ಹೋಮಿಯೋಪತಿ, ಅಲೋಪತಿ, ನ್ಯಾಚುರೋಪತಿ, ಆಯುರ್ವೇದಿಕ್, ಪ್ರಾಣಿಕ್ ಹೀಲಿಂಗ್, ಅಕ್ಯುಪಂಕ್ಚರ್, ಆಕ್ಯುಪ್ರೆಷರ್, ಮನೆ ಮದ್ದು… ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು. ಯೋಗ, ಧ್ಯಾನ, ಪ್ರಾಣಾಯಾಮ, ಓಟ, ಜಿಗಿತ, ಕುಣಿತ, ಕರಾಟೆ, ಕುಂಗ್ ಪು, ಕಳರಿಪಯಟ್ಟು, ಕುಸ್ತಿ, ಕುದುರೆ ಸವಾರಿ. ಎಲ್ಲವೂ ದೇಹ ಮನಸ್ಸುಗಳ ಆರೋಗ್ಯಕ್ಕಾಗಿ ಮಾಡಿಕೊಂಡಿರುವ ತಯಾರಿಗಳು. ಓದು, ಬರಹ, ಪ್ರವಾಸ, ನಾಟಕ, ಸಿನಿಮಾ, ಸಂಗೀತ, ಕಲೆ, ನೃತ್ಯ, ಹಾಡು, ಎಲ್ಲವೂ ಮನರಂಜನೆ ಮತ್ತು ಪ್ರತಿಭಾ ಪ್ರದರ್ಶನಕ್ಕೆ ಕಂಡುಕೊಂಡಿರುವ ಅಭ್ಯಾಸಗಳು, ಮದುವೆ, ಕುಟುಂಬ, ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಎಲ್ಲವೂ ನಮ್ಮ ಹಿತಾಸಕ್ತಿಗಾಗಿ ನಿರ್ಮಿಸಿಕೊಂಡ ಸಂಬಂಧಗಳು.
ಪೋಲೀಸು, ಮಿಲಿಟರಿ, ಅರೆ ಸೇನಾಪಡೆ, ಗೃಹ ರಕ್ಷಕ ದಳ, ಗಡಿ ಭದ್ರತಾ ಪಡೆ, ಎಲ್ಲವೂ ನಮ್ಮ ರಕ್ಷಣೆಗಾಗಿ ಮಾಡಿಕೊಂಡ ವ್ಯವಸ್ಥೆ. ಶಿಕ್ಷಣ, ತರಬೇತಿ, ಉದ್ಯೋಗ, ವ್ಯಾಪಾರ, ಉತ್ಪಾದನೆ, ಎಲ್ಲವೂ ಬದುಕಲು ಕಟ್ಟಿಕೊಂಡ ವ್ಯವಸ್ಥೆ. ಕಾನೂನು, ಆಡಳಿತ, ಅಧಿಕಾರಿಗಳು, ಲೆಕ್ಕ ಪರಿಶೋಧಕರು, ಎಲ್ಲರೂ ನಮ್ಮ ಹಿತಕ್ಕಾಗಿ ಸಕ್ರಿಯವಾಗಿರುವವರು. ದೇವರು, ಧರ್ಮ, ದೇವಸ್ಥಾನ, ಪೂಜಾರಿಗಳು, ಎಲ್ಲವೂ ನಮ್ಮ ಮಾನಸಿಕ ನೆಮ್ಮದಿಗಾಗಿ ಸೃಷ್ಟಿಸಿರುವ ವ್ಯವಸ್ಥೆಗಳು, ಮನೆ, ಹೋಟೆಲ್, ಆಶ್ರಯ, ಛತ್ರ, ಮಠ, ಎಲ್ಲವೂ ನಮ್ಮ ಸೌಕರ್ಯಕ್ಕಾಗಿ ನಿರ್ಮಿಸಿರುವ ಕಟ್ಟಡಗಳು. ಬಾವಿ, ಕೆರೆ, ಸೇತುವೆ, ಕಾಲುವೆ, ಜಲಾಶಯ. ಎಲ್ಲವನ್ನೂ ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಲು ನಿರ್ಮಿಸಿರುವ ವ್ಯವಸ್ಥೆಗಳು.
ಹಣ್ಣು, ತರಕಾರಿ, ಬೇಳೆ, ಸಿರಿ ಧಾನ್ಯಗಳು ಎಲ್ಲವೂ ಆಹಾರಕ್ಕಾಗಿ ಕಂಡುಹಿಡಿದ ವಸ್ತುಗಳು. ಮಂಡಲ, ತಾಲ್ಲೂಕು, ಜಿಲ್ಲೆ, ರಾಜ್ಯ, ದೇಶ, ಎಲ್ಲಾ ವಿಂಗಡನೆಗಳು ತನ್ನ ಸುಖಕ್ಕಾಗಿ ಮಾಡಿರುವ ವ್ಯ…
ಮುಂದೆ ಓದಿ...