ಅವಕ್ಕೆ ಅದೆಲ್ಲಾ ಯಾಕೆ ಅರ್ಥವಾಗಲ್ಲ…?!

ಅವಕ್ಕೆ ಅದೆಲ್ಲಾ ಯಾಕೆ ಅರ್ಥವಾಗಲ್ಲ…?!

ನಕ್ಸಲರ ಅಟ್ಟಹಾಸಕ್ಕೆ ಮತ್ತೆರಡು ಹೆಣ ಬಿದ್ದಿದೆ. ಬಿಜೆಪಿಯನ್ನು ಬೆಂಬಲಿಸಬೇಡಿ ಅನ್ನುವ ಕರೆಗೆ ಓಗೊಡಲಿಲ್ಲ ಅಂತಾ ಅವರು ಕೊಲೆ ಮಾಡಿದ್ದಂತೆ! ಅದೇ ಕೊಲೆಯನ್ನು ಭಜರಂಗಿಗಳು, ಹಿಂದುವಾದಿಗಳು ಮಾಡಿದ್ದರೆ ನಮ್ಮ ನಾಡಿನ ಬುದ್ದಿಜೀವಿಗಳ ನಾಡಿಮಿಡಿತ ಏರಿಹೋಗುತ್ತಿತ್ತು! ಅಯ್ಯೋ ಅಮಾಯಕರನ್ನು ಕೊಂದರು…ಕರ್ನಾಟಕ ಮತ್ತೊಂದು ಗುಜಾರಾತ್ ಆಗುತ್ತಿದೆ…ಅಂತೆಲ್ಲಾ ಘ್ನಾನಪೀಠಿಗಳ ಪುಂಗಿ ಶುರುವಾಗುತ್ತಿತ್ತು. ಮಾನವೀಯತೆಯ ಭಾವ ಉಕ್ಕಿ ಉಕ್ಕಿ ಹರಿಯುತ್ತಿತ್ತು! ಆದರೆ ಅದೇ ಕೃತ್ಯವನ್ನು ನಕ್ಸಲೀಯರು ಮಾಡಿದರೆ ಬುದ್ದಿಜೀವಿಗಳ ಭಾವ ಯಾಕೆ ನಿಮಿರುವುದಿಲ್ಲ?!
ನಾನು ಟ್ಯಾಬ್ಲಾಯ್ಡೊಂದಕ್ಕೆ ವರದಿಗಾರಿಕೆ ಮಾಡುತ್ತಿದ್ದಾಗ ಬೋಜಶೆಟ್ಟರನ್ನು ಮಾತಾಡಿಸಿದ್ದೆ. ಅವರಿಗೆ ಊರಿನಲ್ಲಿ ಬದುಕಲು ನಕ್ಸಲರು ನೀಡುತ್ತಿರುವ ಕಿರುಕುಳವನ್ನು, ಅವರು ಅದನ್ನು ಮೆಟ್ಟಿನಿಲ್ಲುತ್ತಿರುವ ರೀತಿಯನ್ನು ವಿವರಿಸಿದ್ದರು. ಮೊನ್ನೆಯಿಂದ ಅದ್ಯಾಕೋ ಆ ಶೆಟ್ಟರ ನೆನಪೇ ಕಾಡುತ್ತಿದೆ. ಹೆಬ್ರಿಯ ಹಳ್ಳಿಮೂಲೆಯೊಂದರಲ್ಲಿ ಶಾಲೆಯ ಅಧ್ಯಾಪಕರಾಗಿ ತಮ್ಮ ಪಾಡಿಗೆ ತಾವು ಬದುಕುತ್ತಿದ್ದ ಶೆಟ್ಟರಿಗೆ ಸಮಾಜೋದ್ದಾರಕ ನಕ್ಸಲರು ಮೃತ್ಯುಪಾಶವಾದರು.ಹೆಬ್ರಿಯಂತಹ ಕಾಡುಮೂಲೆಯ ಹಳ್ಳಿಯಲ್ಲಿ ಇದ್ದ ಸಮಸ್ಯೆಗಳಾದರೂ ಏನು? ನಕ್ಸಲಿಸಂ ಅಲ್ಲಿಗೆ ಯಾಕೆ ಬಂದು ವಕ್ಕರಿಸಿತು. ನಕ್ಸಲಿಸಂ ಬಂದ ಮೇಲೆ ಬಗೆಹರಿದ ಸಮಸ್ಯೆಗಳಾದರೂ ಏನು?!…..ಊಹುಂ ಇವ್ಯಾವುದಕ್ಕೂ ನಮ್ಮ ಘ್ನಾನಪೀಠಿಗಳ ಹತ್ತಿರ ಉತ್ತರವಿಲ್ಲ. ಹಳ್ಳಿಮೂಲೆಯ ಸಮಸ್ಯೆಗಳು ಕೇವಲ ಪಶ್ಚಿಮಘಟ್ಟದ ಹಳ್ಳಿಗೆ ಮಾತ್ರ ಸೀಮಿತವಲ್ಲ. ಭಾರತದ ಪ್ರತಿಯೊಂದು ಹಳ್ಳಿಗಳಿಗೂ ಇದೆ. ಅದರ ನಡುವೆ ನಮ್ಮ ನಾಡಿನ ಜನ ಶಾಂತಿಯಿಂದ, ನೆಮ್ಮದಿಯಿಂದ ಜೀವನ ನಡೆಸುತ್ತಾ ಬಂದಿದ್ದಾರೆ. ವಿದ್ಯುತ್ ಇಲ್ಲ, ಶಾಲೆಯಿಲ್ಲ…ಊಹುಂ ಇಂತಹ ಸಮಸ್ಯೆಗಳಿಗೆ ನಮ್ಮವರು ತಲೆಕೆಡಿಸಿಕೊಳ್ಳಲೇ ಇಲ್ಲ. ಅವರಿಗೆ ಚೆನ್ನಾಗಿ ಗೊತ್ತು ಈ ನಾಡಿನಲ್ಲಿ ಒಂದು ಹೊತ್ತಿನ ತುತ್ತು ಕೂಳಿಗೂ ಗತಿಯಿಲ್ಲದವರು ಅನೇಕರಿದ್ದಾರೆ ಎಂದು. ಅವನ್ನೆಲ್ಲಾ ಸರಿಪಡಿಸುತ್ತೇವೆ ಎಂದು ಕಾಡೊಳಗೆ ಹೋಗಿ ಮಂಗನಂತೆ ಕುಳಿತರೆ ಪ್ರಯೋಜನವಿಲ್ಲ ಎಂದು.
ರಷ್ಯಾದಲ್ಲಿ ಕ್ರಾಂತಿಯಾಯಿತು, ಚೀನಾದಲ್ಲಿ ಅದಾಯಿತು…..ಹಾಗೆ ಭಾರತದಲ್ಲೂ ಇದಾಗತ್ತೆ! ಹೌದು ಆಗತ್ತೆ ಶಾಂತವಾಗಿದ್ದ ಮಲೆನಾಡಿನಲ್ಲಿ ರಕ್ತಹರಿಯತ್ತೆ. ಬುದ್ದಿಜೀವಿಗಳಿಂದ ಕಾಡಿಗೆ ಹೋಗಿ ಕುಳಿತ ಒಂದಿಷ್ಟು ಬಡವರ, ದಲಿತರ, ಪರದೇಶಿಗಳ ಹೆಣ ಬೀಳತ್ತೆ. ಇದನ್ನೆಲ್ಲಾ ಲಾಭವಾಗಿಸಿಕೊಂಡು, ಇದರಿಂದ ಪ್ರಚಾರಗಿಟ್ಟಿಸಿಕೊಂಡು ಹೋರಾಟ ಅದು ಇದು ಅಂತಾ ತಿರುಗಾಡಿ ಹಣಮಾಡುವ ಅಪ್ರತಿಮ ಹೋರಾಟಗಾರರ ಬೊಗಸೆ ತುಂಬತ್ತೆ ಅವರ ಮಕ್ಕಳು ವಿದೇಶಕ್ಕೆ ತೆರಳಲು ಸುಲಭವಾಗತ್ತೆ. ಅಷ್ಟೆ ಆಗುವುದು ಹೊರತು ಮತ್ತೇನೂ ಆಗಲಾರದು ನಾವು ಚೀನಾ ಮಾದರಿಯನ್ನು ಆರಾಧಿಸಲು ಹೊರಟರೆ!
ಮಲೆನಾಡಿಗೆ ನಕ್ಸಲಿಸಂ ಕಾಲಿಟ್ಟು ಸುಮಾರು ದಶಕಗಳೇ ಕಳೆಯಿತು. ಶೃಂಗೇರಿ, ಕುದ್ರೆಮುಖ ಭಾಗದ ಎಷ್ಟು ಹಳ್ಳಿಗಳು ಉದ್ದಾರವಾಗಿವೆ? ಎಷ್ಟು ಹಳ್ಳಿಗಳಿಗೆ ನಕ್ಸಲರು ರಸ್ತೆ ಮಾಡಿದ್ದಾರೆ.ಎಷ್ಟು ಬಾವಿತೋಡಿದ್ದಾರೆ? ಎಷ್ಟು ಶಾಲೆ ಕಟ್ಟಿಸಿದ್ದಾರೆ? ಎಷ್ಟು ದಲಿತರಿಗೆ ಕೂರಿಸಿ ಊಟಹಾಕುತ್ತಿದ್ದಾರೆ?! ಅಂತಾ ಕೇಳಿದರೆ ಅಯ್ಯೋ ಅದನ್ನೆಲ್ಲಾ ಸರ್ಕಾರ ಮಾಡಬೇಕು! ಅದು ಮಾಡಲೀ ಅಂತಾನೇ ನಾವು ಕಾಡಲ್ಲಿ ಕುಳಿತು ಇಷ್ಟೆಲ್ಲಾ ಹೋರಾಟ ಮಾಡುತ್ತಿರುವುದು! ಅನ್ನುತ್ತಾರೆ ನೂರಕ್ಕೂ ಹೆಚ್ಚು ಜನರಿರುವ ನಕ್ಸಲ್ ತಂಡದವರು. ಅಲ್ಲಾ ಸ್ವಾಮಿ ಬಾವಿತೋಡಲು, ರಸ್ತೆಮಾಡಲು ಸರ್ಕಾರ ಯಾಕೆ ಬೇಕು ನೂರು ಮಂದಿ ಸಾಕಾಗುವುದಿಲ್ಲವೇ?
ಬನ್ನಿ ನಮ್ಮ ನಾಡಿನಲ್ಲಿ ಒಂದಿಷ್ಟು ಸ್ತ್ರೀಶಕ್ತಿ ಕೇಂದ್ರಗಳಿವೆ. ಸರ್ಕಾರದ ಸಹಾಯವಿಲ್ಲದೇ ಅವು ಮಾಡುತ್ತಿರುವ ಕೆಲಸವನ್ನು ನೋಡಬಹುದು. ನಾಚಿಕೆ ಆಗಬೇಕು ನಕ್ಸಲರಿಗೆ ಒಬ್ಬ ಹೆಣ್ಣು ಮಗಳು ಮಾಡುವ ಕೆಲಸವನ್ನು ಮಾಡಲಾಗದೇ ಷಂಡರಂತೆ ಕಾಡಿಗೆ ಹೋಗಿ ಕುಳಿತುಕೊಳ್ಳಲು. ಅವರನ್ನು ಕಾಡಿಗೆ ಹೋಗುವಂತೆ ಪ್ರೇರೇಪಿಸುವ ಒಂದಿಷ್ಟು ಪ್ರಾಧ್ಯಾಪಕರಿಗೆ, ಬುದ್ದಿಜೀವಿಗಳಿಗೂ, ಹುಳಿ ಹುಳಿ ಸಂಪಾದಕರಿಗೂ ನಾಚಿಕೆಯಾಗಬೇಕಿತ್ತು. ಬುದ್ದಿ ಪರಾಕಾಷ್ಠೆ ಅತಿಯಾದರೇ ಸಮಾಧಿ ಸ್ಥಿತಿ ತಲುಪುತಾರಂತೆ! ನಾಚಿಕೆ, ಮಾನ, ಮರ್ಯಾದೆ ಎಲ್ಲವನ್ನೂ ಬಿಡುತ್ತಾರಂತೆ! ನಿರ್ಲಿಪ್ತ ಸ್ಥಿತಿ ಅಂತಾರಲ್ಲಾ ಅಂತಹದ್ದೇ ಸ್ಥಿತಿ ತಲುಪುತ್ತಾರಂತೆ ನಮ್ಮ ನಾಡಿನ ಬುದ್ದಿಜೀವಿಗಳು ಅದೇ ಹಂತ ತಲುಪಿದವರು! ಎಲ್ಲವನ್ನು ತ್ಯಜಿಸಿ ನಿಂತಿರುವವರು!ಅವರಿಗೆಲ್ಲಾ ಚೆನ್ನಾಗಿ ಗೊತ್ತು ಈ ಹೋರಾಟದಲ್ಲಿ ಸಾಯುವವರು ಅಮಾಯಕರು ಹೊರತು ತಮ್ಮ ಹೆಂಡಿರು ಮಕ್ಕಳು , ತಾವು ಇಟ್ಟುಕೊಂಡವರು , ಕಟ್ಟಿಕೊಂಡವರು ಸಾಯುವುದಿಲ್ಲ ಅಂತಾ! ಯಾಕೋ ಇದನೆಲ್ಲಾ ನೋಡುತ್ತಿದ್ದರೆ ಶಿವರಾಮ ಕಾರಂತರ ಗೋಂಡಾರಣ್ಯ ಕಾದಂಬರಿ ನೆನಪಿಗೆ ಬರತ್ತೆ. ಇಂತಹವರನ್ನು ನೋಡಿಯೇ ಬಹುಶಃ ಕಾರಂತರು ಆ ಕಾದಂಬರಿ ಬರೆದಿರಬೇಕು!
ಒಟ್ಟಲ್ಲಿ ಶಾಂತ ಮಲೆನಾಡಿನಲ್ಲಿ ರಕ್ತದೋಕಳಿ, ಅಮಾಯಕರ ಬಲಿ. ಈ ಹೋರಾಟಕ್ಕೆ ಶೀಘ್ರವಾಗಿ ಕಡಿವಾಣ ಹಾಕಲೇಬೇಕಿದೆ. ಬೇರು ಕೀಳದೇಮರ ಕಡಿದ್ರೆ ಪ್ರಯೋಜನವಿಲ್ಲ. ಹಾಗಾಗಿ ಯೂನಿವರ್ಸಿಟಿ ವಿದ್ಯಾರ್ಥಿಗಳನ್ನು ನಕ್ಸರನ್ನಾಗಿ ಪರಿವರ್ತಿಸುವ ಕೆಲ ಪ್ರಾದ್ಯಾಪಕರನ್ನು, ನಾಡಿನಲ್ಲಿ ಕುಳಿತು ನಕ್ಸಲ್ ಪರ ಸಂಪಾದಕೀಯ ಬರೆಯುವ ಕೆಲ ಹುಳಿಹುಳಿ ಸಂಪಾದಕರನ್ನು ಪೊಲೀಸರು ಮೊದಲು ಎನ್‌ಕೌಂಟರ್ ಮಾಡಿದ್ದರೆ ಚೆನ್ನಾಗಿತ್ತು.ಅದೆಲ್ಲಾ ಏನೇ ಇರಲಿ ಸತ್ತ ಬೋಜಶೆಟ್ಟಿಯ ಜೀವಕ್ಕೆ ಬೆಲೆತೆರುವವರು ಯಾರು?ಗುಜಾರಾತ್‌ನಲ್ಲಿ ಸತ್ತವರದ್ದು ಮಾತ್ರ ಜೀವವಾ? ಹೆಬ್ರಿಯವರದ್ದು ನಿರ್ಜಿವವಾ? ಇದೆಲ್ಲಾ ಯಾಕೆ ಅವಕ್ಕೆ….ಅಂದರೆ ಅವಕ್ಕೆ…ಅದೇ ಬಹಿರಂಗವಾಗಿ…ಅಲ್ಲಲ್ಲ ಅಂತರಂಗದಿಂದ ಬರೆಯುತ್ತಾವಲ್ಲ ಹುಳಿ ಹುಳಿ ಸಂಪಾದಕರು, ಬುದ್ದಿಯ ಪರಾಕಾಷ್ಠೆಯಿಂದ ನಿರ್ಲಿಪ್ತ ಸ್ಥಿತಿ ತಲುಪಿರುವವರಿಗೆ ಅರ್ಥವಾಗಲ್ಲ?!(ಹುಳಿ ಅಂದರೆ ಮಲೆನಾಡು ಬಾಷೆಯಲ್ಲಿ ಅಹಂಕಾರಿ ಅಂತಾ ಅರ್ಥ. ಅದನ್ನು ಇಲ್ಲಿ…..?!!!!)

Rating
No votes yet

Comments