ವಿಧ: ಬ್ಲಾಗ್ ಬರಹ
August 08, 2005
ನನ್ನ ಬ್ಲಾಗ್ ನಲ್ಲಿ ಇಂದು ಏನು ಬರೆಯುವುದು ಎಂದು ಯೋಚಿಸುತ್ತಿದ್ದೆ. ಆಗ ನನ್ನ ಸ್ನೇಹಿತರೊಬ್ಬರು ಇಂದು ಬೃಂದಾವನಕ್ಕೆ (ಇದು ಇಲ್ಲಿಯ ಒಂದು ಹೊಟೆಲ್ ) ಹೋಗಿ ಬರುವ ಅಂದರು. ಆಗ ಯೋಚಿಸಿದೆ - ಈ ಬೃಂದಾವನ ಅಂದರೆ ಏನು? ಇದು ಕಾಬಾ, ದರ್ಗಾ, ಸಮಾಧಿ, ಗದ್ದುಗೆಗಳಂತೆಯೇ, ಅಲ್ಲವೇ. ಇದರ ಬಗ್ಗೆ ನನ್ನ ಅನಿಸಿಕೆ ಹೀಗಿದೆ. ನೋಡಿ, ಓದಿ, ತಪ್ಪುಗಳನ್ನು ತಿಳಿಸಿ, ನಾನೂ ತಿಳಿಯುವುದು ಬಹಳಷ್ಟಿದೆ.
ಬೃಂದಾವನ ಮತ್ತು ಮಠ ಕಟ್ಟುವ ಜಾಗ ವಾಸ್ತುವಿನ ಪ್ರಕಾರ ಉತ್ತಮ ಜಾಗ.
ಸ್ವಾಮಿಗಳು ದೇವರ ಅದೀನರಾದಾಗ ಈ…
ವಿಧ: ಚರ್ಚೆಯ ವಿಷಯ
August 08, 2005
ನಾನು ಲಾಗಿನ್ ಆದಾಗ ಬಲಗಡೆ recent posts ಎಂಬ ತಂತು ಇದೆ. ಅದನ್ನು ಕ್ಲಿಕ್ ಮಾಡಿದಾಗ ಅದು ಸಂಪದ ತಾಣದಲ್ಲಿ ಇತ್ತೀಚೆಗೆ ಸೇರಿಸಲಾದ ಲೇಖನಗಳ ಯಾದಿ ನೀಡುತ್ತದೆ. ಇದೇನೋ ಸರಿಯೇ. ನನ್ನ ಲೇಖನಗಳನ್ನು ಮತ್ತು ಅವುಗಳಿಗೆ ಇತರರು ನೀಡಿದ ಟೀಕೆಗಳನ್ನು ಓದಬೇಕಾದರೆ ನಾನು ಈ ಯಾದಿಯಲ್ಲಿ ಹುಡುಕಾಡಬೇಕಾಗುತ್ತದೆ. "My postings" ಎಂಬ ಇನ್ನೊಂದು ತಂತು ನೀಡಿದರೆ ಚೆನ್ನಾಗಿರುತ್ತದೆ.
ಸಿಗೋಣ,
ಪವನಜ
ವಿಧ: Basic page
August 08, 2005
ನನ್ನ ಮನದನ್ನೆಯ
ಮನವ
ನಾ
ಸೂರೆಗೊಳ್ಳಲಾರೆ
ಬೇಕಾಗಿಲ್ಲ ನನಗೆ
ಖಾಲಿ
ಮನದ ನೀರೆ
-ಪವನಜ
http://www.vishvaka…
ವಿಧ: Basic page
August 08, 2005
ನಾ ದೇವನಲ್ಲದೆ ನೀ ದೇವನೇ
ನೀ ದೇವರಾದರೆ ಎನ್ನನೇಕೆ ಸಲಹೆ
ಆರೈದು ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ
ನಾ ದೇವ ಕಾಣಾ ಗುಹೇಶ್ವರ
ನಾನೇ ದೇವರೇ ಹೊರತು ನೀನು ದೇವರಲ್ಲ. ನೀನು ದೇವರಾದರೆ ನನ್ನನ್ನು ಯಾಕೆ ಸಲಹುವುದಿಲ್ಲ? ನಿನಗೆ ಒಂದಿಷ್ಟು ನೀರೆರೆದು ಪ್ರೀತಿಯಿಂದ ಸ್ನಾನ ಮಾಡಿಸುವವನು ನಾನು, ಹಸಿವಾದಾಗ ನಿನಗೆ ತುತ್ತು ಅನ್ನ ನೀಡುವವನು ನಾನು. ನಾನೇ ದೇವರು.
ಈ ವಚನವನ್ನು ನಾಲ್ಕು ಥರದಲ್ಲಿ ಅರ್ಥಮಾಡಿಕೊಳ್ಳಬಹುದು ಅನ್ನಿಸುತ್ತದೆ. “ಹೋಗಯ್ಯಾ, ನೀನೆಂಥ ದೇವರು,…
ವಿಧ: Basic page
August 08, 2005
ಕೆನಿನ್ ದೇವಾಲಯದಲ್ಲಿದ್ದ ಝೆನ್ ಗುರುವಿನ ಹೆಸರು ಮೊಕೌರಿ. ಮೊಕೌರಿ ಎಂದರೆ ಸದ್ದಿಲ್ಲದ ಗುಡುಗು ಎಂದರ್ಥ. ಹನ್ನೆರಡು ವಯಸ್ಸಿನ ಪ್ರತಿಭಾವಂತ ಹುಡುಗ ಟೊಯೊ ಎಂಬಾತ ಅವನ ಬಳಿ ಶಿಷ್ಯನಾಗಿದ್ದ.
ಸ್ವಲ್ಪ ವಯಸ್ಸಾದ ಶಿಷ್ಯರು ದಿನವೂ ಬೆಳಗ್ಗೆ ಸಂಜೆ ಗುರುವಿನ ಬಳಿ ಬಂದು ಸಾನ್‌ಝೆನ್ ಪಡೆದುಕೊಳ್ಳುವುದನ್ನು ನೋಡುತ್ತಿದ್ದ. ಸಾನ್‌ಝೆನ್ ಎಂದರೆ ವೈಯಕ್ತಿಕ ಮಾರ್ಗದರ್ಶನ. ಗುರು ಒಬ್ಬರಿಗೂ ಅವರಿಗೆ ತಕ್ಕ ಮುಂಡಿಗೆಯನ್ನು ನೀಡುತ್ತಿದ್ದ. ಈ ಬೆಡಗಿನಂಥ ಮಾತುಗಳ ಮುಂಡಿಗೆಯನ್ನು ಕೋನ್ ಎನ್ನುತ್ತಾರೆ. ಟೊಯೊ…

August 07, 2005
ರವಿವಾರ, ಬೆಳಗಾಗುತ್ತಿದ್ದಂತೆ ಸ್ನೇಹಿತರೊಬ್ಬರ ಫೋನು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯವರು ನಡೆಸುತ್ತಿರುವ ಪುಟ್ಟ 'ಬುಕ್ ಶೋ'ಗೆ ಹೋಗುವುದೆಂದು ಹಿಂದಿನ ದಿನ ಮಾತನಾಡಿಕೊಂಡಿದ್ದೆವು. ಹಾಗೆಯೇ ನನ್ನ ಸ್ನೇಹಿತರಿಗೆ 'ಉಬುಂಟು' ಲಿನಕ್ಸ್ ನಲ್ಲಿರುವ ಕನ್ನಡ ಸಪೋರ್ಟ್ ತೋರಿಸುವುದಾಗಿ ಸ್ಕೆಚ್ ಹಾಕಿದ್ದೆ. ನಿಶಾಚರನ ನಿದ್ದೆಗೆ ಕತ್ತರಿ ಬಿದ್ದಿತು. :)
ಸರಿ, ಅಷ್ಟೇನೂ ಟ್ರಾಫಿಕ್ ಇರಲಿಕ್ಕಿಲ್ಲವೆಂದೆಣೆಸಿ ಬೈಕೇರಿ ಚಾಮರಾಜಪೇಟೆಯ ಕಡೆಗೆ ಪ್ರಯಾಣ ಬೆಳೆಸಿದೆ. ಆದರೆ…
ವಿಧ: Basic page
August 07, 2005
ಕ್ಯೋಟೋದಲ್ಲಿರುವ ಒಬಾಕು ದೇವಾಲಯಕ್ಕೆ ಹೋದವರಿಗೆ ಅಲ್ಲಿನ ಮಹಾದ್ವಾರದ ಮೇಲೆ "ಪ್ರಥಮ ಸೂತ್ರ" ಎಂದು ಬರೆದಿರುವುದು ಕಾಣುತ್ತದೆ. ಅಕ್ಷರಗಳು ಬಲು ದೊಡ್ಡವು. ಕೈ ಬರಹದ ಕಲೆಯ ನಿಷ್ಣಾತರು ಈ ಬರವಣಿಗೆಯನ್ನು ಅತ್ಯುತ್ತಮ ಕಲಾಕೃತಿ ಎಂದು ಹೊಗಳುತ್ತಾರೆ. ಇದನ್ನು ಬರೆದವನು ಇನ್ನೂರು ವರ್ಷಗಳ ಹಿಂದೆ ಬದುಕಿದ್ದ ಕೊಸೆನ್ ಎಂಬ ಕಲಾವಿದ.
ಕೊಸೆನ್ ಅಕ್ಷರಗಳನ್ನು ಹಾಳೆಯ ಮೇಲೆ ಬರೆಯುತ್ತಿದ್ದ. ಆಮೇಲೆ ಬಡಗಿಗಳು ಆ ಅಕ್ಷರಗಳನ್ನು ಮರದ ಮೇಲೆ ಕಾಪಿ ಮಾಡಿಕೊಂಡು ಕೆತ್ತುತ್ತಿದ್ದರು.
ಕೊಸೆನ್‌ಗೆ ಒಬ್ಬ…

ಆನೆ ಕುದುರೆ ಭಂಡಾರವಿರ್ದಡೇನೋ
ತಾನುಂಬುದು ಪಡಿಯಕ್ಕಿ ಒಂದಾವಿನ ಹಾಲು
ಮಲಗುವುದರ್ಧ ಮಂಚ
ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ
ಒಡಲು ಭೂಮಿಯ ಸಂಗ
ಒಡವೆ ತಾನೇನಪ್ಪುದೋ
ಕೈವಿಡಿದ ಮಡದಿ ಪರರ ಸಂಗ
ಪ್ರಾಣ ವಾಯುವಿನ ಸಂಗ
ಸಾವಿಂಗೆ ಸಂಗಡವಾರೂ ಇಲ್ಲ
ಕಾಣಾ ನಿಃಕಳಂಕ ಮಲ್ಲಿಕಾರ್ಜುನಾ
[ಪಡಿ-ಒಂದು ಅಳತೆ; ಆವು-ಹಸು]
ಆನೆ ಕುದುರೆ ಸಂಪತ್ತು ಬೇಕಾದ್ದಕ್ಕಿಂತ ಸಾವಿರಪಟ್ಟು ಹೆಚ್ಚು ಇದ್ದರೂ ಅಷ್ಟೆ, ಇರದಿದ್ದರೂ ಅಷ್ಟೆ. ಉಣ್ಣುವುದು ಒಂದಳತೆ ಅನ್ನ, ಕುಡಿಯುವುದು ಒಂದು ಹಸು ಕರೆದ ಒಂದಿಷ್ಟು…