ವಚನ ಚಿಂತನ:೧೦: ದೇವರ ಹಂಗೇಕೆ?
ಆವ ಕಾಯಕವಾದಡೂ ಸ್ವಕಾಯಕವ ಮಾಡಿ
ಗುರು ಲಿಂಗ ಜಂಗಮದ ಮುಂದಿಟ್ಟು
ಒಕ್ಕುದ ಹಾರೈಸಿ
ಮಿಕ್ಕುದ ಕೈಕೊಂಡು
ವ್ಯಾಧಿ ಬಂದಡೆ ನರಳು
ಬೇನೆ ಬಂದಡೆ ಒರಲು
ಜೀವ ಹೋದಡೆ ಸಾಯಿ
ಇದಕ್ಕಾ ದೇವರ ಹಂಗೇಕೆ
ಭಾಪು ಲದ್ದೆಯ ಸೋಮಾ
ನಮ್ಮ ಪಾಲಿಗೆ ಬಂದ ಕಾಯಕ ಯಾವುದಾದರೂ ಸರಿ. ನಾವೇ ಮಾಡಬೇಕಾದ ನಮ್ಮ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು. ನಮ್ಮ ಕಾಯಕದಿಂದ ಬಂದ ಫಲವನ್ನು ನಮಗಿಂತ ಹಿರಿಯರಾದವರಿಗೆ (ಗುರು), ಲೋಕಕ್ಕೆ (ಲಿಂಗ), ಪ್ರಜ್ಞಾವಂತರಾದವರಿಗೆ (ಜಂಗಮ) ಅರ್ಪಿಸಬೇಕು. ಉಳಿದದ್ದನ್ನು ನಮ್ಮದೆಂದು ಪಡೆದುಕೊಳ್ಳಬೇಕು. ಮಾಡಬೇಕಾದದ್ದು ಇಷ್ಟೇ. ಇದರಾಚೆಗೆ ರೋಗ ಬಂದರೆ ನರಳಬೇಕು, ನೋವಾದರೆ ಒರಲಬೇಕು, ಜೀವ ಹೋದರೆ ಸಾಯಬೇಕು. ಬದುಕು ಇಷ್ಟು. ಇದರಲ್ಲಿ ದೇವರ ಹಂಗು ಯಾಕೆ ಬೇಕು?
- Read more about ವಚನ ಚಿಂತನ:೧೦: ದೇವರ ಹಂಗೇಕೆ?
- 2 comments
- Log in or register to post comments