ಚಿತ್ರ, ಘನ ಘೋರ

ಚಿತ್ರ, ಘನ ಘೋರ

ಚಿತ್ರಗಳು ನೋಡುವವರ ಮೇಲೆ ಗಾಢ, ಗಂಭೀರ ಪರಿಣಾಮ ಬೀರುತ್ತವೆ. ಆಂಗ್ಲ ಭಾಷೆಯಲ್ಲಿ a picture speaks a thousand words ಮತ್ತು a picture is worth of thousand words ಎಂತಲೂ ಹೇಳುತ್ತಾರೆ. ಚಿತ್ರಗಳು ಬರೀ ಭಾವನೆಗಳನ್ನ ರೂಪಿಸುವುದಕ್ಕೆ, ಕೆರಳಿಸುವುದಕ್ಕೆ ಮಾತ್ರವಲ್ಲ, ಹೇಳಿದ ವಿಷಯ ಸರಿಯಾಗಿ ಅರ್ಥವಾಗಿ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಯೂರಲೂ ಸಹಕಾರಿಯಾಗುತ್ತವೆ.


ಒಸಾಮಾನನ್ನು ಬಲಿ ತೆಗೆದುಕೊಂಡ ವಿಷಯವನ್ನು ಒಬಾಮಾ ಅಮೆರಿಕೆಗೂ, ವಿಶ್ವಕ್ಕೂ ಹೇಳಿದ ಕೂಡಲೇ ಎಲ್ಲರೂ ಕೇಳಿದ್ದು ಓಕೆ, ಎಲ್ಲಿದೆ ಚಿತ್ರ? ಎಂದು. ಹತ್ತು ವರ್ಷಗಳಿಂದ ಪ್ರಪಂಚ ಪೂರ್ತಿ ಜಾಲಾಡಿಯೂ ಸಿಗದ, ಈ ಹುಡುಕಾಟಕ್ಕೆ ಸುಮಾರು ಒಂದು ಟ್ರಿಲ್ಲಿಯನ್ ಡಾಲರ್ (೧೦೦ ಶತ ಕೋಟಿ ಡಾಲರ್) ಖರ್ಚು ಮಾಡಿಯೂ ಕೈಗೆ ಸಿಗದ ಒಸಾಮಾ ಏಕಾಏಕಿ ಸಿಕ್ಕಿ ಬಿದ್ದಿದ್ದು ಮಾತ್ರವಲ್ಲ ಸತ್ತೂ ಬಿದ್ದ ಎಂದರೆ? picture please, ಎಂದಿತು ಅಮೇರಿಕಾ ಮತ್ತು ವಿಶ್ವ. ಚಿತ್ರ ಘೋರವಾದ ದೃಶ್ಯದಿಂದ ಕೂಡಿದ್ದರಿಂದ ನಾವು ಕೊಡೋಲ್ಲ ಅಂತ ಶ್ವೇತ ಭವನ. gruemsome picture ತೋರಿಸಿ ಒಸಾಮಾನ ಬೆಂಬಲಿಗರನ್ನು ಮತ್ತಷ್ಟು ಹಿಂಸೆಗೆ ಪ್ರಚೋದಿಸಲು ನಾವು ತಯಾರಿಲ್ಲ, ಮಾತ್ರವಲ್ಲ "You know, that's not who we are.", ಎಂದರು ಅಮೆರಿಕೆಯ ಅಧ್ಯಕ್ಷರು.


ತನ್ನ ಬದುಕಿನ ಒಂದು ಘಟ್ಟದ ನಂತರ ಘೋರವಾಗಿ ಪ್ರಪಂಚವನ್ನು ಕಾಡಿದ ಒಸಾಮಾ ತನ್ನ ಸಾವಿನಲ್ಲೂ ಘನ ಘೋರನಾದ. ಈ ಶುಕ್ರವಾರ ಹೇಳಿಕೆಯೊಂದರಲ್ಲಿ ತಮ್ಮ ನಾಯಕ ಸತ್ತಿರುವುದನ್ನು ಅಲ್ಕೈದಾ ಖಚಿತಪಡಿಸಿ ಚಿತ್ರಕ್ಕಾಗಿ ಗೋಗರೆಯುತ್ತ್ತಿದ್ದ ಜನರ ಬಾಯನ್ನು ಶಾಶ್ವತವಾಗಿ ಮುಚ್ಚಿಸಿತು.

 

Rating
No votes yet