ಕುವೆಂಪು ಮತ್ತು ಸಾಹಿತ್ಯ (ಭಾಗ 1)
16 hours 50 minutes ago - Shreerama Diwanaಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕುವೆಂಪು - ಕನ್ನಡ ಭಾಷೆ. ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಸಂದರ್ಭದಲ್ಲಿ ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ. (ಡಿಸೆಂಬರ್ 29)
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು - ಸಂಸ್ಕೃತಿಯನ್ನು - ಕನ್ನಡ ಮಣ್ಣಿನ ಸಾಂಸ್ಕೃತಿಕ ಪ್ರಜ್ಞೆಯನ್ನು ಮುಗಿಲೆತ್ತರಕ್ಕೆ ಏರಿಸಿ ಅದರ ಗಡಿಯನ್ನು ವಿಸ್ತರಿಸಿ ಭಾಷೆಯ ಮಹತ್ವ ಸಾರಿದವರು. ಅಕ್ಷರಗಳಲ್ಲಿ ಕೇವಲ ಭಾವನೆಗಳನ್ನು ಮಾತ್ರ ತುಂಬದೆ ಒಂದು ನಾಡಿನ ಮನುಷ್ಯ ಪ್ರಜ್ಞೆಯನ್ನು ಚಿಂತನೆಯಾಗಿಸಿ ವಿಶ್ವ ಮಾನವತೆಗೆ ದಾರಿ ತೋರಿದ ಅದ್ಬುತ ಚಿಂತಕ.
ಅವರ ನೆನಪಿನ ನೆಪದಲ್ಲಿ ಒಂದಷ್ಟು ಅಕ್ಷರಗಳ ಆತ್ಮಾವಲೋಕನ. ಬರವಣಿಗೆ.... ಅಕ್ಷರಗಳ ಸಂಶೋಧನೆಯೊಂದಿಗೆ ಉಗಮವಾದ ಅದ್ಭುತ ಸೃಷ್ಟಿ ಈ ಬರವಣಿಗೆ. ಅಕ್ಷರಗಳಿಗಿಂತ ಮೊದಲು ಸಹ ಬರವಣಿಗೆ ಅಸ್ತಿತ್ವದಲ್ಲಿತ್ತು. ಆದರೆ ಚಿತ್ರ, ಸಂಜ್ಞೆ ಮುಂತಾದ ವಿಚಿತ್ರ ವೈಶಿಷ್ಟ್ಯ ರೂಪದಲ್ಲಿ ಅದು ಬಳಕೆಯಲ್ಲಿತ್ತು. ಬರವಣಿಗೆ ಅದೊಂದು ಬರೆಯುವ ಕ್ರಿಯೆ ಅಥವಾ ಅಭಿಪ್ರಾಯ ವ್ಯಕ್ತಪಡಿಸುವ ಮಾರ್ಗ ಅಥವಾ ಭಾವನೆಗಳ ದಾಖಲೀಕರಣ ಅಥವಾ ಅಕ್ಷರಗಳ ಜೋಡಣಾ ಸ್ವಾತಂತ್ರ್ಯ ಅಥವಾ ಭಾಷೆಯ ಕ್ರಮಬದ್ಧ ಉಪಯೋಗ ಅಥವಾ ಸಂಪರ್ಕ ಮಾಧ್ಯಮ ಅಥವಾ ಮನುಷ್ಯನ ಒಂದು ಕಲಾ ಪ್ರಕಾರ ಹೀಗೆ ನಾನಾ ರೀತಿಯ ಉತ್ತರಗಳನ್ನು ಹುಡುಕಿ ಹೇಳಬಹುದು.
ಯಾವಾಗ ಬರಹ ಒಂದು ಕ್ರಮಬದ್ಧತೆಯನ್ನು ಪಡೆಯಿತೋ ನಂತರದಲ್ಲಿ ವಿವಿಧ ಭಾಷೆಗಳು ಬೆಳವಣಿಗೆ ಹೊಂದಿದವು. ಅಕ್ಷರ ಸಂಶೋಧನೆಗೂ ಮೊದಲು ಭಾಷೆಗಳು ಅಸ್ತಿತ್ವದಲ್ಲಿದ್ದವು. ಆದರೆ ಲಿಪಿ ಇರಲಿಲ್ಲ. ಲಿಪಿಯ ಉಗಮದ ನಂತರ ಭಾಷೆಗಳು ಮಹತ್ವ ಪಡೆದುಕೊಂಡವು… ಮುಂದೆ ಓದಿ...