ನಿರ್ಭಯಾ ಒಡಲಾಳ… ದಯವಿಟ್ಟು ಕೇಳಿಸಿಕೊಳ್ಳಿ (ಭಾಗ 2)
1 day 22 hours ago - Shreerama Diwana
ಇದನ್ನು ನೋಡಿದ ಖುದಿರಾಮ್ ಜೋರಾಗಿ ಕಿರುಚುತ್ತಾ ನಿಂತಿದ್ದ ಒಬ್ಬನಿಗೆ ಹೊಡೆದು ಮುನ್ನುಗ್ಗಿದ. ತಕ್ಷಣ ಇನ್ನೊಬ್ಬ ಕಬ್ಬಿಣದ ರಾಡಿನಿಂದ ಅವನ ತಲೆಗೆ ಹೊಡೆದು ಸೀಟಿನ ಕೆಳಗೆ ತಳ್ಳಿ ಅವನ ಕತ್ತು ಒತ್ತಿ ಹಿಡಿದ. ನೀವೆಲ್ಲಾ ಭಾವಿಸಿದಂತೆ ಆ ಕ್ಷಣದಲ್ಲಿ ನನಗೆ ಹೆಚ್ಚಿನ ದೈಹಿಕ ನೋವು ಆಗಲಿಲ್ಲ. ಆ ಪರಿಸ್ಥಿತಿಯ ಭೀಕರತೆ ಮತ್ತು ಖುದಿರಾಮನ ತಲೆಯಿಂದ ಚಿಮ್ಮಿದ ರಕ್ತ ನನ್ನ ಮೆದುಳಿನ ಗ್ರಹಿಕೆಯ ಶಕ್ತಿಯನ್ನೇ ಕುಂದಿಸಿತು. ಖುದಿರಾಮ ಆ ನೋವಿನಲ್ಲೂ ಕಿರುಚುತ್ತಿದ್ದ " ನನ್ನನ್ನು ಬೇಕಾದರೆ ಕೊಂದು ಬಿಡಿ. ಅವಳನ್ನು ಮಾತ್ರ ಬಿಟ್ಟು ಬಿಡಿ ಬಿಟ್ಟು ಬಿಡಿ " ಎಂದು ಗೋಗರೆದ. ಅವನ ಧ್ವನಿಯಲ್ಲಿನ ಆಕ್ರಂದನ, ನೋವು, ಕರುಣೆ, ನನ್ನ ಬಗೆಗಿನ ಪ್ರೀತಿ ಕಂಡು ಆ ಒಂದು ಕ್ಷಣ ನನ್ನ ಬದುಕು ಸಾರ್ಥಕವಾಯಿತು ಎಂದೆನಿಸಿತು.
ಉಳಿದ ಮೂವರೂ ಸರದಿಯ ಮೇಲೆ ಅನುಭವಿಸಿದರು. ಕಬ್ಬಿಣದ. ಕೆಳಗೆ ಸಿಲುಕಿದ ನನ್ನ ಬೆನ್ನಿನಲ್ಲಿ ತೀವ್ರ ಗಾಯವಾಯಿತು. ಓಡುತ್ತಿದ್ದ ಬಸ್ಸು ನಿಂತಿತು. ಬಹುಶಃ ತೀಟೆ ತೀರಿದ ಮೇಲೆ ಬಿಟ್ಟು ಬಿಡಬಹುದೆಂದು ಭಾವಿಸಿದೆ. ಇಲ್ಲ ನನ್ನ ದುರಾದೃಷ್ಟ ಅಲ್ಲಿಗೆ ಮುಗಿಯಲಿಲ್ಲ. ಡ್ರೈವರ್ ನೇರವಾಗಿ ಬಂದವನೇ ನನ್ನ ರಕ್ತಸಿಕ್ತ ದೇಹವನ್ನು ಮತ್ತೆ ಪ್ರವೇಶಿಸಿದ… ಖುದಿರಾಮ ಸೀಟಿನ ಕೆಳಗೆ ಅರೆ ಪ್ರಜ್ಞಾವಸ್ಥೆಯಲ್ಲಿ ಇದನ್ನೆಲ್ಲಾ ನೋಡುತ್ತಾ ಅಸಹಾಯಕತೆಯಿಂದ ದುಃಖಿಸುತ್ತಿದ್ದ. ಕ್ಷಮಿಸಿ ಕಣ್ಣು ಮಂಜಾಗುತ್ತಿದೆ. ಆಯಾಸವಾಗಿದೆ. ಹೆಚ್ಚಿಗೆ ಹೇಳಲು ಸಾಧ್ಯವಾಗುತ್ತಿಲ್ಲ. ಸ್ವಲ್ಪ ವಿಶ್ರಾಂತಿ ಪಡೆದು ಮುಂದುವರಿಸುತ್ತೇನೆ.....
ಆ ಡ್ರೈವರ್ ಅನುಭವಿಸಿ ಮತ್ತೆ ಚಾಲಕನ ಸೀಟಿನತ್ತ ತೆರಳಿದ. ಆಗ ಇದನ್ನೆಲ್ಲಾ ನೋಡುತ್ತಾ ಯಾರಾದರೂ ಬಂದರೆ ಎಚ್ಚರಿಸಲು ಒಬ್ಬ ಹುಡುಗ ಕಾವಲಿನಂತೆ ಕೆಲಸ ಮಾಡುತ್ತಿದ್ದ. ನನ್ನ ತಮ್ಮನಂತೆ ಕಾಣಿಸುತ… ಮುಂದೆ ಓದಿ...