ಜ್ಞಾಪಕ ಶಕ್ತಿ ಹೆಚ್ಚಲು...
ಜ್ಞಾಪಕ ಶಕ್ತಿ ಹೆಚ್ಚಲು ದಿನಕ್ಕೊಂದು ಲೋಟ ಹಾಲು ಕುಡಿಯಬೇಕಂತೆ. ಅಮೆರಿಕೆಯ ಮೇಯ್ನ್ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆ, ಅಥವಾ some-ಶೋಧನೆ. ಯಾವುದಾರೂ ಕಂಪೆನಿ, ಹಾಲಿನ ಕಂಪೆನಿಯೋ, ಚಾಕಲೇಟ್ ಕಂಪೆನಿಯೋ some thing ಕೊಟ್ಟರೆ ಅವರಿಗೆ ಇಷ್ಟವಾದ , ಅವರ ಉತ್ಪಾದನೆಗಳು ಮಾರಾಟವಾಗಲು ಸಹಾಯಕವಾಗುವ some-ಶೋಧನೆಗಳು ಲಭ್ಯ. ಇಲ್ಲಿ ಯಾರಾದರೂ ಈ ವಿಶ್ವವಿದ್ಯಾಲಯಕ್ಕೆ ಕೊಟ್ಟಿದ್ದಾರೋ ಏನೋ ಗೊತ್ತಿಲ್ಲ. ಹಾಲು ಕುಡಿಯಿರಿ, ಕುಡಿದರೆ ಒಳ್ಳೆಯದು ಎನ್ನವುದು ನಮ್ಮ ಭೂಮಿಯಷ್ಟೇ ಹಳತಾದ ಸತ್ಯ. ಅದಕ್ಕೆ ಅಲ್ಲವೇ ಮನುಷ್ಯನಿಂದ ಹಿಡಿದು ಮೃಗಗಳವರೆಗೂ ಭೂಮಿಗೆ ಉದುರಿದ ಕೂಡಲೇ ಭಗವಂತ ಹಾಲಿನ ಸರಬರಾಜನ್ನು ಅಡೆತಡೆಯಿಲ್ಲದೆ ಮುಂದುವರೆಸಿರುವುದು?
ದಿನಕ್ಕೆ ಒಂದು ಲೋಟ ಹಾಲು ಕುಡಿದರೆ ಜ್ಞಾಪಕ ಶಕ್ತಿ ಹೆಚ್ಚುತ್ತಂತೆ. ಎಲ್ಲರೂ ಕಿವಿ ನಿಮಿರಿಸಿ ಕೇಳುವ, ಕಣ್ಣರಳಿಸಿ ನೋಡುವ ವಿಷ್ಯ ಇದು. ವಾವ್, ನನ್ನ ಮಟ್ಟಿಗೆ ಲೈಂಗಿಕ ಸಾಮರ್ಥ್ಯ ಹೆಚ್ಚಿಸಿ ಕೊಳ್ಳುವುದಕ್ಕಿಂತ ಇಂಪಾರ್ಟೆಂಟ್ ಈ ಜ್ಞಾಪಕ ಶಕ್ತಿ ವರ್ಧನೆ. ಏಕೆಂದರೆ ಜ್ಞಾಪಕ ಶಕ್ತಿ ಇಲ್ಲ ಎಂದರೆ ಲೈಂಗಿಕ ಚಟುವಟಿಕೆ ನಡೆಸುವುದನ್ನು ಮರೆತು ಬಿಡುತ್ತೇವೆ. ಕೆಲವೊಮ್ಮೆ ಹಸಿವಿನಂತೆ ಲೈಂಗಿಕ ಬಯಕೆಗಳು spontaneous ಆಗಿ ಬಂದರೂ ಬದುಕಿನಲ್ಲಿ ಒಂದು ಸ್ಟೇಜ್ ಬರುತ್ತೆ ಜ್ಞಾಪಕ ಬಂದಾಗ ದೈಹಿಕ ಸುಖ ಪಡೆಯಬೇಕು ಎನ್ನುವ ಆಸೆ. ದಿನಕ್ಕೆ ಒಂದು ಲೋಟ ಹಾಲು ಕುಡಿದರೆ ಜ್ಞಾಪಕ ಶಕ್ತಿ ಹೆಚ್ಚು, ೨೩ ರಿಂದ ೯೮ ವರ್ಷ ವಯಸ್ಸಿನ ಸುಮಾರು ೯೦೦ ‘ಎಳೆ’ಯರ ಮೇಲೆ ನಡೆಸಿದ ಸಂಶೋಧನೆಯಿಂದ ಕಂಡು ಕೊಂಡ ಅಂಶ ಇದು. ಆದರೆ ಈಗ ನಾವು ಸೇವಿಸುತ್ತಿರುವುದು - ಹಾಲಾಗಲೀ, ಸೊಪ್ಪಾಗಲೀ, ಮೊಟ್ಟೆಯಾಗಲೀ, ಮಾಂಸವಾಗಲೀ - ಆಹಾರಕ್ಕಿಂತ ಹೆಚ್ಚು ರಾಸಾಯನಿಕಗಳನ್ನು. ಗೊಬ್ಬರದಿಂದ ಶುರುವಾದ ಈ ರಾಸಾಯನಿಕಗಳ ಹಸ್ತಕ್ಷೇಪ ಸೇಬಿನ ಹಣ್ಣಿಗೆ ಮೆರುಗನ್ನು ನೀಡುವವರೆಗೆ ಬಂದು ತಲುಪಿದೆ. ತರಕಾರೀ, ಹಣ್ಣುಗಳು, ಮಾಂಸ ಇವುಗಳಿಗೆ ರಾಸಾಯನಿಕ ಸಿಂಪಡಿಸೀ, ಸಿಂಪಡಿಸೀ ಈಗ ಆಹಾರಕ್ಕೆ ಅಂಟಿಕೊಂಡ ರಸಾಯನಿಕಗಳನ್ನು ತೊಳೆದು ತೆಗೆಯಲು ಮತ್ತೊಂದು ರೀತಿಯ washing detergent ಬಂದಿದೆ. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು, ಅಲ್ಲವೇ?
ಈಗ ಮತ್ತೊಮ್ಮೆ ಹಾಲಿನ ವಿಷಯಕ್ಕೆ ಬರೋಣ. ಹಾಲು ಕುಡಿಯೋಣ, ಅದು ಹಾಲಿನ ಲಕ್ಷಣ ಹೊಂದಿದ್ದರೆ. ಅರ್ಥ? ನಮ್ಮ ದೇಶದಲ್ಲಿ ಸಿಗುವ ಹಾಲು ಹಾಲಲ್ವಂತೆ. ಅಂದ್ರೆ? ಅಂದ್ರೆ, ನಾವು ಕುಡಿಯೋ ಹಾಲಿಗೆ ಯೂರಿಯಾ, ಹಾಳೂ ಮೂಳೂ ಸೇರಿಸಿ ಕೊಡ್ತಾರಂತೆ. ಒಹ್, ಹಾಗಾದ್ರೆ ಹಾಲು ಕುಡಿದು ನಮ್ಮ ಜ್ಞಾಪಕ ಶಕ್ತಿ ವರ್ಧಿಸುವುದೂ ಬೇಡ, ಈಗ ಇರೋ ಶಕ್ತಿಯೇ ಸಾಕು ಎಂದು ಹಾಲಿಗೆ ಬೆನ್ನು ತಿರುಗಿಸಿದರೆ ಒಳ್ಳೆಯದು ಎಂದು ನನ್ನ ಒಪೀನಿಯನ್ನು.
Comments
ಉ: ಜ್ಞಾಪಕ ಶಕ್ತಿ ಹೆಚ್ಚಲು...