ಹಳೆಯ ನೆನಪೇ
ಬರಹ
ಹಳೆಯ ನೆನಪೇ
ಚುಚ್ಚದಿರು ಮತ್ತೆ ಮತ್ತೆ
ಮರೆಯಲೆಂದೇ ನಿನ್ನ
ಸೋತಿಹೆನು ಪ್ರತಿದಿನ
ಕಹಿಯಾದ ಘಟನೆಗಳ
ಹಳೆಯ ಪುಟಗಳಲಿ
ಮುಚ್ಚಿಟ್ಟು ಆಳದಲಿ
ಮತ್ತೆ ಎದ್ದು ಬರದಿರಲೆಂದು
ಹತ್ತಾರು ವರುಷಗಳಿಂದ
ಹಲವು ಊರುಗಳದಾಟಿ
ನಿತ್ಯ ಹಸಿರನು ಹೊತ್ತು
ನಿನ್ನ ಮರೆಯಲೆಂದೇ
ನಿನ್ನ ತೊರೆಯಲು ನಾ
ಮರಳಿ ಯತ್ನವ ಮಾಡೆನು
ಇರುವೆ ನಿನ್ನ ಜೊತೆಗೇ
ನಾ ಮರೆಯಾಗುವವರೆಗೆ