ಮುಸುಕಿನ ಗುದ್ದು
ಮನೆಗೆ ಬಂದಿದ್ದ ಗೆಳತಿಯೊಂದಿಗೆ ಮಾತನಾಡುತ್ತಿದ್ದ ಅವಳು ಹೇಳುತ್ತಿದ್ದಳು: 'ಆ ಶ್ಯಾಮಲನ್ನ ನೋಡಿದರೆ ಖುಷಿಯಾಗುತ್ತೆ ಕಣೆ. ಯಾವಾಗಲೂ ನಗುನಗುತ್ತಾ ಇರ್ತಾಳೆ. ಮುಖ ಗಂಟು ಹಾಕಿಕೊಂಡು ಗುಮ್ ಅಂತ ಇರೋರನ್ನ ಕಂಡರೆ ಮೈ ಉರಿಯುತ್ತೆ'. ಪೇಪರ್ ಓದುತ್ತಾ ಕುಳಿತಿದ್ದ ಗಂಡನ ಕಡೆಗೆ ಕಿರುನೋಟ ಬೀರಿ ನೋಡುತ್ತಾ " ಹೀಗೆ ಹೇಳಿದಾಗ ಬೆಳಿಗ್ಗೆ ನಡೆದ ಮಾತಿನ ಚಕಮಕಿಂದ ಮುಖ ದಪ್ಪಗೆ ಮಾಡಿಕೊಂಡಿದ್ದ ಅವನ ಮುಖ ಇನ್ನೂ ದಪ್ಪಗಾಯಿತು.
ಅದೇ ಸಮಯಕ್ಕೆ ಪಕ್ಕದ ಮನೆ ಗಿರಿಜಮ್ಮ ಬಂದವರು, "ಮನೆಗೆ ನೆಂಟರು ಬಂದಿದ್ದಾರೆ. ಹಾಲೆಲ್ಲಾ ಮುಗಿದಿದೆ. ಸಂಜೆ ತರಿಸಿಕೊಡ್ತೀನಿ. ಸ್ವಲ್ಪ ಹಾಲಿದ್ದರೆ ಕೊಡಿ" ಎಂದು ಹದಿನೈದೇ ನಿಮಿಷ ಮಾತನಾಡಿದ್ದರು. ಗಂಡ ಕೊಡಿಸಿದ್ದ ಹೊಸ ಬಂಗಾರದ ಬಳೆ ತೋರಿಸಿಹೋಗೋದು ಮುಖ್ಯ ಕಾರಣ ಆಗಿತ್ತು. ಹೋಗುವಾಗ ಅವಳಿಂದ ಹಾಲಿನ ಜೊತೆಗೆ "ನೀವು ಬಿಡ್ರೀ ಗಿರಿಜಮ್ಮ, ಪುಣ್ಯವಂತರು. ಹೇಳಿದ್ದನ್ನು ಕೇಳೋದಿರಲಿ, ಮನಸ್ಸಿನಲ್ಲಿರೋದನ್ನೂ ಅರ್ಥ ಮಾಡಿಕೊಳ್ಳೋ ಗಂಡನನ್ನು ಪಡೆದಿದ್ದೀರಿ" ಎಂಬ ಶಹಭಾಸಗಿರಿಯನ್ನೂ ತೆಗೆದುಕೊಂಡು ಹೋದರು. ಅವಳು ಮತ್ತೊಂದು ಕೊಂಕುನೋಟ ಗಂಡನೆಡೆಗೆ ಬೀರಿದ್ದಳು. ತಿಂಡಿ ಆದ ಮೇಲೆ ಕಾಫಿಗಾಗಿ ಕಾಯುತ್ತಲೇ ಇದ್ದ ಅವನ ದಪ್ಪ ಮುಖ ಈ ಮಾತಿನಿಂದ ಕೆಂಪಗೂ ಆಯಿತು. ಗೆಳತಿಯೊಡನೆ ಹರಟುತ್ತಾ ಪುರುಸೊತ್ತು ಮಾಡಿಕೊಂಡು ಕಾಫಿ ಮಾಡಿದ ಅವಳು ಗೆಳತಿಗೆ ಕೊಟ್ಟು, ಗಂಡನ ಮುಂದೆಯೂ ಒಂದು ಲೋಟ ಕುಕ್ಕಿ ಪಿಸುಗುಟ್ಟಿದ್ದಳು: "ಉರಾ ಉರಾ ಅಂತಿರಬೇಡಿ. ಬಂದವರ ಎದುರಿಗಾದರೂ ನಗುನಗುತ್ತಾ ಇರಿ." ಕಾಫಿ ಗಟಗಟ ಕುಡಿದು ಎದ್ದು ರೂಮಿಗೆ ಹೋದ ಅವನು ಕನ್ನಡಿಯಲ್ಲಿ ಮುಖ ನೋಡಿಕೊಂಡ. ಬಲವಂತದ ನಗೆ ನಕ್ಕ ಅವನ ಮುಖ ಅವನಿಗೇ ವಿಚಿತ್ರವಾಗಿ ಕಂಡಿತು.
Comments
ಅಕ್ಕಪಕ್ಕದ ಮನೆಯವರು ಬರುವಾಗ
In reply to ಅಕ್ಕಪಕ್ಕದ ಮನೆಯವರು ಬರುವಾಗ by partha1059
;())))000
In reply to ;())))000 by venkatb83
ನಿಮಗೂ ಅನುಭವವಾಗಲಿ! :)))
In reply to ಅಕ್ಕಪಕ್ಕದ ಮನೆಯವರು ಬರುವಾಗ by partha1059
ಹೌದಲ್ವೇ? ::))))
In reply to ಹೌದಲ್ವೇ? ::)))) by bhalle
ಹೌದು! :) ಅಲ್ಲ! :) ಹೌದಲ್ಲ!! :)
In reply to ಅಕ್ಕಪಕ್ಕದ ಮನೆಯವರು ಬರುವಾಗ by partha1059
ಒಂದು ರೀತಿ ನಿಮ್ಮ ಅಭಿಪ್ರಾಯ ಸರಿ.
In reply to ಒಂದು ರೀತಿ ನಿಮ್ಮ ಅಭಿಪ್ರಾಯ ಸರಿ. by kavinagaraj
ಅನುಭವದ ಮುಂದೆ ಏನೂ ಹೇಳೋಕ್ಕೆ
In reply to ಅನುಭವದ ಮುಂದೆ ಏನೂ ಹೇಳೋಕ್ಕೆ by Prakash Narasimhaiya
:))