ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಪಾಬ್ಲೊ ಪಿಕಾಸೊ

ನಿಮ್ಮ ಬದುಕಿನಲ್ಲಿ ಯಾವತ್ತಿಗೂ ದ್ವಂದ್ವಗಳಿಲ್ಲದಂತೆ ನೋಡಿಕೊಳ್ಳಿ. ಅತಿ ಅಪಾಯಕಾರೀ ದ್ವಂದ್ವವೆಂದರೆ ಕೆಲಸ ಮಾಡುವ ಸಮಯದಲ್ಲಿ ಅದನ್ನು ದ್ವೇಷಿಸುತ್ತಾ, ಆ ಕೆಲಸ ಒದಗಿಸಬಹುದಾದ ಬಿಡುವಿನ ಸಮಯಕ್ಕಾಗಿ, ಆ ಬಿಡುವಿನಲ್ಲಿ ಇತರೆ ಹವ್ಯಾಸಗಳಿಂದ ಆನಂದ ಹೊಂದಲು ಹಾತೊರೆಯುವುದು! ಅದರ ಬದಲು ಬಿಡುವಿನ ಸಮಯದಷ್ಟೇ ಆನಂದವೊದಗಿಸುವ ಕೆಲಸವನ್ನೇ ಮಾಡಿ. ಇದು ಸಂತೋಷ ಮತ್ತು ಯಶಸ್ಸಿನ ಸರಳ ಸೂತ್ರ.

ಪಾಬ್ಲೊ ಪಿಕಾಸೊ

ಯಾವ ರೀತಿ ವಸ್ತುಗಳನ್ನು ನನ್ನ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳುತ್ತೇನೆಯೋ ಆ ರೀತಿ ಚಿತ್ರಿಸುತ್ತೇನೆಯೇ ಹೊರತು ಆ ವಸ್ತುಗಳು ಯಥಾವತ್ ಇರುವಂತಲ್ಲ. ಆ ಕೆಲಸ ಮಾಡಲು (ವಸ್ತುಗಳನ್ನು ಯಥಾವತ್ ತೋರಿಸಲು) ಒಂದು ಕನ್ನಡಿಯೇ ಸಾಕು!

ಪಾಬ್ಲೊ ಪಿಕಾಸೊ

ಯಾವತ್ತಿಗೂ ಹೊಸತೊಂದನ್ನು ಸೃಷ್ಟಿಸುವಾಗ ಹಳತೇನನ್ನೋ ನಾಶ ಮಾಡಲೇಬೇಕಾಗುತ್ತದೆ.
- ಪಾಬ್ಲೊ ಪಿಕಾಸೊ (ಕ್ಯೂಬಿಸಂ ಪ್ರಾರಂಭಿಸಿದಾಗ ಅದು ಸಾಂಪ್ರದಾಯಿಕ ಚಿತ್ರಕಲೆಗೆ ನೀಡಿದ ಹೊಡೆತದ ಬಗ್ಗೆ ಪ್ರತಿಕ್ರಯಿಸುತ್ತಾ)

ಝೆನ್ ಕಥೆ: ಝೆನ್ ಅಂದರೆ ಎಲ್ಲದಕ್ಕೂ ಅರ್ಥ ಹುಡುಕೋದಲ್ಲ!

     ಜಪಾನ್ ದೇಶದ ಪ್ರಸಿದ್ಧ ಝೆನ್ ಗುರುವೊಬ್ಬ ತನ್ನ ಆಶ್ರಮದಲ್ಲಿ ಆರಾಮವಾಗಿ ಕಾಲು ಚಾಚಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದ. ಅವನ ಪಕ್ಕದಲ್ಲಿಯೇ ಶಿಷ್ಯನೊಬ್ಬ ಝೆನ್ ಗ್ರಂಥವೊಂದನ್ನು ಓದುತ್ತ ಕುಳಿತಿದ್ದ. ಮಧ್ಯಾಹ್ನ ಬಿಸಿಲಿನ ಸಮಯ. ಗುರುವಿಗೆ ಏನಾದರೂ ಹಣ್ಣನ್ನು ತಿನ್ನಬೇಕೆಂದು ಅನ್ನಿಸಿ ತನ್ನ ಕೈಚೀಲದಿಂದ ಮೂಸಂಬಿಯೊಂದನ್ನು ಹೊರತೆಗೆದ. ಒಬ್ಬನೇ ತಿನ್ನುವುದು ಸರಿಯಲ್ಲವೆನಿಸಿ, ಪಕ್ಕದಲ್ಲಿಯೇ ಇದ್ದ ಶಿಷ್ಯನಿಗೂ ಕೊಡುವುದಕ್ಕೆಂದು ಹಣ್ಣನ್ನು ಎರಡು ಭಾಗ ಮಾಡಿ, ಶಿಷ್ಯನಿಗೆ ಒಂದನ್ನು ಕೊಟ್ಟು ತನ್ನ ಭಾಗದ ಮೂಸಂಬಿಯನ್ನು ತಿನ್ನಲು ಪ್ರಾರಂಭಿಸಿದ.

ಕರ್ನಾಟಕ ಕ್ರಿಕೆಟ್ - ೪

ಯೆರೆ ಗೌಡರ ಸಮರ್ಥ ನೇತೃತ್ವದಲ್ಲಿ ಕರ್ನಾಟಕ ಈ ಋತುವಿನ (೨೦೦೬-೦೭) ರಣಜಿ ಟ್ರೋಫಿ ಸೆಮಿಫೈನಲ್ ತಲುಪಿದೆ. ಎಲೀಟ್ ಲೀಗ್ ನ ತನ್ನ ಗುಂಪಿನಲ್ಲಿ ಆಡಿದ ೭ ಪಂದ್ಯಗಳಲ್ಲಿ ೩ ಗೆಲುವು (ಹರ್ಯಾನ, ಉತ್ತರ ಪ್ರದೇಶ ಮತ್ತು ತಮಿಳುನಾಡು ವಿರುದ್ಧ), ೩ ಡ್ರಾ (ದೆಹಲಿ, ಅಂಧ್ರ ಪ್ರದೇಶ ಮತ್ತು ಸೌರಾಷ್ಟ್ರ ವಿರುದ್ಧ) ಮತ್ತು ೧ ಸೋಲಿನ (ಬರೋಡ ವಿರುದ್ಧ) ಸಾಧನೆಯೊಂದಿಗೆ ದ್ವೀತಿಯ ಸ್ಥಾನ ಪಡೆದಿದೆ.

ಜನವರಿ ೨೩ ರಿಂದ ೨೭ ರವರೆಗೆ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ, ಬಂಗಾಲವನ್ನು ಎದುರಿಸಲಿದೆ. ಈ ಪಂದ್ಯ ಕೊಲ್ಕತ್ತಾದಲ್ಲಿ ನಡೆಯುವ ಎಲ್ಲಾ ಸಾಧ್ಯತೆಗಳಿವೆ. ಕರ್ನಾಟಕಕ್ಕೆ 'ಹೋಮ್ ಅಡ್ವಾಂಟೇಜ್' ಇರುವುದಿಲ್ಲ. ಬಂಗಾಲ, ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಕರ್ನಾಟಕಕ್ಕಿಂತ ಬಲಶಾಲಿಯಾಗಿರುವ ತಂಡ. ರಾಬಿನ್ ಉತ್ತಪ್ಪ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಕಾರಣ ಅವರ ಅನುಪಸ್ತಿತಿ ಕರ್ನಾಟಕಕ್ಕೆ ದುಬಾರಿಯಾಗಬಹುದು. ಈ ದೊಡ್ಡ ಸವಾಲನ್ನು ಕರ್ನಾಟಕದ ಆಟಗಾರರು ಹೇಗೆ ಸ್ವೀಕರಿಸುತ್ತಾರೆ ಎಂದು ಕಾದು ನೋಡೋಣ. ರಣಜಿ ಟ್ರೋಫಿ ಇತಿಹಾಸದಲ್ಲಿ ಸೆಮಿಫೈನಲ್ ನಲ್ಲಿ ಕರ್ನಾಟಕ ೩ ಸಲ ಬಂಗಾಲದೊಂದಿಗೆ ಆಡಿದ್ದು ಎರಡು ಬಾರಿ ಸೋತು ಒಂದು ಬಾರಿ ಗೆದ್ದಿದೆ.

ಸದ್ಯಕ್ಕೆ ನಾಯಕ ಯೆರೆ ಗೌಡ, ಕೋಚ್ ವೆಂಕಟೇಶ್ ಪ್ರಸಾದ್, ಮ್ಯಾನೇಜರ್ ರಘುರಾಮ್ ಭಟ್ ಮತ್ತು ತಂಡದ ಎಲ್ಲಾ ಸದಸ್ಯರಿಗೆ ರಣಜಿ ಟ್ರೋಫಿ ಸೆಮಿಫೈನಲ್ ತಲುಪಿದ್ದಕ್ಕೆ ಅಭಿನಂದನೆಗಳು ಮತ್ತು ಬಂಗಾಲ ವಿರುದ್ಧದ ಪಂದ್ಯಕ್ಕೆ ಶುಭ ಹಾರೈಕೆಗಳು.

೧೯೯೯-೨೦೦೦ ಋತುವಿನಲ್ಲಿ ಬೆಂಗಳೂರಿನಲ್ಲಿ ನಡೆದ ರಣಜಿ ಸೆಮಿಫೈನಲ್ ನಲ್ಲಿ ಹೈದರಾಬಾದ್ ಗೆ ಪ್ರಥಮ ಬಾರಿಯ ಮುನ್ನಡೆಯ ಆಧಾರದಲ್ಲಿ ಸೋತ ೭ ವರ್ಷಗಳ ಬಳಿಕ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್ ತಲುಪಿದೆ. ಕಾಕತಾಳೀಯವೆಂದರೆ ಆಗ ಹೈದರಾಬಾದ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ತಂಡದ ನಾಯಕರಾಗಿದ್ದ ವೆಂಕಿ, ಇಂದು ಕೋಚ್ ಆಗಿದ್ದಾರೆ. ಈಗ ತಂಡದಲ್ಲಿರುವ ಮತ್ತು ೭ ವರ್ಷಗಳ ಹಿಂದಿನ ಸೆಮಿಫೈನಲ್ ನಲ್ಲಿ ಆಡಿದ ಆಟಗಾರರೆಂದರೆ ಬ್ಯಾರಿಂಗ್ಟನ್ ರೋಲಂಡ್, ಬಾಲಚಂದ್ರ ಅಖಿಲ್, ಸುನಿಲ್ ಜೋಶಿ ಮತ್ತು ತಿಲಕ್ ನಾಯ್ಡು.

ಸಂಕ್ರಾತಿಯ ಶುಭಾಶಯಗಳೊಂದಿಗೆ ಒಂದು ಪ್ರಶ್ನೆ

ಮಕರ ಸಂಕ್ರಾಂತಿಯ ಶುಭಾಶಯಗಳು. ಅಂದ ಹಾಗೆ ಹಿಂದೂಗಳ ಹಬ್ಬಗಳು ಪ್ರತಿ ವರ್ಷ ನಿಗದಿತ ದಿನ ಬರುವುದು ವಿರಳ.