ಮಗಳು

ಅಪ್ಪನಿಗೊಂದು ಪತ್ರ

ಪ್ರೀತಿಯ ಪಪ್ಪಾ,
ಹೇಗಿದ್ದೀರಾ? ನಾನು ಚೆನ್ನಾಗಿದ್ದೇನೆ ಆದರೆ ಮನಸ್ಸು ಯಾವುದೋ ಸುಳಿಯಲ್ಲಿ ಸಿಕ್ಕಿ ಚಡಪಡಿಸುತ್ತಿದೆ. ನನ್ನ ವೇದನೆಯನ್ನು ಯಾರಲ್ಲೂ ಹೇಳಿ ಕೊಳ್ಳಲು ಆಗದೆ ನಾನು ಒದ್ದಾಡುತ್ತಿದ್ದೇನೆ. ಸುಮ್ಮನೆ ಕುಳಿತು ಜೋರಾಗಿ ಅತ್ತು ಬಿಡಬೇಕೆಂದು ಅನಿಸುತ್ತಿದೆ. ಆದರೆ ಅಳುವಷ್ಟು ಸ್ವಾತಂತ್ರ್ಯವೂ ನನ್ನಲ್ಲಿ ಇಲ್ಲಪ್ಪಾ...
 
ದಿನವೂ ನಗು ನಗುತ್ತಿದ್ದ ಹುಡುಗಿ ನಾನು. ನನ್ನ ಜೀವನದಲ್ಲಿ ನಾನು ಬಯಸಿದ್ದೆಲ್ಲವನ್ನೂ ನೀವು ನನಗೆ ನೀಡಿದ್ದೀರಿ. ಚಿಕ್ಕವಳಿರುವಾಗ ನಾನು ಅತ್ತರೆ ನಿಮ್ಮ ಮನಸ್ಸು ಅದೆಷ್ಟು ನೋಯುತಿತ್ತು!. ನಾನು ದೂರದ ಊರಿಗೆ ಹೊರಟು ನಿಂತಾಗ ನಿಮ್ಮ ಕಣ್ಣಂಚಲ್ಲಿ ನೀರ ಹನಿ ಕಂಡಿದ್ದೆ. ಕಣ್ಣೀರೊರಸುತ್ತಾ ನಿಮ್ಮನ್ನು ಅಪ್ಪಿ ಹಿಡಿದಾಗ, ಪುಟ್ಟೀ...ನೀನು ಪಪ್ಪನ ಮಗಳಲ್ವಾ.. ಹೀಗೆಲ್ಲಾ ಚಿಕ್ಕ ಮಕ್ಕಳ ತರ ಅಳ್ಬಾದು೯ ಅಂತಾ ನನಗೆ ಮುತ್ತಿಟ್ಟು ಕಳುಹಿಸಿಕೊಟ್ಟವರು ನೀವು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.7 (3 votes)
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಒಂದು ಎರಡು ಬಾಳೆಲೆ ಹರಡು..

ನನ್ನ ಮಗಳು "ಇಸ್ರಾ" ಈಗ ಎರಡು ವರ್ಷದ ಪುಟಾಣಿ. ಪುಟು ಪುಟು ಮನೆತುಂಬಾ ಓಡಾಡುತ್ತಾ ತನ್ನ ಅಣ್ಣನನ್ನು ಕೆಣಕಿ ಸತಾಯಿಸುತ್ತಾ ಕಾಲ ಕಳೆಯುವುದನ್ನು ನೋಡುವುದೇ ಕಣ್ಣಿಗೆ ಹಬ್ಬ. ಮನೆಯ ಹೊರಗೆ ಕಾರಿನ ಶಬ್ದ ಕೇಳುತ್ತಲೇ ತಾನೇ ಬಾಗಿಲು ತೆರೆದು ಜಿಗಿದುಬಂದು ಗೇಟಿನ ಹತ್ತಿರ ನಿಂತು ನನ್ನನ್ನು ಬರಮಾಡಿಕೊಂಡಾಗ ಎಲ್ಲಾ ಆಯಾಸವೂ ಮಾಯ. ಮಕ್ಕಳು ಮನೆಯಲ್ಲಿ ಸಡಗರವನ್ನೂ, ನಮ್ಮ ಮನದಲ್ಲಿ ಸಂತಸವನ್ನೂ ತುಂಬಿ ನಮ್ಮನ್ನು ನಮ್ಮ ಕೆಳೆದುಹೋದ ಬಾಲ್ಯದ ಕಡೆ ನೆನಪುಗಳು ಹರಿಯುವಂತೆ ಮಾಡುತ್ತಾರೆ. ಮಕ್ಕಳೊಂದಿಗೆ ಮಗುವಾಗಿ ಆಡದವರು ಯಾರು? ಒಮ್ಮೆ ಪ್ರವಾದಿಗಳು ಮಕ್ಕಳೊಂದಿಗೆ ನಗುತ್ತಾ ಮಾತನಾಡುತ್ತಾ ಅವರೊಂದಿಗೆ ಮಕ್ಕಳಂತೆ ಬೆರೆತಿದ್ದನ್ನು ನೋಡಿ ಒಬ್ಬರು ಹೇಳಿದರು, ಪ್ರವಾದಿಗಳೇ ನನಗಂತೂ ಮಕ್ಕಳೊಂದಿಗೆ ಹೀಗೆ ಇರುವುದು ಬಿಡಿ ಅವರೊಂದಿಗೆ ತಾಳ್ಮೆಯೊಂದಿಗೆ ಇರಲೂ ಸಾಧ್ಯವಿಲ್ಲ ಎಂದು. ಅದಕ್ಕೆ ಪ್ರವಾದಿಗಳು ಆ ಕರುಣಾಮಯನಾದ ಅಲ್ಲಾಹನೇ ನಿಮ್ಮ ಮನಸ್ಸಿನಲ್ಲಿ ಕರುಣೆಯನ್ನು ಹಾಕದಿದ್ದರೆ ನನ್ನಿಂದೇನು ಮಾಡಲು ಸಾಧ್ಯ ಎಂದುತ್ತರಿಸಿದರು.  

ನನ್ನ ಮಗಳು ಮಾತಿನಲ್ಲಿ ಸ್ವಲ್ಪ ಹಿಂದೆಯೇ ಎನ್ನಬಹುದು. ಅವಳಿಗಿಂತ ಕೇವಲ ಎರಡು ವಾರಗಳ ಹಿರಿಯನಾದ ನನ್ನ ತಂಗಿಯ ಮಗ "ಅಹ್ಮದ್" ಮಾತಿನ ಗಣಿ. ಮನೆಯಲ್ಲಿ ಕೆಲಸಕ್ಕಿರುವ ಇಂಡೊನೆಷ್ಯಾ ದೇಶದ ಮೇಡ್ ಒಂದಿಗೆ ಸೇರಿ ಅರಬ್ಬೀ ಭಾಷೆಯನ್ನೂ ಉಲಿಯುತ್ತಾನೆ. ನನ್ನ ತಂಗಿಗೆ ತನ್ನ ಮಕ್ಕಳಿಗೆ ಕನ್ನಡದ ಚಿಕ್ಕ ಪುಟ್ಟ ಕವನ ಹೇಳಿಕೊಡುವ ಚಪಲ. ತನ್ನ ಮೊದಲ ಮಗ " ಅಯ್ಮನ್" ಒಂದು ಎರಡು ಬಾಳೆಲೆ ಹರಡು ಎಂದು ಹಾಡುವುದನ್ನು ನಮಗೆಲ್ಲಾ ಕೇಳಿಸಿ ಸಂತಸ ಪಡುತ್ತಿದ್ದಳು. ಹಾಗೆಯೇ ಅಹ್ಮದ್ ನಿಗೂ ಒಂದು ಪದ್ಯ ಹೇಳಿಕೊಟ್ಟಾಗ ಅದನ್ನು ಬಹಳ ಬೇಗ ತನ್ನ ಅಣ್ಣನಂತೆಯೇ ಕರಗತ ಮಾಡಿಕೊಂಡ. ಮೊನ್ನೆ ಅವನ ಮನೆಗೆ ಹೋದಾಗ ಅವನ ಕವನ ಗೋಷ್ಠಿ ಜೋರಾಗಿ ನಡೆಯುತ್ತಿತ್ತು...

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4 (5 votes)
To prevent automated spam submissions leave this field empty.
Subscribe to ಮಗಳು