ಹೊಸ ವರ್ಷದ ಶುಭಾಶಯ
"ಏಯ್... ಎರಡ್ಸಾವ್ರದ ಆರು ಹೋಗುತ್ತಿದೆ.. ಟಾಟಾ ಮಾಡು ಬಾರೇ..."
"ಎಲ್ಲೇ?"
- Read more about ಹೊಸ ವರ್ಷದ ಶುಭಾಶಯ
- Log in or register to post comments
"ಏಯ್... ಎರಡ್ಸಾವ್ರದ ಆರು ಹೋಗುತ್ತಿದೆ.. ಟಾಟಾ ಮಾಡು ಬಾರೇ..."
"ಎಲ್ಲೇ?"
"ಏಯ್... ಎರಡ್ಸಾವ್ರದ ಆರು ಹೋಗುತ್ತಿದೆ.. ಟಾಟಾ ಮಾಡು ಬಾರೇ..."
"ಎಲ್ಲೇ?"
"ಅದೇ.... ಅಲ್ಲಿ....!"
"ಓಹ್... ಹೊರಟೇಬಿಡ್ತಾ? ನಿನ್ನೆ ಮೊನ್ನೆ ಬಂದಂಗಿತ್ತಲ್ಲೇ.."
"ಬಂದಿದ್ದೂ ಆಯ್ತು ಹೊರಟಿದ್ದೂ ಆಯ್ತು; ಬೇಗಬೇಗ ಟಾಟಾ ಮಾಡೇ..."
* * *
ಧಾನ್ಯ ದಾಸ್ತಾನಿನ ಗೋಡೌನಿನಲ್ಲಿ ಬಂದಿಯಾಗಿದ್ದ ಹೆಗ್ಗಣವೊಂದು ಗೋಡೆಯಲ್ಲಿ ದೊಡ್ಡದೊಂದು ಕನ್ನ ಕೊರೆಯುತ್ತಿದೆ.. ಬೇಗ ಬೇಗ ಕೊರೆ ದೊಡ್ಡಿಲಿಯೇ: ಹೊಸ ವರ್ಷ ಬರುತ್ತಿದೆ...
ಎರಡು ಬಾರಿ ಕೆಮ್ಮಿ, ಗಂಟಲನ್ನು ಶ್ರುತಿಗೊಳಿಸಿ, ಹಾಡಲು ಕುಳಿತಿದ್ದಾನೆ ಗಾಯಕ.. ಪಲ್ಲವಿ ಮುಗಿದು, ಅನುಪಲ್ಲವಿ ಮುಗಿದು, ಇದು ಎಷ್ಟನೇ ಚರಣ..? ಬೇಗ ಬೇಗ ಹಾಡು ಗೆಳೆಯಾ: ಹೊಸ ವರ್ಷ ಬರುತ್ತಿದೆ...
ಮಗುವನ್ನು ಕಾಲ ಮೇಲೆ ಹಾಕಿಕೊಂಡು, 'ಉಶ್‍ಶ್‍ಶ್‍ಶ್ಶ್...' ಎನ್ನುತ್ತಾ ಕುಳಿತಿದ್ದಾಳೆ ತಾಯಿ; ಉಚ್ಚೆಯನ್ನೇ ಮಾಡುತ್ತಿಲ್ಲ ಪಾಪು! ಬೇಗ ಬೇಗ ಉಚ್ಚೆ ಮಾಡು ಮಗೂ: ಹೊಸ ವರ್ಷ ಬರುತ್ತಿದೆ...
ದನದ ಕೆಚ್ಚಲಿಗೆ ನೀರು ಸೋಕಿ, ಮೊಲೆಗಳನ್ನು ತೊಳೆದು, ದೊಡ್ಡ ಕೌಳಿಗೆಯನ್ನಿಟ್ಟುಕೊಂಡು ಕುಳಿತಿದ್ದಾನೆ ಅಪ್ಪ.. ಸೊರೆಯುತ್ತಲೇ ಇಲ್ಲ ದನ! ಬೇಗ ಬೇಗ ಹಾಲು ಕೊಡು ದನವೇ: ಹೊಸ ವರ್ಷ ಬರುತ್ತಿದೆ...
ನ್ಯಾಲೆಯ ಮೇಲೆ ಬಟ್ಟೆಗಳನ್ನು ನೇತುಹಾಕಿ, ಒಣಗುವುದನ್ನೇ ಕಾಯುತ್ತಾ ಕುಳಿತಿದ್ದಾನೆ ರೂಂಮೇಟ್.. ಅಂಡರ್ ವೇರ್ ಒಣಗುವುದಂತೂ ಯಾವಾಗಲೂ ಲೇಟ್! ಬೇಗ ಒಣಗು ಚಡ್ಡಿಯೇ: ಹೊಸ ವರ್ಷ ಬರುತ್ತಿದೆ...
ಶಾಪಿಂಗಿಗೆ ಹೋದ ಗೆಳೆಯ ಸ್ವೀಟು, ಕೇಕು, ಪಟಾಕಿ.. ಎಲ್ಲಾ ತಂದಿದ್ದಾನೆ. ಆದರೆ ಹೊಸ ಕ್ಯಾಲೆಂಡರು ತರುವುದನ್ನೇ ಮರೆತುಬಿಟ್ಟಿದ್ದಾನೆ! ಮತ್ತೆ ಓಡಿಸಿಯಾಗಿದೆ ಪೇಟೆಯೆಡೆಗೆ. ಬೇಗ ಬಾ ಗೆಳೆಯಾ: ಹೊಸ ವರ್ಷ ಬರುತ್ತಿದೆ...
ಭಟ್ಟರು ಗಂಧ ತೇಯ್ದು, ದೇವರನ್ನು ತೊಳೆದು, ಹೂವೇರಿಸಿ, ಕುಂಕುಮ-ಅರಿಶಿನ ಹಚ್ಚಿ, ಊದುಬತ್ತಿ ಬೆಳಗಿ, ಕಾಯಿ ಓಡೆದು, ನೈವೇದ್ಯ ಮಾಡಿ.... ಅಯ್ಯೋ, ಅವೆಲ್ಲಾ ಇರಲಿ ಭಟ್ರೇ, ಬೇಗ ಮಂಗಳಾರತಿ ಮಾಡಿ: ಹೊಸ ವರ್ಷ ಬರುತ್ತಿದೆ...
* * *
ಅಗೋ.... ಹೊಸ ವರ್ಷ ಬಂದೇಬಿಟ್ಟಿತು..! ಕೊರೆದೂ ಕೊರೆದು ಕೊನೆಗೂ ಗೋಡೆಯಲ್ಲೊಂದು ಸಣ್ಣ ಕಿಂಡಿಯನ್ನು ಮಾಡಿಯೇಬಿಟ್ಟಿದೆ ಹೆಗ್ಗಣ. ಆ ಸಣ್ಣ ಕಿಂಡಿಯಿಂದಲೇ ತೂರಿ ಬರುತ್ತಿದೆ ಹೊಸ ವರ್ಷದ ಆಶಾಕಿರಣ; ಹೊಸ ಬೆಳಕು. ಮಗು ಹಾರಿಸಿದ ಉಚ್ಚೆ ಇಡೀ ಭುವಿಯನ್ನೇ ಒದ್ದೆ ಮಾಡಿದೆ. ಕೌಳಿಗೆ ತುಂಬಿದರೂ ಮುಗಿದಿಲ್ಲ ದನದ ಕೆಚ್ಚಲಿನ ಹಾಲು. ಅಪ್ಪ ಕೂಗುತ್ತಿದ್ದಾನೆ: 'ಏಯ್, ಇನ್ನೊಂದು ಗಿಂಡಿ ತಗಂಬಾರೇ..' ಅಮ್ಮ ಅಡುಗೆ ಮನೆಯಿಂದಲೇ ಉತ್ತರಿಸುತ್ತಿದ್ದಾಳೆ: 'ಸಾಕು ನಮಗೆ; ಉಳಿದಿದ್ದನ್ನು ಕರುವಿಗೆ ಬಿಡಿ.' ಒಣಗಿದ ಚಡ್ಡಿಯ ಮೇಲೆ ಹೊಸ ಪ್ಯಾಂಟೇರಿಸುತ್ತಿದ್ದಾನೆ ರೂಂಮೇಟ್. ಗೆಳೆಯನಂತೂ ಓಡೋಡಿ ಬರುತ್ತಿದ್ದಾನೆ. ಅವನ ಕೈಯಲ್ಲಿ ಪೂರ್ತಿ ಮುನ್ನೂರಾ ಅರವತ್ತೈದು ದಿನಗಳುಳ್ಳ ಕ್ಯಾಲೆಂಡರಿದೆ. ದೇವರಿಗೇ ಆಶ್ಚರ್ಯವಾಗುವಷ್ಟು ದಕ್ಷಿಣೆ ಬಿದ್ದಿದೆ ಭಟ್ಟರ ಮಂಗಳಾರತಿ ಹರಿವಾಣದಲ್ಲಿ.
ಎಲ್ಲರಿಗೂ ಖುಷಿ; ಎಲ್ಲರಿಗೂ ಸಂಭ್ರಮ; ಎಲ್ಲರಿಗೂ ಸಡಗರ.. ಏಕೆಂದರೆ, ಹೊಸ ವರ್ಷ ಬಂದಿದೆ! ಈ ಮಧ್ಯೆ, ಹಾಡುತ್ತಿರುವವನನ್ನು ಎಲ್ಲರೂ ಮರೆತೇ ಬಿಟ್ಟಿದ್ದಾರೆ. ಆತ ಹಾಡುವುದನ್ನು ಒಂದು ಕ್ಷಣ ನಿಲ್ಲಿಸಿಬಿಟ್ಟಿದ್ದಾನೆ. ತಕ್ಷಣ ಎಲ್ಲರಿಗೂ ಅರಿವಾಗಿದೆ. ಎಲ್ಲಾ ಅವನ ಬಳಿ ಹೋಗಿ ಹೇಳುತ್ತಿದ್ದಾರೆ:
"ಹಾಡು ಗೆಳೆಯಾ, ಮುಂದುವರೆಸು. ಹಾಡು ಹಳೆಯದಾದರೇನು, ಭಾವ ಹೊಸತಿದ್ದರೆ ಸಾಕು.."
ಹೊಸ ವರ್ಷದ ಹೊಸ ಕ್ಯಾಲೆಂಡರು ನಿಮ್ಮ ಬದುಕಿನ ಹಾಡಿಗೆ - ಹಾದಿಗೆ ಹೊಸ ಭಾವ ಬೆರೆಸಲಿ ಎಂದು ಹಾರೈಸುತ್ತೇನೆ.
ನೂತನ ವರ್ಷದ ಶುಭಾಶಯಗಳು.
ಹಾಸ್ಯವನ್ನು ಎಲ್ಲೋ ಹುಡುಕಿಕೊಂಡು ಹೋಗುವುದಕ್ಕಿಂತ, ದೈನಂದಿನ ಆಗುಹೋಗುಗಳನ್ನೇ ಸ್ವಲ್ಪ ಎಚ್ಚರದಿಂದ ಗಮನಿಸುತ್ತಿದ್ದರೆ ಅದರಲ್ಲಿ ಸಿಗುವಷ್ಟು ತಿಳಿಯಾದ, ತಾಜಾ ಹಾಸ್ಯ ಇನ್ನೆಲ್ಲೂ ಸಿಗೋದಿಲ್ಲ ಅಂತ ನನ್ನ ಅಜ್ಜ ಮತ್ತು ಅಪ್ಪ ಪದೇ ಪದೇ ಹೇಳುತ್ತಿದ್ದರು. ಹಾಗೆ ನಿಜಜೀವನದಲ್ಲಿ ಕಂಡ ಒಂದೆರಡು ಹಾಸ್ಯ ಸನ್ನಿವೇಶಗಳು ಇಲ್ಲಿವೆ.
ಸಂಪದ ಆಡಳಿತ ಮಂಡಳಿಯವರಿಗೆ,
ನಾನು ಇತ್ತೀಚಿಗೆ ೫-೬ ನುಡಿಮುತ್ತುಗಳನ್ನು ಸಂಪದಕ್ಕೆ (ನುಡಿಮುತ್ತುಗಳು ವಿಭಾಗಕ್ಕೆ) ಸೇರಿಸಿದೆ. ಇವತ್ತು ಅವುಗಳನ್ನು ಒಮ್ಮೆ ನೋಡೋಣ ಅಂತ ಪ್ರಯತ್ನಿಸಿದೆ. ಆದರೆ ಎಲ್ಲೂ ಅವು ಕಾಣಸಿಗಲಿಲ್ಲ. ಏಕಿರಬಹುದು ಅಂತ ಹೇಳುತ್ತೀರಾ?
ಆಧ್ಯಾತ್ಮಿಕ ಮತ್ತು ಧಾರ್ಮಿಕ ಪ್ರಗತಿಯ ಮೊದಲ ಗುರುತು ಸದಾ ಹಸನ್ಮುಖಿಯಾಗಿರುವುದು!
ಕಾದ ಕಾವಲಿಯ ಮೇಲೆ ಬಿದ್ದ ನೀರ ಹನಿಯೊಂದು ಆವಿಯಾಗಿ ತನ್ನ ಸ್ವರೂಪವನ್ನೇ ಕಳೆದುಕೊಳ್ಳುತ್ತದೆ.
ಕಮಲದೆಲೆಯ ಮೇಲೆ ಬಿದ್ದ ಅದೇ ನೀರ ಹನಿಯು ಸೂರ್ಯನ ಬೆಳಕಿನಲ್ಲಿ ಮುತ್ತಿನಂತೆ ಕಂಗೊಳಿಸುತ್ತದೆ.
ಸ್ವಾತಿ ನಕ್ಷತ್ರದಲ್ಲಿ ಕಪ್ಪೆಚಿಪ್ಪನ್ನು ಪ್ರವೇಶಿಸಿದ ಅದೇ ನೀರ ಹನಿಯು ಅನರ್ಘ್ಯವಾದ ಮುತ್ತೇ ಆಗುತ್ತದೆ.
ಹೀಗೆ ಉತ್ತಮ, ಮಧ್ಯಮ ಮತ್ತು ಅಧಮವೆಂಬ ಮೂರು ಗುಣಗಳೂ ಸಹವಾಸದಿಂದ ಉಂಟಾಗುತ್ತವೆ!
ತಾಯಿ ಸರಸ್ವತಿಯೇ, ನಿನ್ನ ಬಳಿ ವಿದ್ಯೆಯೆಂಬ ಅಪರೂಪದ ಭಂಡಾರವೊಂದಿದೆ.
ಬೇರೆಲ್ಲ ಸಂಪತ್ತುಗಳೂ ಹಂಚಿಕೊಂಡಷ್ಟೂ ಕ್ಷೀಣಿಸುತ್ತವೆ.
ಆದರೆ (ನಿನ್ನ ಬಳಿಯಿರುವ) ವಿದ್ಯೆಯೆಂಬ ಸಂಪತ್ತು ಮಾತ್ರ
ಹಂಚಿಕೊಂಡಷ್ಟೂ ವೃದ್ಧಿಸುತ್ತದೆ ಮತ್ತು ಗೋಪ್ಯವಾಗಿಟ್ಟಷ್ಟೂ ಕ್ಷೀಣಿಸುತ್ತದೆ!
"ಈ ಹೊಸ ವರ್ಷದ ಬರುವಿಕೆಯನ್ನು ತಂಪು ಪಾನೀಯ ಕುಡಿಯದೆ ಆಚರಿಸಿ"
ಕೋಲಾದಂತಹ ತಂಪು ಪಾನೀಯಗಳನ್ನು ಕುಡಿಯದಿರಲು ಕಾರಣಗಳು-
ಎಂಟಣ್ಣ : ಎಂಗಿದಿಯಪ್ಪೊ ಎನ್ಕ್ಟೇಸಪ್ಪ ?
ಎನ್ಕ್ಟೇಸಪ್ಪ : ಚೆನ್ನಾಗಿದಿನಪ್ಪ. ನೀನು ಏನು ಇವತ್ತು ದರ್ಶನ ಕೊಟ್ಟೆ ?
೧.ನಿನ್ನ ಕೊರಳ ಕೊಳಲಿಂದ ಬರುತಿರೆ ನನ್ ಹೆಸರ ನಾದ
ಅನಿಸುತಿದೆ ಸಪ್ತಸ್ವರಗಳ ನಡುವೆ ನಡೆಯುತಿದೆ ಸಂವಾದ