಮಿಶ್ರರೇ ನಂತರ ಶ್ರೀ ಸುರೇಶ್ವರಾಚಾಯ೯ ಎಂಬ ಹೆಸರಿನಿಂದ ಪ್ರಸಿದ್ಧರಾದ ಶಿಷ್ಯರಾದರು.ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠ (ಮಠ) ಗಳನ್ನು ಸ್ಥಾಪಿಸಿ, ಪ್ರತಿಯೊಂದು ಪೀಠಕ್ಕೂ ತಮ್ಮ ಒಬ್ಬೊಬ್ಬ ಶಿಷ್ಯರನ್ನು ಪೀಠಾಧಿಪತಿಯನ್ನಾಗಿಸಿದರು."ಅದ್ವೈತ" ಸಿದ್ಧಾಂತವನ್ನು ಜನಪ್ರಿಯಗೊಳಿಸಿದರು.ಹಲವಾರು ಪಂಡಿತರನ್ನೂ ಶಾಸ್ತ್ರವೇತ್ತರನ್ನೂ ಜಯಿಸಿ, ಸರ್ವಜ್ಞಪೀಠವನ್ನೇರಿದರು. ಭಾರತದ ದಕ್ಷಿಣದಲ್ಲಿ ವಾದಮಾಡಿ ತಮ್ಮನ್ನು ಜಯಿಸುವವರೇ ಇಲ್ಲವೆಂದು ಹೀಗಳೆದು ಶಾರದೆಯ ದೇಗುಲದ ದಕ್ಷಿಣದ ಬಾಗಿಲನ್ನು ಮುಚ್ಚಿಸಿದ್ದ ಕಾಶ್ಮೀರದ ಪಂಡಿತರ ಬಾಯಿ ಮುಚ್ಚಿಸಿದರು; ಕಾಶ್ಮೀರಪುರವಾಸಿನಿ ಶಾರದೆಯ ದೇಗುಲದ ದಕ್ಷಿಣದ್ವಾರವನ್ನೂ, ಅದರೊಂದಿಗೆ ದುರಹಂಕಾರಿ ಔತ್ತರೇಯರ ಕಣ್ಣನ್ನೂ ತೆರೆಸಿದ ದ್ರವಿಡಶಿಶು ಇವರಾದರು.

---------------------:ಶ್ರೀ ಶಂಕರರು ಸ್ಥಾಪಿಸಿದ ನಾಲ್ಕು ಪೀಠಗಳು:------------------
* ಉತ್ತರದಲ್ಲಿ: ಬದರಿ ಪೀಠ - ಉತ್ತರಾಮ್ನಾಯ ಜ್ಯೋತಿರ್ ಮಠ
* ದಕ್ಷಿಣದಲ್ಲಿ: ಶೃಂಗೇರಿ ಪೀಠ - ದಕ್ಷಿಣಾಮ್ನಾಯ ಶ್ಯಾರದೆ ಮಠ
* ಪೂರ್ವದಲ್ಲಿ: ಪುರಿ ಪೀಠ - ಪೂರ್ವಾಮ್ನಾಯ ಗೋವರ್ಧನ ಮಠ
* ಪಶ್ಚಿಮದಲ್ಲಿ ದ್ವಾರಕಾ ಪೀಠ - ಪಶ್ಚಿಮಾಮ್ನಾಯ ಮಠ

ಈ ನಾಲ್ಕೂ ಮಠಗಳು ಇಂದಿಗೂ ತಮ್ಮ ಗುರು ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದು ಅಸಂಖ್ಯಾತ ಮಂದಿ ಅನುಯಾಯಿಗಳನ್ನು ಹೊಂದಿವೆ.ಶಂಕರರು ಬಾದರಾಯಣರ "ಬ್ರಹ್ಮಸೂತ್ರ" (ವೇದಾಂತಸೂತ್ರ)ಗಳಿಗೆ ಭಾಷ್ಯವನ್ನು ರಚಿಸಿದರು. ಉಪನಿಷತ್ತುಗಳಿಗೆ ವ್ಯಾಖ್ಯಾನ ನೀಡಿದರು; ಅಲ್ಲದೆ ಶ್ರೀಮದ್ಭಗವದ್ಗೀತೆಗೆ ಭಾಷ್ಯವನ್ನು ಬರೆದು ಪ್ರಸ್ಥಾನತ್ರಯಗಳನ್ನು ಪೂರ್ಣಗೊಳಿಸಿದರು. ಇವರು ರಚಿಸಿದ "ಭಜ ಗೋವಿಂದಮ್" ಸ್ತೋತ್ರ ಅತ್ಯಂತ ಪ್ರಸಿದ್ಧವಾದುದು. ಹಲವಾರು ಇತರ ಸ್ತೋತ್ರಗಳನ್ನೂ ಶಂಕರರು ರಚಿಸಿದ್ದಾರೆ.

ತಾಯಿಗೆ ಕೊಟ್ಟ ಮಾತಿನ ಪ್ರಕಾರ ಆಕೆಯ ಕೊನೆಗಾಲದಲ್ಲಿ ಕಾಲಟಿಗೆ ಹಿಂದಿರುಗಿದ ಶಂಕರರು ಆಕೆಯ ಅಂತಿಮ ವಿಧಿಗಳನ್ನು ಪೂರೈಸಿದರು. ತಮ್ಮ ಮೂವತ್ತೆರಡನೇ ವಯಸ್ಸಿನಲ್ಲಿ ಶಂಕರರು ಬ್ರಹ್ಮೈಕ್ಯರಾದರು.