ಚುಚ್ಚಾಣಿ
ಚುಚ್ಚಾಣಿ
ಚುಚ್ಚಾಣಿ ಚೂಪಿನದಣ್ಣಾ
ಸಿಕ್ಕಸಿಕ್ಕಲಿ ಚುಚ್ಚಿ ನೋಯಿಸುವುದಣ್ಣಾ
ಚುಚ್ಚಾಣಿ ಚೂಪಿನದಣ್ಣಾ|| ||ಪ||
ಚಿನ್ನದ ಚುಚ್ಚಾಣಿ ನವರಸದ ಚುಚ್ಚಾಣಿ
ಎಲ್ಲರ ಮೆಚ್ಚಿನ ಕಟ್ಟಾಣಿಯಣ್ಣಾ ||ಚುಚ್ಚಾಣಿ||
ಆಸೆ ಪುಗ್ಗೆಯೇರಿ ಸಂಭ್ರಮದಿ ತೇಲಿದ್ದೆ
ಪುಗ್ಗೆ ಡಬ್ಬೆಂದು ಧೊಪ್ಪನೆ ಕೆಳಬಿದ್ದೆ|| ||ಚುಚ್ಚಾಣಿ||
ಬಂಧು ಬಳಗದೆ ಕೂಡಿ ನಲಿಯುತಲಿದ್ದೆ
ಚುಚ್ಚು ಮಾತಿಂದಾಗಿ ಒಂಟಿ ಹೊರಬಿದ್ದೆ||||ಚುಚ್ಚಾಣಿ||
ದೇವಾಂತಃಕರಣದ ಫಲ ಕೈಲಿ ಹಿಡಿದಿದ್ದೆ
ಚುಚ್ಚು ಕಾಲ್ತೊಡರಿ ಎಡವಿ ಬಿದ್ದಿದ್ದೆ|| ||ಚುಚ್ಚಾಣಿ||
ಚುಚ್ಚಾಣಿ ಚೂಪಿನದಣ್ಣಾ
ಸಿಕ್ಕಸಿಕ್ಕಲಿ ಚುಚ್ಚಿ ನೋಯಿಸುವುದಣ್ಣಾ
ಚುಚ್ಚಾಣಿ ಚೂಪಿನದಣ್ಣಾ||
************
-ಕವಿನಾಗರಾಜ್.
(ಸ್ಪೂರ್ತಿ: ಪುರಂದರದಾಸರ 'ದುಗ್ಗಾಣಿ ಬಲು ದೊಡ್ಡದಣ್ಣಾ"..)
ಲೇಖನ ಶೀರ್ಷಿಕೆಯಲ್ಲಿ ಪ್ರಕಟಗೊಂಡ ಬರಹಗಳಿಗೆ ಲಿಂಕ್: ಕವನ 'ಸ್ವಾರ್ಥ: http://sampada.net/article/25562, ಕವನ "ಏನಂತೆ?" : http://sampada.net/image/25604, ಕಥೆ "ಪಾಪಶೇಷ": http://sampada.net/article/25691, ಕವನ: "ಎಂತು ಅರ್ಚಿಸಲಿ?" : http://sampada.net/article/25719.
Comments
ಉ: ಚುಚ್ಚಾಣಿ
In reply to ಉ: ಚುಚ್ಚಾಣಿ by P.Ashwini
ಉ: ಚುಚ್ಚಾಣಿ