"ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " - ಸ್ವಾಮಿ ವಿವೇಕಾನಂದ. ಜೊತೆಗೆ ಹೃದಯ ಅಥವಾ ಮನಸ್ಸು ಶುದ್ದವಾಗಿದ್ದರೆ ಜ್ಞಾನ ಅಲ್ಲಿ ಶಾಶ್ವತವಾಗಿ ನೆಲೆಸುತ್ತದೆ. ಎಷ್ಟೊಂದು ಅರ್ಥಪೂರ್ಣ ಮತ್ತು ಅನುಭವದ ಮಾತು. ಇದು ಅಕ್ಷರಶಃ ಸತ್ಯವಾದ ಮಾತು.
ನೀವು ಯಾವುದೇ ಕ್ಷೇತ್ರದಲ್ಲಿರಲಿ, ಎಷ್ಟೇ ಪ್ರತಿಭಾವಂತರಾಗಿರಿ, ನಿಮ್ಮ ಹೃದಯ ವಿಶಾಲ ಮತ್ತು ಶುದ್ದವಾಗಿಲ್ಲದಿದ್ದರೆ ನೀವು ಎಷ್ಟೇ ಜನಪ್ರಿಯರಾಗಿರಿ, ಎಷ್ಟೇ ಶ್ರೀಮಂತರಾಗಿರಿ, ಎಷ್ಟೇ ದೊಡ್ಡ ಹುದ್ದೆಯಲ್ಲಿರಿ ನಿಮ್ಮ ಜ್ಞಾನ ಒಂದು ಮಿತಿಗೆ ಒಳಪಟ್ಟಿರುತ್ತದೆ. ಆ ಜ್ಞಾನ ಕೃತಕವಾಗಿರುತ್ತದೆಯೇ ಹೊರತು ಸಹಜವಾಗಿರುವುದಿಲ್ಲ. ಅದನ್ನು ಮೇಲ್ನೋಟಕ್ಕೆ ಗುರುತಿಸಲು ಸಾಧ್ಯವಾಗದೆ ಇರಬಹುದು. ಆದರೆ ನಿಜವಾದ ಪ್ರಜ್ಞಾವಂತ ಖಂಡಿತ ಗ್ರಹಿಸಬಲ್ಲ. ಸಾಹಿತ್ಯ, ಸಂಗೀತ, ನೃತ್ಯ, ಕಲೆ, ವಿಜ್ಞಾನ ಯಾವುದೇ ಇರಲಿ, ಸಂಕುಚಿತ ಮತ್ತು ಅಶುದ್ಧ ಮನೋಭಾವದ ವ್ಯಕ್ತಿಗಳ ಮನಸ್ಸು ಜ್ಞಾನದ ನೆಲೆಯಾಗಲು ಸಾಧ್ಯವಿಲ್ಲ. ಅದು ತೋರಿಕೆಯ ಒಣ ಪ್ರದರ್ಶನ ಮಾತ್ರ.
ಉದಾಹರಣೆಗೆ ಸಾಹಿತ್ಯ ಕ್ಷೇತ್ರದ ಬಗ್ಗೆ ಹೇಳುವುದಾದರೆ, ಸಾಹಿತ್ಯವೆಂಬ ಸಾಗರದಲ್ಲಿ ಈಜಾಡುತ್ತಾ, ಅಕ್ಷರಗಳನ್ನು ಭಾವನೆಗಳನ್ನು ಅರಿಯುತ್ತಾ, ಓದುತ್ತಾ - ಬರೆಯುತ್ತಾ - ಗ್ರಹಿಸುತ್ತಾ, ಅನುಭವದಲ್ಲಿ ಮೂಡಿದ ಕೆಲವೇ ಹನಿಗಳಂತ ಒಂದು ಅನಿಸಿಕೆ ಯುವ ಸಾಹಿತ್ಯದ ಬರಹಗಾರರಿಗಾಗಿ. ವಿದ್ಯೆಗೆ ವಿನಯವೇ ಭೂಷಣ. ಅಕ್ಷರಗಳಲ್ಲ. ಮನದ ಸಹಜ ಭಾವನೆಗಳಿಗೆ ಅಕ್ಷರ ರೂಪ ಕೊಟ್ಟಾಗ, ಒಂದಷ್ಟು ಗಟ್ಟಿಯಾದ ಸಾಹಿತ್ಯ ಸೃಷ್ಟಿಯಾಗುತ್ತದೆ. ಅಕ್ಷರಗಳಲ್ಲಿಯೇ ಭಾವನೆಗಳನ್ನು ಕಲ್ಪಿಸಿಕೊಂಡು ಮೂಡಿಸಿದಾಗ, ಕೃತಕವಾದ ಬಾಲಿಶ ಸಾಹಿತ್ಯ ರಚನೆಯಾಗುವ ಸಾಧ್ಯತೆಯಿದೆ. ಇವುಗಳ ನಡುವಿನ ವ್ಯತ್ಯಾಸಗಳನ್ನು ಸೂಕ್ಷ್ಮವಾಗಿ ಗಮನಿಸಿದ…
ಮುಂದೆ ಓದಿ...