ಊರು

ಎಲ್ ಕಮೀನೋ ರಿಯಾಲ್

ಎಲ್ ಕಮೀನೋ ರಿಯಾಲ್’ ಅಂದ್ರೆ ’ರಾಜಮಾರ್ಗ’ - ಇದು ಸ್ಪ್ಯಾನಿಶ್ ಮಿಶನ್ ಗಳ ಕಾಲದಲ್ಲಿ ಕ್ಯಾಲಿಫೋರ್ನಿಯದ ದಕ್ಷಿಣ ತುದಿಯಿಂದ ರಾಜ್ಯದ ನಡುವಿನ ಸ್ಯಾನ್ ಫ್ರಾನ್ಸಿಸ್ಕೋ ಕೊಲ್ಲಿ ಪ್ರದೇಶದ ವರೆಗೆ ಇದ್ದ ಮಿಶನ್ ಗಳನ್ನು ಸೇರಿಸುತ್ತಿದ್ದ ರಸ್ತೆ. ಈಗ ಹಳೇ ರಸ್ತೆ ಇಲ್ಲ ಬಿಡಿ. ಆದರೂ ಅದು ಹಾದು ಹೋಗುತ್ತಿದ್ದ ಕಡೆಯಲ್ಲಿ ಅದೇ ಹೆಸರೇ ಉಳಿದಿದೆ. ಕೆಲವು ಕಡೆ ಹಿಂದಿನ ಕಾಲದಲ್ಲಿ ಹೇಗಿತ್ತೋ ಹಾಗೇ ಕಟ್ಟಡಗಳನ್ನೂ ಉಳಿಸಿಕೊಂಡಿರುವುದೂ ಇದೆ.

 

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಊರಿಗೆ ಪ್ರೀತಿಯ ಕರೆಯೋಲೆ

ಜನವರಿಯ ಜಾತ್ರೆ. ನೆಹರೂ ಬಟರ್ ಸ್ಟೋರ್. ಮಂಗಳವಾರ ಸಂತೆ. ಚಳಿಗಾಲದ ಕಾವಳ. ಅದರ ಜೊತೆಗೆ ಸೊಗಡಿನ ಅವರೇಕಾಯಿ.ರಾತ್ರಿ ಓಡಾಡುವಾಗ ಜೀವವೇ ಬಾಯಿಗೆ ಬರುವಂತೆ ಬೊಗಳುವ ಬೀದಿ ನಾಯಿಗಳು. ಸುಧಾ ಹೋಟೆಲ್ಲಿನ ಮಸಾಲೆ ದೋಸೆ. ಕಟ್ಟಿನ ಕೆರೆಯ ಬಸ್ ಸ್ಟಾಂಡ್. ಜಾತ್ರೆ ಮಾಳಕ್ಕೆ ಹೋಗುವ ಅಲಂಕಾರ ಮಾಡಿರುವ ರಾಸುಗಳು. ಪಿಕ್ಚರ್ ಪ್ಯಾಲೇಸ್ ಮುಂದೆ ಚೌಕಾಸಿ ವ್ಯಾಪಾರ. ಗಂಧದ ಕೋಟಿ.  ಸಂಪಿಗೆ ರಸ್ತೆ. ವರುಷದಲ್ಲಿ ಒಮ್ಮೆ ಮಾತ್ರ ಹತ್ತು ದಿನ ತೆಗೆಯುವ ಊರ ದೇವತೆಯ ಗುಡಿ. ಮೂರು ತಿಂಗಳ ಸೋನೆ ಮಳೆ. ಗಣಪತಿ ಪೆಂಡಾಲಿನಲ್ಲಿ ಕದ್ರಿ ಗೋಪಾಲನಾಥ್ ಸ್ಯಾಕ್ಸಫೋನ್ ಕಚೇರಿ. ಡಬಲ್ ಟ್ಯಾಂಕ್ ಬಳಿ ಆಡುವ ಹುಡುಗರು. ಆಂಜನೇಯನ ದೇವಸ್ಥಾನದಲ್ಲಿ ಸಂಸ್ಕೃತ ಶಾಲೆ. ವರ್ಷಗಟ್ಟಲೆ ಟಾರು ಕಾಣದೇ ಮಳೆಗಾಲದಲ್ಲಿ ಕೆಸರಿನ ಓಟಕ್ಕೆ ಲಾಯಕ್ಕಾದ ರಸ್ತೆಗಳು.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಮೂಗೂರಿನ ತಿಬ್ಬಾದೇವಿ...

ಮೈಸೂರಿನ ಬಳಿ ಮೂಗೂರಿನಲ್ಲಿ ತಿಬ್ಬಾದೇವಿ ಗುಡಿಯಿದೆ.

 

     ಗುಡಿಗೆ ತನ್ನದೇ ಐತಿಹಾಸಿಕ ಮತ್ತು ಪೌರಾಣಿಕ ಕಥೆಗಳಿದ್ದು ಅವುಗಳಲ್ಲಿ ಇಂದಿಗೂ ಪಾಲನೆಯಘುತ್ತಿರುವ ಪವಾಡಗಳು ಅಚ್ಚರಿ ಹುಟ್ಟಿಸುತ್ತವೆ. ಗುಡಿಯನ್ನು ನವಾಬನೊಬ್ಬ ಕಟ್ಟಿಸಿದನಂತೆ.

    ಮೂಗೂರಿನ ನೇರಳೆಮರದ ಕೆಳಗೆ ವಿಶ್ರಾಂತಿಗಾಗಿ ಮಲಗಿದ್ದ ನವಾಬನಿಗೆ ದೇವಿ ಕನಸಲ್ಲಿ ಕಾಣಿಸಿಕೊಂಡು ಗುಡಿಕಟ್ಟಿಸಲು ಅಪ್ಪಣೆ ನೀಡಿದಳಂತೆ. ಕನಸಲ್ಲಿಯೇ ನವಾಬನು ದೇವಿಗೆ ನೀನು ನಿಜವಾದ ಮಹಿಮೆಯೇ ಆಗಿದ್ದರೆ ತಲೆಕೆಳಗಾಗಿ ಹೂತಿಟ್ಟ ಕೊರಡು ಜೋಳವನ್ನು ಚಿಗುರಿಸು ಎಂದು ಸವಾಲು ಹಾಕಿದನಂತೆ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (2 votes)
To prevent automated spam submissions leave this field empty.

‘ಪಾಟಿ ಮೇಲೆ ಪಾಟಿ, ನಮ್ಮ ಸಾಲಿ ಸೂಟಿ’

ಬೆಳೆಯುತ್ತ ಬೆಳೆಯುತ್ತ ನಾವು ಬಾಲ್ಯವನ್ನೇ ಮರೆಯುತ್ತೇವೆ.

ಏಕೋ ಇವತ್ತು ಈ ಭಾವನೆ ಬಲವಾಗಿ ಕಾಡತೊಡಗಿದೆ. ಚಿಕ್ಕವರಿದ್ದಾಗ ಬೇಗ ಬೇಗ ದೊಡ್ಡವರಾಗಬೇಕು ಎಂದು ಹಂಬಲಿಸುತ್ತೇವೆ. ಬೆಳೆದು, ಜವಾಬ್ದಾರಿಗಳು ಹೆಗಲಿಗೇರಿದಾಗ ಬಾಲ್ಯ ಪ್ರಿಯವಾಗತೊಡಗುತ್ತದೆ. ಕಳೆದುಕೊಂಡಿದ್ದಕ್ಕಾಗಿ, ಇಲ್ಲದಿರುವುದಕ್ಕಾಗಿ ಹಂಬಲಿಸುವುದು ಮನುಷ್ಯನ ಜೊತೆಗೇ ಬೆಳೆದುಬಂದ ಗುಣವಿರಬೇಕು.

ಅದಕ್ಕೆಂದೇ ಬಾಲ್ಯ ಒಂದು ಶಾಶ್ವತ ನೆನಪು.

ಬಾಲ್ಯದ ಎಲ್ಲ ನೆನಪುಗಳೂ ಸುಂದರ ಎಂದು ಹೇಳಲಾಗದು. ಆದರೂ, ಹಲವಾರು ಕಾರಣಗಳಿಗಾಗಿ ಅದು ಪ್ರಿಯವೇ. ತೀರ ದುಃಸ್ಥಿತಿ ಎದುರಿಸಿದವರನ್ನು ಬಿಟ್ಟರೆ, ಬಹುತೇಕ ಜನರ ಪಾಲಿಗೆ ಬಾಲ್ಯದ ನೆನಪೇ ಸುಂದರ. ಈಗಿನ ಸೌಲಭ್ಯಗಳ್ಯಾವವೂ ಇದ್ದಿರದಿದ್ದರೂ ನಮ್ಮ ಬಾಲ್ಯ ನಮಗೆ ಸೊಗಸೇ.

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 4.9 (11 votes)
To prevent automated spam submissions leave this field empty.

ಊರು, ಅಜ್ಜಿ, ಮಳೆ ಮತ್ತು ಅಜ್ಜನ ನೆನಪು...

ಸಾಗರದಲ್ಲಿ ಬೆಳಗ್ಗೆ ಬಸ್ಸಿಳಿದಾಗಿನಿಂದ ಜಿಟಿಜಿಟಿ ಮಳೆ. ರಸ್ತೆ,ರಸ್ತೆಬದಿಯ ಹುಲ್ಲು ಹಾಸು, ಹೂಳುತುಂಬಿದ ಕೆರೆಯ ಮುಕ್ಕಾಲು ಭಾಗ ತುಂಬಿದ ಜೊಂಡುಹುಲ್ಲು, ಮಳೆಯಿಂದ ತುಂಬಿದ ಮಧ್ಯಭಾಗದಲ್ಲಿ ಅರಳುಮೊಗ್ಗಾದ ಕಮಲಗಳು.. ಸುತ್ತ ಮಾತಿಲ್ಲದೆ ಜೊತೆಯಾಗಿ ನಿಂತ ಬಿಳಿಬಿಳಿ ಕಟ್ಟಡಗಳು ಕೆರೆಯಾಚೆಗಿನ ರಸ್ತೆಯಂಚಿನ ದೊಡ್ಡ ದೊಡ್ಡ ಮರಗಳು ಎಲ್ಲವೂ ಮಳೆಯ ಸೋನೆಗೆ ಮೈಯೊಡ್ಡಿ ಸೊಂಪಾಗಿ ಕಾಣುತ್ತಿತ್ತು. ತುಂಬ ದಿನಗಳ ನಂತರ ಊರಿಗೆ ಹೋಗಿದ್ದೆ. ಎಲ್ಲ ಅವತ್ತು ೧೫ ವರ್ಷಗಳ ಮುಂಚೆ ಒಂದು ಮಳೆಗಾಲದಲ್ಲಿ ನಾನು ಹೊರಟಾಗ ಇದ್ದಂತೆಯೇ ಕಂಡರೂ ಎಲ್ಲ ಬೇರೆಯೇ ಅಂತ ಗೊತ್ತಾಗುತ್ತಿತ್ತು. ಕಳೆದಕಾಲದೊಡನೆ ಬದಲಾದ ಊರು ಮತ್ತು ನಾನು..

ಅಜ್ಜಿಗೆ ಸ್ವಲ್ಪ ಹುಷಾರಿರಲಿಲ್ಲ. ನನಗೆ ನೋಡಲೇಬೇಕೆನ್ನಿಸಿತ್ತು. ಎಷ್ಟೇ ಫೋನಿನಲ್ಲಿ ಮಾತಾಡಿದರೂ ನನ್ನ ಸ್ವರದ ಅಂದಾಜಿನ ಮೇಲೆ ಮಾತನ್ನು ಊಹಿಸುವ ಇಳಿವಯಸ್ಸಿನ ಅರೆಕಿವುಡು. ನನಗೆ ಅವಳ ಜೊತೆಕೂತು ಮಾತುಕತೆ ಹೊಸೆಯಬೇಕಿತ್ತು. ಬೆನ್ನ ಹಿಂದೆ ಜಗ್ಗಿನಿಂತ ಎಲ್ಲ ಕೆಲಸಗಳನ್ನೂ ರಿಕ್ವೆಸ್ಟ್ ಮಾಡಿ ಬದಿಗೆ ಸರಿಸಿ ರಾತ್ರಿ ಬಸ್ಸು ಹತ್ತಿದೆ. ಹಣ್ಣು ಮುಖದ ತುಂಬ ಹೂನಗೆ ಹೊತ್ತವಳು ಕಾದಿದ್ದಳು.. ಯಾವಯಾವುದೋ ವಿಷಯದಲ್ಲಿ ಶುರುವಾದ ಎಲ್ಲ ಮಾತಿನ ಹಾದಿಗಳೂ ಸಾವಿನ ಮನೆಯ ಜಗುಲಿಗೇ ಹೋಗಿ ಸೇರುತ್ತಿತ್ತು. ಅವಳ ಓರಗೆಯವರನೇಕರು, ಚಿಕ್ಕವರು ಮತ್ತು ದೊಡ್ಡವರು ಸಾಕಷ್ಟು ಜನ ಗಂಟು ಮೂಟೆ ಕಟ್ಟಿದ್ದರು. ಒಬ್ಬೊಬ್ಬರು ಹೋದಾಗಲೂ ಮೊದಲ ಆತಂಕ ನೆಕ್ಸ್ಟ್ ನಾನೇ ಏನೋ ಅನ್ನುವುದೇ. ಎರಡನೆಯದು ಯಾವ ಬಗೆಯ ಸಾವು..? ಆಸ್ಪತ್ರೆಯಲ್ಲಿ ಜೀವರಸವನ್ನೂ(ಗ್ಲೂಕೋಸ್) ಹಿಂಡುವ ನೋವಿನೊಂದಿಗೆ ಜೀವದೊಳಗೆ ಬಿಟ್ಟುಕೊಳ್ಳುತ್ತಾ ಬಿಡಲಾರದೆ ಜೀವ ಬಿಡುವುದೋ, ಇಲ್ಲಾ ಮನೆಯಲ್ಲಿ ಬೆಳಿಗ್ಗೆ ತಿಂಡಿ, ಸ್ನಾನ ಚಾ ಆಗಿ ಅಡಿಕೆ ಕುಟ್ಟಿಕೊಂಡು ಎಲೆ ನೀವಿ ಸುಣ್ಣ ಹಚ್ಚುವಾಗ ಗೊತ್ತಾಗದಂಗೆ ಜೀವ ಹೋಗುವುದೋ.. ನೇರವಾಗಿ ಹೀಗೇ ಆಗಲಿ ಎನ್ನುವ ಧೈರ್ಯವಿಲ್ಲವಾದರೂ ಅವಳ ಮನಸ್ಸಿನ ತುಂಬ ಕಾಡಿನಿಂತ ಆಸೆ ಅದೇ.. ಚಿಕ್ಕಂದಿನ ನೆನಪುಗಳಿಂದ ಹಿಡಿದು ಇವತ್ತಿನ ಮಾತ್ರೆಗಳು, ಡಾಕ್ಟರವರೆಗೆ, ಎಲ್ಲ ಮಾತಾಡುತ್ತ ಕೂತೆವು. ನಾಲ್ಕೈದು ಲೋಡು ಕವಳ ಖರ್ಚಾಯಿತು. ಅಂಗಳದಲ್ಲಿ ಮಳೆ ನಮ್ಮ ಮಾತಿಗೆ ಹನಿ ಹಾಕುತ್ತಿತ್ತು.ನಾನು ವಿಮಾನದಲ್ಲ್ ಊರುಗಳಿಗೆ ಹೋಗುವುದನ್ನು ಮತ್ತೆ ಮತ್ತೆ ಕೇಳಿದಳು. ಅವಳಿಗೆ ವಿಮಾನದಲ್ಲಿ ಹೋಗಿನೋಡಬೇಕೆಂಬಾಸೆ ಆದರೆ ಭಯ :)

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to ಊರು