ಗಾದೆ

ಗಾದೆ

ಸಮತೆ ತೊಟ್ಟು(=ಧರಿಸಿ) ಪದವಿ ಮುಟ್ಟು

ಇದ್ದೂ ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು

ಇದ್ದ ಕಾಲದಲ್ಲಿ ಅಟ್ಟುಣ್ಣ ಬೇಕು

ಸುಳ್ಳನ ಮಾತು ಕೆಸರೊಳಗೆ ಮುಳ್ಳು ತುಳಿದಂತೆ

ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ

ಊಡದ ಆವಿಗೆ ಉಣ್ಣದ ಕರುವ ಬಿಟ್ಟಂತೆ

ದೈವದ ಸೊಲ್ಲು ಹರಟುವಾತ ಭವದೊಳಗೆ ತೇಲಾಡುತಿದ್ದ

ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ

ಮಾತಿಗೊಂದು ಮಾತು ಬಂತು ವಿಧಿ ಬಂದು ಆತುಕೊಣ್ತು

ಮಾತಿಂದಲೇ ನಗೆನುಡಿ ಮಾತಿಂದಲೇ ಹಗೆಕೊಲೆ

ಮಾತಿಂದಲೇ ಉಪಚಾರ ಮಾತಿಂದಲೇ ಅಪಚಾರ

ಬನ್ನ ಪಟ್ಟುಣ್ಣೋ ಬಿಸಿ ಅನ್ನಕ್ಕಿಂತ ತಂಗುಳೇ ಲೇಸು

ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ

ಬಸುರಲ್ಲಿ ಬಂದ ಕೂಸು ಮುದ್ದು

ಕೊಂಡು ಕೊಟ್ಟದ್ದೂ ಇಲ್ಲ ಹಂಚಿ ಉಂಡದ್ದೂ ಇಲ್ಲ ಸ್ವರ್ಗ ಬೇಕು ಅಂದ

ಬಚ್ಚಿಟ್ಟ ಆಸ್ತಿ ಹೊಂಚುತ್ತಿದ್ದವರ ಪಾಲಾಯ್ತು

ನಿದ್ದೆ ಗೈಯೋನ ಹೊತ್ತು ನುಂಗ್ತು

ಬಡವರ ಮಾತು ನುಡಿನುಡಿಗೂ ಬೇಸರ

ಅಂಬಲಿಗೆ ಗತಿಇಲ್ಲದವ ಕಟ್ಟಾಣಿ ರಂಬೆಯ ಬಯಸಿದ

ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ

ರಸವಳ್ಳಿ ಹೆಣ್ಣಿಗೆ ರಸಪೂರಿ ಹಣ್ಣಿಗೆ ಮನ ಸೋಲದವರಿಲ್ಲ

ಕುಲಗೇಡಿ ಮಗ ಹುಟ್ಟಿ ಕುಲಕ್ಕೇ ಮಸಿ ಬಳಿದ

ಹೊತ್ತು ಮೀರಿದ ಮಾತು ತನಗೇ ಕುತ್ತು ತಂತು

ಇದ್ದುದ ಉಣ್ಣದವನ ಬಾಯಾಗೆ ಕಡೆಗೆ ಮಣ್ಣು ಬಿತ್ತು

ಪರರ ಹಂಗಿಸಿ ಮಂಗ ಅನಿಸಿಕೊಂಡ

ಹೆಣ್ಣಿಂದ ರಾವಣ ಕೆಟ್ಟ ಮಣ್ಣಿಂದ ಕೌರವ ಕೆಟ್ಟ

ಭೋಗಿ ಭೋಗದಲ್ಲಿ ನೆರೆದು ರೋಗಿಯಾದ, ಯೋಗಿ ಯೋಗದಲ್ಲಿ ನೆರೆದು ಯೋಗವಾದ

ರೀತಿಯಲ್ಲದ ಮಾತು ತಲೆ ಬೇನೆ

ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು

ಅಕ್ಕಸಾಲಿಗನ ಮಗ ಚಿಮ್ಮಟ ಹಿಡಿಯುತ್ತಲೇ ಹೊನ್ನ ಕದ್ದ

ಸಿದ್ದಿಗಿಂತ ಬಲವಿಲ್ಲ ಬುದ್ಧಿಗಿಂತ ಹಿರಿದಿಲ್ಲ

ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು

ಅರುಗೆಟ್ಟ ನಿದ್ದೆ (=ಅರಿವಿಲ್ಲದೆ ಮಲಗಿರುವುದು) ಇರಗೆಟ್ಟು (=ಇರವು ಗೆಟ್ಟು) ಸತ್ತಂತೆ

ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು

ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ

ದೈವ ಒಲ್ಲದೆ ಆಗೋದಿಲ್ಲ ದೈವ ಒಲಿದರೆ ಹೋಗೋದಿಲ್ಲ

ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ

ವಿದ್ಯೆ ಇಲ್ಲದವನ ಮೊರೆ ಹಾಳೂರ ಹದ್ದಿನಂತೆ

ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ

ವಿದ್ಯೆ ಬಲ್ಲವ ಎಲ್ಲಿದ್ದರು ಸಲ್ಲುವ

ಕುಚುಕು ಬುದ್ಧಿ ಹೊಕ್ಕವನು ಕೆಟ್ಟ

ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ

ಒಂದೊಂದು ಕಾಲಕ್ಕೆ ಒಂದೊಂದು ಪರಿ

ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ

ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ

ಸಿರಿತನ ಇರೂತನ ಹಿರಿತನ ಘನ

ಸಿರಿಯಣ್ಣ ಉಳ್ಳನಕ ಹಿರಿಯಣ್ಣ ಇಲ್ಲಾದಗ ನಡಿಯಣ್ಣ

ಎಂಟು ಹೊನ್ನು ಘನವಾದ ನಂಟು ತಂತು

ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ

ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು

ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ

ತೋಟದ ಕಬ್ಬಿಗಿಂತ, ಪೋಟೆಯ ಜೇನಿಗಿಂತ, ಬಲ್ಲವಳ ಕೂಟ ಲೇಸು

ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು

ತೋಟದ ಬೇಲಿಯನ್ನು ದಾಟಿ ನೋಡದವರಾರು

ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ

ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು

ಮಲ್ಲಿಗೆ ವನದಲ್ಲಿ ತುರುಬಿಲ್ಲದಾಕೆ ಸುಳಿದಂತೆ

ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ

ಆರಿದೋಗರಕ್ಕೆ ಮೊಸರಿಕ್ಕಿ ಕಾಗೆಗೆ ಸೂರೆಕೊಟ್ಟರು

ದೀಪಕ್ಕೆ ಎಣ್ಣೆಯ ಹುಯ್ಯ್ ಅಂತ ಸುರಿಯುತ್ತಾರೇ

ಹುಯ್ಯಂತ ಕೊಡ ಬೇಡ ಸುಮ್ಮನೆ ಕೂರಲು ಬೇಡ

ಬಂದರು ಬಾ ಅನ್ನದ ದರ್ಪಕುರುಡರ ಸಾವಸವೇ ಬೇಡ

ಮುತ್ತು ಚಿಪ್ಪಲ್ಲಿ ಹುಟ್ಟಿ ಮುಕುಟದ ಮಣಿಯಾಯ್ತು

ನೆರೆದ ಸಿರಿ ಜಾವಕ್ಕೆ ಹರಿದು ಹೋಯಿತು

ಹೊನ್ನಿನ ಶೃತಿ ಕೇಳಿ ಎಂಥೆಂಥಾವರೆಲ್ಲ ಭ್ರಮೆಗೆ ಬಿದ್ದರು

ಬರಿಗೆಟ್ಟ ಬದುಕಿಗಿಂತ ಕೊಂದು ತಿನ್ನೊ ಮಾರಿ ಲೇಸು

ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು

ಮನಸ್ಸಿಲ್ಲದವಳ ಒಡನಾಟ ಮಾತುಮಾತಿಗು ಬೇಸರ

ಲಲನೆಯರ ಒಲುಮೆ ತೊಲಗಿದರೆ ಇಲ್ಲ

ಇಂಬರಿತು ಕೊಡುವಳೆ ರಂಭೆ

Rating
No votes yet