(ಬೊಗಳೂರು ಕಾಯಿದೆ ಉಲ್ಟಾ ಬ್ಯುರೋದಿಂದ)
ಬೊಗಳೂರು, ಅ.26- ಬೆಲೆ ಏರಿಕೆಯಿಂದಾಗಿ ಮನೆಯಲ್ಲಿ ಜೀವಿಸುವುದು ಕಷ್ಟಸಾಧ್ಯವಾಗಿರುವ ಪುರುಷ ಪ್ರಾಣಿಗಳಿಗೆ ಜೀವಿಸಲು ವಿನೂತನ ಅವಕಾಶ ಕಲ್ಪಿಸಿಕೊಟ್ಟಿರುವ ಕೇಂದ್ರ ಸರಕಾರದ ಹೊಸ ಕಾಯಿದೆಯು ಸರ್ವತ್ರ ಶ್ಲಾಘನೆಗೆ ಪಾತ್ರವಾಗಿದೆ.
ತಮ್ಮ ತಮ್ಮ ಸ್ವಂತ ಪತ್ನಿಯರನ್ನು ಹೊಡೆಯಬಲ್ಲ, ಬಡಿಯಬಲ್ಲ, ಇತರ ಸ್ತ್ರೀ ಜೀವಿಗಳನ್ನು ಹಿಂಸಿಸಬಲ್ಲವರಿಗೆ ಸ್ವಂತ ಗೃಹದಷ್ಟೇ ಸಕಲ ಸೌಲಭ್ಯಗಳುಳ್ಳ ಕಾರಾ-ಗೃಹ ವಾಸಕ್ಕೆ ಅವಕಾಶ ಮಾಡಿಕೊಟ್ಟಿರುವುದರಿಂದ ಪುರುಷ ಗಡಣ…