ಗಾಳಿ ತಂಗಾಳಿಯಾದೀತು!!!
ಸಖೀ,
ಇಂದು ನಿನ್ನ
ದರುಶನವಾಗಿಲ್ಲವೆಂಬ
ಮುನಿಸು ನನಗಿದ್ದಷ್ಟೇ
ಆ ಸೂರ್ಯನಿಗೂ
ಇದೆ ನೋಡು,
ಅದಕ್ಕೇ ಮರೆಯಾಗಿ
ಕೂತಿದ್ದಾನೆ
ಕೋಪಿಸಿಕೊಂಡು;
ನೀನಿಂದು ಎರಡು
ಸವಿಮಾತ ಆಡಿಲ್ಲವೆಂಬ
ಬೇಸರ ನನಗಿದ್ದಷ್ಟೇ
ಬೀಸುತ್ತಿರುವ ಗಾಳಿಗೂ ಇದೆ,
ನನ್ನ ಉಸಿರು ಬಿಸಿಯಾಗಿರುವಂತೆ
ಆ ಗಾಳಿಯಲೂ ಇಂದು
ಎಂದಿಲ್ಲದ ರೋಷವಿದೆ
ಕಂಡಿಲ್ಲದ ಬಿಸಿ ಇದೆ;
ಸಖೀ,
ಬಂದು ಬಿಡು
- Read more about ಗಾಳಿ ತಂಗಾಳಿಯಾದೀತು!!!
- 12 comments
- Log in or register to post comments