ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಸರಕಾರ ತಕ್ಷಣ ಕ್ರಮ ಕೈಗೊಳ್ಳಲಿ
ರಾಜ್ಯದ ಸರಕಾರಿ ಶಾಲೆಗಳಲ್ಲಿ ಗಣಿತ ಮತ್ತು ವಿಜ್ಞಾನ ಶಿಕ್ಷಕರ ಭಾರೀ ಕೊರತೆ ಇರುವುದು ಬಹಳ ದೊಡ್ಡ ವಿಪರ್ಯಾಸ. ಈ ಎರಡು ಪ್ರಮುಖ ವಿಷಯಗಳ ಸಹಿತ ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಟ್ಟು ೫೦ ಸಾವಿರ ಶಿಕ್ಷಕರ ಹುದ್ದೆಗಳು ಭರ್ತಿಯಾಗದೆ ಖಾಲಿ ಇವೆ. ಪ್ರಾಥಮಿಕ ತರಗತಿಗಳಲ್ಲಿ ಗಣಿತ, ವಿಜ್ಞಾನ ಸಹಿತ ಎಲ್ಲ ವಿಷಯಗಳ ಬೋಧನೆ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬಹುಮುಖ್ಯ.