" ಪರೋಪಕಾರಂ ಇದಂ ಶರೀರಂ "
1 day 3 hours ago - Shreerama Diwana
"ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ” - ಮಹಾತ್ಮ ಗಾಂಧಿ. ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ ಗಂಡ ಹೆಂಡತಿ ಮಕ್ಕಳಿಗಾಗಿ. ಕೆಲವರಂತು ತನ್ನ ಮುಂದಿನ ಹಲವು ಪೀಳಿಗೆಗೆ ಆಗುವಷ್ಟು ಹಣ ಮಾಡಲು ಪ್ರಯತ್ನಿಸುತ್ತಾರೆ. ಆದರೆ ದುರಂತವೆಂದರೆ, ಸಾಮಾನ್ಯವಾಗಿ ತನ್ನವರಿಗಾಗಿ ಅಷ್ಟು ದೊಡ್ಡ ಹಣ ಮಾಡಿದ್ದರೂ ಅವರ ಬಗ್ಗೆ ಹತ್ತಿದವರಿಗೆ ಇನ್ನೂ ಮಾಡಬೇಕಿತ್ತು ಎಂಬ ಅಸಮಾಧಾನ ಅತೃಪ್ತಿ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅವರ ಆಸ್ತಿ ಸಂಪಾದನೆಯ ಸಾಧನೆಯ ಬಗ್ಗೆ ಹೆಮ್ಮೆ ಇದ್ದರೂ ಒಂದೆರಡು ಪೀಳಿಗೆಯ ನಂತರ ಅವರ ಹೆಸರನ್ನೇ ಮರೆಯಲಾಗುತ್ತದೆ.
ಆದರೆ ಗೌತಮ ಬುದ್ಧ, ಮಹಾವೀರ, ಬಸವಣ್ಣ, ವಿವೇಕಾನಂದ, ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್ ಮುಂತಾದ ಅನೇಕ ಮಹತ್ವದ ವ್ಯಕ್ತಿಗಳು ತನ್ನ ಮನೆಯವರಿಗಾಗಿ ಹೆಚ್ಚಾಗಿ ಏನನ್ನೂ ಮಾಡಲಿಲ್ಲ. ಆದರೆ ನಾವುಗಳು ಮತ್ತು ಇಡೀ ದೇಶ ಈಗಲೂ ಅವರನ್ನು ನೆನಪಿಸಿಕೊಳ್ಳುತ್ತದೆ ಮತ್ತು ಅವರ ಹುಟ್ಟು ಹಬ್ಬವನ್ನು ಅತ್ಯಂತ ಅಭಿಮಾನದಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿಯವರ ಅನುಭವದ ಹೇಳಿಕೆಯನ್ನು ಗಮನಿಸಬೇಕು ಮತ್ತು ಅರ್ಥೈಸಬೇಕು.
" ಪರೋಪಕಾರಂ ಇದಂ ಶರೀರಂ " ಬದುಕಿನ ಸಾರ್ಥಕತೆ ಅಡಗಿರುವುದೇ ಇತರರ ಸೇವೆಯಲ್ಲಿ. ಕನಿಷ್ಠ ನಮಗಾಗಿ ಮತ್ತು ನಮ್ಮವರಿಗಾಗಿ ಜೊತೆಯಲ್ಲಿ ಇತರರಿಗಾಗಿ ಎಂಬುದು ಹೆಚ್ಚು ಅರ್ಥಪೂರ್ಣ ಎನಿಸುತ್ತದೆ. ಹಿರಿಯರೊಬ್ರು ಹೇಳುತ್ತಿದ್ದರು " ಹಿಂದೆ ನನ್ನದೆಲ್ಲವೂ ನಿನ್ನದೇ " ಎನ್ನುತ್ತಿದ್ದರು. ನಂತರದಲ್ಲಿ " ನನ್ನದು ನನ್ನದೇ ನಿನ್ನದು ನಿನ್ನದೇ " ಎಂಬಂತಾಯಿತು. ಆದರೆ ಈಗಿನ ಆಧುನಿಕ ಕಾ… ಮುಂದೆ ಓದಿ...