ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಗಿಬ್ರಾನನ ಜೀಸಸ್

"ನನ್ನಯ ಬಾಳಿನಲ್ಲಿ ಜೀವಿಸುವುದು ನಾನಲ್ಲ, ಯೇಸುವೆ ನನ್ನಲಿ ಜೀವಿಸುತ್ತಾರಲ್ಲ" ಎಂದೊಬ್ಬ ಕವಿಹೃದಯಿ ಹಾಡಿದ್ದಾನೆ. ಇಂಥದೇ ಧ್ವನಿಯ ಒಂದು ಕವಿಹೃದಯ ಇಪ್ಪತ್ತನೇ ಶತಮಾನದ ಪ್ರಾರಂಭಕಾಲದಲ್ಲಿ ಯೇಸುಕ್ರಿಸ್ತನು ನೆಲೆಸಿದ ದೇಶಕ್ಕೆ ಸಮೀಪದ ಲೆಬನಾನ್ ಎಂಬ ನಾಡಲ್ಲಿ ನೆಲೆಸಿತ್ತು. ಕಹ್ಲಿಲ್ ಗಿಬ್ರಾನ್ ಎಂಬ ಆ ಕವಿಚೇತನ ಯೇಸುವಿನ ನಡೆನುಡಿಯನ್ನು ಆತನ ಸಮಕಾಲೀನರಿಂದ ಸುಶ್ರಾವ್ಯವಾದ ಮಂಜುಳ ನಿನಾದದಂತೆ ಹೇಳಿಸಿದ್ದಾನೆ. ಒಂದು ರೀತಿಯಲ್ಲಿ ಯೇಸುವನ್ನು ನೋಡದೆ, ಯೇಸುವನ್ನು ಸ್ಪರ್ಶಿಸದೆ ಕೇವಲ ಅವನ ಬಟ್ಟೆಯಂಚನ್ನು ಮುಟ್ಟಿ ಪರಮಪಾವನನಾದಂತೆ ಆ ಎಪ್ಪತ್ತು ವ್ಯಕ್ತಿಗಳ ಮುಖಾಂತರ ಯೇಸುವಿನ ವ್ಯಕ್ತಿತ್ವವನ್ನು ಸ್ವತಃ ಅನುಭವಿಸುತ್ತಾನೆ, ಯೇಸುವನ್ನೇ ತನ್ನಲ್ಲಿ ಧರಿಸುತ್ತಾನೆ.

ಗಿಬ್ರಾನನ ಜೀಸಸ್

ಪುಸ್ತಕದ ಲೇಖಕ/ಕವಿಯ ಹೆಸರು
ಕಹ್ಲಿಲ್ ಗಿಬ್ರಾನ್

"ನನ್ನಯ ಬಾಳಿನಲ್ಲಿ ಜೀವಿಸುವುದು ನಾನಲ್ಲ, ಯೇಸುವೆ ನನ್ನಲಿ ಜೀವಿಸುತ್ತಾರಲ್ಲ" ಎಂದೊಬ್ಬ ಕವಿಹೃದಯಿ ಹಾಡಿದ್ದಾನೆ. ಇಂಥದೇ ಧ್ವನಿಯ ಒಂದು ಕವಿಹೃದಯ ಇಪ್ಪತ್ತನೇ ಶತಮಾನದ ಪ್ರಾರಂಭಕಾಲದಲ್ಲಿ ಯೇಸುಕ್ರಿಸ್ತನು ನೆಲೆಸಿದ ದೇಶಕ್ಕೆ ಸಮೀಪದ ಲೆಬನಾನ್ ಎಂಬ ನಾಡಲ್ಲಿ ನೆಲೆಸಿತ್ತು. ಕಹ್ಲಿಲ್ ಗಿಬ್ರಾನ್ ಎಂಬ ಆ ಕವಿಚೇತನ ಯೇಸುವಿನ ನಡೆನುಡಿಯನ್ನು ಆತನ ಸಮಕಾಲೀನರಿಂದ ಸುಶ್ರಾವ್ಯವಾದ ಮಂಜುಳ ನಿನಾದದಂತೆ ಹೇಳಿಸಿದ್ದಾನೆ. ಒಂದು ರೀತಿಯಲ್ಲಿ ಯೇಸುವನ್ನು ನೋಡದೆ, ಯೇಸುವನ್ನು ಸ್ಪರ್ಶಿಸದೆ ಕೇವಲ ಅವನ ಬಟ್ಟೆಯಂಚನ್ನು ಮುಟ್ಟಿ ಪರಮಪಾವನನಾದಂತೆ ಆ ಎಪ್ಪತ್ತು ವ್ಯಕ್ತಿಗಳ ಮುಖಾಂತರ ಯೇಸುವಿನ ವ್ಯಕ್ತಿತ್ವವನ್ನು ಸ್ವತಃ ಅನುಭವಿಸುತ್ತಾನೆ, ಯೇಸುವನ್ನೇ ತನ್ನಲ್ಲಿ ಧರಿಸುತ್ತಾನೆ.

ಮಾತು

ಸಂಸ್ಕೃತದಲ್ಲಿ ಒಂದು ಹೇಳಿಕೆ ಇದೆ: ಹಿರಣ್ಮಯೇನ ಪಾತ್ರೇನ ಸತ್ಯಸ್ಯಾಪಿ ಬಹಿರ್ಮುಖಂ... ಅಂದರೆ ಚಿನ್ನದ ಒಂದು ಪಾತ್ರೆಗೆ ಚಿನ್ನದ ಮುಸುಕು ಹಾಕಿಡಲಾಗಿದೆ. ಅದಕ್ಕೆ ಸತ್ಯ ಎಂದು ಹೆಸರಿಡಲಾಗಿದೆ. ಸತ್ಯವನ್ನು ಕಾಣಬಯಸುವವರು ಹತ್ತಿರ ಬಂದು ಮುಸುಕು ತೆಗೆದು ನೋಡಿ ಏನೂ ಇಲ್ಲ ಎನ್ನುತ್ತಾರೆ. ಮಾನವರ ಸ್ವಭಾವವೇ ಹಾಗೆ.

ಸರ್ವಮಾನ್ಯ ಕವಿ ಕೆ ಎಸ್ ನಿಸಾರ್ ಅಹಮದ್

ಅವನ ಆ ತುಟಿಯ ಬೆಣ್ಣೆಯಂಥ ನಗು ಕಾಯಲಿ ಜಗದವರ, ಸಂತತ ನಗಿಸಲಿ ನಗದವರ ಎಂದು ಕೃಷ್ಣನ ಬಾಲ ಲೀಲೆಗಳ ಕುರಿತು ಕವನ ಬರೆದವರು ಒಬ್ಬ ಮುಸಲ್ಮಾನ್ ಕವಿ. ಗೋಕುಲಾಷ್ಟಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎಂಬಂತಿದೆ ಈ ಪರಿ. ಆ ಕವಿ ಬೇರೆ ಯಾರೋ ಅಲ್ಲ, ಇಂದು ನಮ್ಮೆಲ್ಲರ ಸಮಕಾಲೀನರಾಗಿ ನಮ್ಮೊಂದಿಗಿರುವ ಶ್ರೀ ಕೆ ಎಸ್ ನಿಸಾರ್ ಅಹಮದ್‌ರವರು.

ಜೋಕ

ಪುಟ್ಟು : ಅಮ್ಮಾ ನನಗೂ ಕುಡಿಯಲು ಚಹಾ ಕೊಡು.

ಅಮ್ಮ : ಇಲ್ಲ ಪುಟ್ಟಾ ಇಂತಹ ಬಿಸಿಲಿನಲ್ಲಿ ಚಹಾ ಕುಡಿಯಬಾರದು.

ಪುಟ್ಟು : ಅಮ್ಮಾ, ನಾನು ಮನೀಲೆ ಕುಳಿತು ಚಹಾ ಕುಡಿತೇನಿ ಬಿಡು .

"ಆವರಣ"ದ ಬಗ್ಗೆ ಯು.ಆರ್.ಅನಂತಮೂರ್ತಿ ಮಾಡಿದ ಭಾಷಣದ ಸಾರಾಂಶ

'ಸಂಪದ'ದಲ್ಲಿ ಇತ್ತೀಚೆಗೆ ಅನಂತಮೂರ್ತಿಯವರು ಆವರಣದ ಬಗ್ಗೆ ಏನು ಹೇಳಿದರು ಎಂಬುದರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಸಮಯದಲ್ಲಿ ಅನಂತಮೂರ್ತಿಯವರೇ ತಯಾರಿಸಿದ ಭಾಷಣದ ಸಾರಾಂಶರೂಪವನ್ನು ನಿಮ್ಮೆಲ್ಲರ ಮುಂದಿಡಬಯಸುತ್ತೇವೆ.

ನನಗೆ ಈ ಆವರಣವನ್ನು ಕುರಿತು ಒಂದು ಸಭೆ ಮಾಡುವುದೇ ಇಷ್ಟವಿರಲಿಲ್ಲ. ಇದಕ್ಕೆ ಬಹಳ ಮುಖ್ಯವಾದ ಕಾರಣ ಸಾಹಿತ್ಯ ಚರ್ಚೆಗೆ ಯೋಗ್ಯವಾದ ಒಳ್ಳೆಯ ಪುಸ್ತಕ ಇದು ಅಲ್ಲ ಎಂಬುದು. ಒಂದು ಕಾಲದಲ್ಲಿ ಭೈರಪ್ಪ ಮತ್ತು ನಾನು ಆಗೀಗ ಭೇಟಿಯಾಗುತ್ತಿದ್ದೆವು. ಚದುರಂಗರೂ ಇರುತ್ತಿದ್ದರು. ಆಗ ಅವರ ಪುಸ್ತಕಗಳನ್ನು ನಾನು ಓದುತ್ತಿದ್ದೆ. ಓದಿ ಚೆನ್ನಾಗಿಲ್ಲ ಅನ್ನಿಸಿದರೆ ಅದನ್ನು ಅವರಿಗೂ ಹೇಳುತ್ತಿದ್ದೆ. ಇಂಥ ಸಂದರ್ಭಗಳಲ್ಲಿ ಭೈರಪ್ಪನವರೂ `ನನಗೂ ಅಷ್ಟೊಂದು ಚೆನ್ನಾಗಿಲ್ಲ ಅನ್ನಿಸುತ್ತೆ' ಎನ್ನುತ್ತಿದ್ದ ಸ್ನೇಹದ ಕಾಲ ಒಂದಿತ್ತು. ನನಗೆ `ಗೃಹಭಂಗ' ಒಂದೇ ಅವರ ಒಳ್ಳೆಯ ಕೃತಿ. (ಯಾಕೆಂದರೆ ಭೈರಪ್ಪನವರ ವಕೀಲಿಪ್ರಜ್ಞೆ ಇಲ್ಲ ಕೆಲಸ ಮಾಡಿಲ್ಲ) ಅದೆಷ್ಟು ಒಳ್ಳೆಯ ಕೃತಿ ಅನ್ನಿಸಿತ್ತು ಅಂದರೆ ನಾನು ನ್ಯಾಷನಲ್ ಬುಕ್ ಟ್ರಸ್ಟ್‌ನ ಸದಸ್ಯನಾದಾಗ-ಗೋಕಾಕ್ ಮತ್ತು ಹರಿದಾಸಭಟ್ಟರೂ ಸದಸ್ಯರಾಗಿದ್ದರು-ಕೆಲವು ಕೃತಿಗಳನ್ನು ಭಾರತದ ಎಲ್ಲಾ ಹದಿನಾಲ್ಕು ಭಾಷೆಗಳಿಗೂ ಅನುವಾದಿಸಬೇಕೆಂದು ತೀರ್ಮಾನಿಸಿದಾಗ ಹರಿದಾಸಭಟ್ಟರು ನನ್ನ ಪುಸ್ತಕದ ಹೆಸರು ಹೇಳಿದರು. ನಾವೇ ಸದಸ್ಯರಾಗಿದ್ದು ನಮ್ಮ ನಮ್ಮ ಪುಸ್ತಕಗಳನ್ನು ನಾವು ನ್ಯಾಷನಲ್ ಬುಕ್ ಟ್ರಸ್ಟ್‌ಗೆ ಕೊಡಬಾರದು. ಬೇರೆ ಪುಸ್ತಕಗಳನ್ನು ಕೊಡಬೇಕು ಎಂದು ಕೊಂಡು ಭೈರಪ್ಪನವರ `ಗೃಹಭಂಗ'ವನ್ನು ನಾನು ಸೂಚಿಸಿದೆ. ಹಾಗೆಯೇ ಮೊಕಾಶಿಯವರ `ಗಂಗವ್ವ ಗಂಗಾಮಾಯಿ'ಯನ್ನೂ ಶಾಂತಿನಾಥರ ಮುಕ್ತಿಯನ್ನೂ ಆರಿಸಿದೆವು.

ಆಮೇಲೆ ಅವರ `ಪರ್ವ' ಬಂತು. ಅದನ್ನು ಓದಿದಾಗ ನನಗೆ ಏನನ್ನಿಸಿತು ಅಂದರೆ-`ನೋಡಿ ವೇದವ್ಯಾಸರ ಭಾರತವನ್ನು ಅವರು ರಿಯಲಿಸ್ಟಿಕ್ ಮಾಡಿ ಬರೆದಿದ್ದಾರೆ. ಈ ಭೈರಪ್ಪನವರ ಭಾರತ ಸುಮಾರು ನಾಲ್ಕೈದು ಸಾವಿರ ವರ್ಷಗಳ ಹಿಂದೆ ನಡೆದಿರಬಹುದೋ ಏನೋ.. ಆದರೆ ವೇದವ್ಯಾಸರ ಭಾರತ ಇವತ್ತೂ ನಡಿಯುತ್ತಿದೆ' ಎಂದೆ. ಯಾಕೆಂದರೆ ಯಾವುದು ಪುರಾಣವಾಗಿ ಹೇಳಿದೆಯೋ ಅದು ಇವತ್ತೂ ನಡೆಯುತ್ತಿದೆ. ಯಾವುದನ್ನು ವಾಸ್ತವವೆಂಬಂತೆ ಬರೆದಿದ್ದಾರೋ ಅದು ಚಾರಿತ್ರಿಕವಾದ ಯಾವೊತ್ತೋ ಒಂದು ಕಾಲಮಾತ್ರದ ಕೃತಿಯಾಗಿದೆ. ಇದರಿಂದ ನನ್ನ ಸ್ನೇಹಿತರೂ ಆದ ಅವರ ಕೆಲ ಪ್ರಜ್ಞಾವಂತ ಅಭಿಮಾನಿಗಳಿಗೆ ನನ್ನ ಮೇಲೆ ಸಿಟ್ಟೂ ಬಂದಿತ್ತು.

ನಾನು ಕೆಲವು ವೈಯಕ್ತಿಕ ವಿಷಯಗಳನ್ನು ಇಲ್ಲಿ ಹೇಳಲೇಬೇಕು; ಇಲ್ಲದಿದ್ದರೆ ಬೇರೆಯವರು ಇದನ್ನು ಎಳೆದು ತಂದೇ ತರುತ್ತಾರೆ. ನಾನು ಸಾಹಿತ್ಯ ಅಕಾಡೆಮಿಯ ಚುನಾವಣೆಗೆ ನಿಂತೆ. ಆಗ ಭೈರಪ್ಪ ದಿಟ್ಟವಾಗಿಯೇ ವಿಮಾನದಲ್ಲಿ ಸಂಚರಿಸಿ ನನ್ನ ವಿರುದ್ಧ ಪ್ರಚಾರ ಮಾಡಿದರು. ಹೀಗೆ ಮಾಡುವುದಕ್ಕೆ ಅವರಿಗೆ ಎಲ್ಲಾ ಹಕ್ಕೂ ಇತ್ತು. ಕನ್ನಡದವರು ನನ್ನ ವಿರುದ್ಧ ಓಟು ಹಾಕಿದರು. ಮರಾಠಿ ಲೇಖಕರೊಬ್ಬರು ನನ್ನ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಮರಾಠಿ ಲೇಖಕರು ನನಗೆ ಓಟು ಹಾಕಿದರು. . ಇದರಿಂದ ನನ್ನಲ್ಲಿ ಯಾವ ಕಹಿಯೂ ಉಂಟಾಗಲಿಲ್ಲ. ಇದು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದ ಕ್ರಮ ಎಂದೇ ನಾನು ಈಗಲೂ ತಿಳಿದಿದ್ದೇನೆ.

ನಾನು ಕೇಳಿದಂತೆ ಅವರ ಆತ್ಮ ಚರಿತ್ರೆಯಲ್ಲಿ ಏನೋ ಹೇಳಿಕೊಂಡಿದ್ದಾರಂತೆ:. ಅವರು ದಾಟು ಬರೆದಾಗ ದಲಿತರು ಅವರ ಮನೆ ಮೇಲೆ ಕಲ್ಲುಹೊಡೆದರಂತೆ. ಅದರ ಹಿಂದೆ ನನ್ನ ಮಾತನ್ನು ಕೇಳುತ್ತಿದ್ದ ಆಲನಹಳ್ಳಿ ಕೃಷ್ಣ ಮತ್ತು ನನ್ನ ಕೈವಾಡ ಇತ್ತುಎಂದು ಗುಮಾನಿಯಾಗುವಂತೆ ಅವರು ಬರೆದಿದ್ದಾರೆ ಎಂದು ಕೇಳಿದ್ದೇನೆ. ಇದನ್ನವರು ಬರೆಯಬಾರದಿತ್ತು. ಏಕೆಂದರೆ ಇದು ಸುಳ್ಳು. ಎಷ್ಟು ಸುಳ್ಳು ಎಂದರೆ ಇದು ಅಲ್ಲ ಎಂದು ನಾನು ಮತ್ತೆ ಮತ್ತೆ ಹೇಳಿದರೆ, ಇರಬಹುದೇನೋ ಎಂಬ ಅನುಮಾನ ಶುರುವಾಗಿಬಿಡುತ್ತೆ. ಆದ್ದರಿಂದ ಈ ವರೆಗೆ ಈ ಬಗ್ಗೆ ನಾನು ಏನೂ ಹೇಳಿಲ್ಲ.

ನನಗೆ ಭೈರಪ್ಪನವರ ಬಗ್ಗೆ ಒಂದು ಸಮಸ್ಯೆ ಇದೆ. ಅವರು ಎಷ್ಟು ಪ್ರಸಿದ್ಧರು ಎಂದರೆ ಮರಾಠಿಯಲ್ಲಿ, ಹಿಂದಿಯಲ್ಲಿ ಎಲ್ಲ ಕಡೆಯೂ ಕನ್ನಡದ ಅತ್ಯಂತ ಪ್ರಸಿದ್ಧ ಒಬ್ಬ ಲೇಖಕರಿದ್ದರೆ ಅದು ಕಾರಂತರಲ್ಲ, ಕುವೆಂಪು ಅಲ್ಲ, ಬೇಂದ್ರೆ ಅಲ್ಲ, ನಾವ್ಯಾರೂ ಅಲ್ಲ.

ಹೊಡಿ..ಹೊಡಿ..ಬಿಡಬೇಡ ಬಾಂಗ್ಲಾನ

ಮೊನ್ನಿನ ಬಾಂಗ್ಲಾ ವಿರುದ್ಧದ ಪಂದ್ಯ ದಲ್ಲಿ ವಿನ್ ಆದರೂ ಎಲ್ಲೂ ಪಟಾಕಿ ಸದ್ದೇ ಇಲ್ಲಾ.ಎಲ್ಲರಿಗೂ ಖುಶಿಗಿಂತ ಬೇಸರವೇ ಜಾಸ್ತಿ ಆಯಿತುಕಾಣುತ್ತದೆ.ದ್ರಾವಿಡ್ ಶತಕ ಹೊಡೆದಾಗ ಡಿಕ್ಲೇರ್ ಮಾಡುತ್ತಾರೆ ಎಂದಿದ್ದೆ.

ಅಂದುಕೊಳ್ಳುವುದೊಂದು ...

ಅಂದುಕೊಳ್ಳುವುದೊಂದು
ಆಗುವುದು ಇನ್ನೊಂದು
ಹುಡುಕಿ ಹೋದರೆ ಅಲ್ಲಿ
ಸಿಗುವುದು ಮತ್ತೊಂದು !!!

ಬಯಸುವುದು ಮೂರು
ಬೇಕಾಗಿರುವುದು ನೂರು
ಹುಡುಕಿ ಹೋದರೆ ಅಲ್ಲಿ
ಸಿಗುವುದು ಸಾವಿರಾರು !!!