ಕನಿಷ್ಠ ಉಡುಗೆ ಬೇಡ

ಕನಿಷ್ಠ ಉಡುಗೆ ಬೇಡ

ನಮ್ಮ ದೇಶದಲ್ಲಿ ಅತ್ಯಾಚಾರ ಹೆಚ್ಚುತ್ತಿರುವುದಕ್ಕೆ ಕಾರಣ ಮಹಿಳೆಯರು ಪ್ರಚೋದನಕಾರಿ ಉಡುಗೆತೊಡುತ್ತಿರುವುದು ಎಂದು ಆಂಧ್ರ ಪ್ರದೇಶದ ಪೊಲೀಸ್ ಮುಖ್ಯಸ್ಥ ದಿನೇಶ್ ರೆಡ್ಡಿ ಹೇಳಿಕೆ ನೀಡುವುದರಮೂಲಕ ಜೇನುಗೂಡಿಗೆ ಕಲ್ಲು ಬೀಸಿದ್ದಾರೆ. ಈ ಮಾತಿಗೆ ವಿರೋಧ ವ್ಯಕ್ತಪಡಿಸಿದರು ನಮ್ಮ ಸನ್ಮಾನ್ಯಗೃಹ ಮಂತ್ರಿಗಳು. ಈ ಹೇಳಿಕೆ ಸರಿಯಲ್ಲ, ಕಾಕ್ಟೇಲ್ ಪಾರ್ಟಿ ಗೆ ಹೋಗುವ ಮಹಿಳೆ ಬಿಕಿನಿಯಲ್ಲಿಹೋಗಲಾರಳು, ಸಂದರ್ಭಕ್ಕೆ ಅನುಸಾರವಾಗಿ ಆಕೆ ಬಟ್ಟೆ ತೊಡುವಳು ಎಂದು ಬಡಬಡಿಸಿದರು.
ಗೃಹ ಮಂತ್ರಿಗಳಿಗಿಂತ ಚೆನ್ನಾಗಿ ಸಮಾಜ ಕಾಯುವ ಪೊಲೀಸರಿಗೆ ತಾನೇ ಗೊತ್ತಿರೋದು ಸಮಾಜದಆಗುಹೋಗುಗಳು? ಕನಿಷ್ಠ ಬಟ್ಟೆ ತೊಟ್ಟ ಹುಡುಗಿ ಅಥವಾ ಮಹಿಳೆ ಯಾವುದೇ ಕಾರಣದಿಂದಲೂ ಒಳ್ಳೆಯ ಭಾವನೆತರಲಾರರು. ನಮ್ಮಲ್ಲಿ ಬರುವ ವಿದೇಶೀ ಮಹಿಳೆಯರನ್ನು ಗಂಡಸರು ನೋಡುವ ರೀತಿ ನೀವುಗಮನಿಸಿರಲೇಬೇಕಲ್ಲ, ಅದಕ್ಕೆ ಕಾರಣ ಏನು, ಆಕೆಯ ಅಂಗ ಸೌಷ್ಠವದ ಪ್ರದರ್ಶನ. ಮೈ ಪ್ರದರ್ಶನ ನಡೆಸೋಮಹಿಳೆಯರು loose character ನವರು ಎಂದು ಬಹಳ ಜನ ತಪ್ಪಾಗಿ ತಿಳಿಯುತ್ತಾರೆ. ನಮಗೇಕೆ ವಿದೇಶೀ ಜನರ ಉಡುಗೆ ತೊಡುಗೆ ಮೇಲೆ ವ್ಯಾಮೋಹ? ಅವರು ಕನಿಷ್ಠ ಉಡುಗೆ ತೊದಲು ಕಾರಣ ಯಾವಾಗಲೂ ಗಡಿ ಬಿಡಿಯಾಗಿರುವ ಅವರ ಚಟುವಟಿಕೆ ಯಾಗಿರಬಹುದು. ನಮ್ಮ ಮಹಿಳೆಯರ ಥರ ಉದ್ದದ ಕೂದಲನ್ನೂ ಸಹ ಬೆಳೆಸೋಲ್ಲಅವರು. ಸ್ನಾನದ ನಂತರ ಒಣಗಲು ನಂತರ  ಬಾಚಲು ಸಿಗದ ಸಮಯದ ಕಾರಣ. ಮಹಿಳೆಯರು ಅಂತರಂಗದ ಸೌಂದರ್ಯಕ್ಕೆ ಪ್ರಾಶಸ್ತ್ಯ ಕೊಟ್ಟರಾಗದೆ? ಈ ವರದಿ ಆಂಗ್ಲ ಪತ್ರಿಕೆಯಲ್ಲಿ ಬಂದಿದ್ದೆ ತಡ, ಪ್ರತಿಕ್ರಿಯೆಗಳಮಹಾಪೂರವೇ ಹರಿದು ಬಂತು. ಬಹುತೇಕ ಓದುಗರು ದಿನೇಶ್ ರೆಡ್ಡಿಯವರ ಮಾತಿಗೆ ಸಹಮತ ವ್ಯಕಪಡಿಸಿದರು.ದಿನೇಶ ರೆಡ್ಡಿಯವರ ಪ್ರಕಾರ ಗ್ರಾಮಾಂತರ ಪ್ರದೇಶಗಳಿಗೂ ಅಂಟಿಕೊಂಡಿದೆ ಈ ಪಿಡುಗು. ಪೊಲೀಸ್ಮುಖ್ಯಸ್ಥರ ಹೇಳಿಕೆಗೆ ಮಹಿಳಾ ಸಂಘಟನೆಗಳು ರೆಡ್ಡಿಯವರನ್ನು chauvinist ಎಂದು ಮೂದಲಿಸಿದವು.
ನಮ್ಮ ಸಂಸ್ಕೃತಿ ಪಾಶ್ಚಾತ್ಯರಿಗಿಂತ ವಿಭಿನ್ನ, ಹಾಗೆಯೇ ಅಂಥಾ ಮಾಡರ್ನ್ ಸಂಸ್ಕಾರಕ್ಕೆ ನಮ್ಮಸಮಾಜ ಇನ್ನೂ ತಯಾರಾಗಿಲ್ಲ, ತಯಾರಾಗುವವರೆಗೆ ನಮ್ಮ ಸಂಸ್ಕೃತಿಗೆ ತಕ್ಕುದಾದ ಉಡುಗೆ ಧರಿಸುವುದುಒಳಿತು.

Rating
No votes yet

Comments