ತಾಯೇ ನಿನಗೆ ವಂದನೆ... (ಎಲ್ಲಾ ತಾಯಂದಿರಿಗೆ ಅರ್ಪಣೆ)

ತಾಯೇ ನಿನಗೆ ವಂದನೆ... (ಎಲ್ಲಾ ತಾಯಂದಿರಿಗೆ ಅರ್ಪಣೆ)

Human body can bear only upto 45 Del(Unit) of pain. But at the time of giving girth, a woman feels upto 57 del of pain. this is similar to 20 bones getting fractured, at a time. Love your Mother till the end of your life....   ಈ SMS ಎಷ್ಟು ನಿಜ ಎಷ್ಟು ಸುಳ್ಳು ಅನ್ನೋದರ ಬಗ್ಗೆ ವಾದ ವಿವಾದ ಮಾಡದೇಇದ್ರೂ ಒಬ್ಬ ತಾಯಿ ತನ್ನ ಮಕ್ಕಳಿಗಾಗಿ ಪಡುವ ಕಷ್ಟ ಅಪಾರವಾದದ್ದು ಅನ್ನೋದು ಸತ್ಯ. ಅಂತಹಾ ತಾಯಂದಿರಿಗಾಗಿ, ಪ್ರತಿಯೊಬ್ಬ ಮಹಿಳಾಮಣಿಯರಿಗಾಗಿ ನಾನು ಬರೆದ ಕೆಲವು ಸಾಲುಗಳಿವು. :)
ನನ್ನ ಈ ಕವನವನ್ನು ಎಲ್ಲಾ ತಾಯಂದಿರಿಗೆ ಗೌರವದಿಂದ ಅರ್ಪಿಸುತ್ತಿದ್ದೇನೆ......



ಹಸುಗೂಸು ಹೆರುವಾಗ ನೀ ಕಷ್ಟಪಟ್ಟೆ
ಹೆತ್ತಕಂದನ ಕಂಡು ಸಂತಸವ ಪಟ್ಟೆ
ಹುಟ್ಟಿದ ಹಸುಗೂಸ ಒಲುಮೆಯಲಿ ಸಾಕಿ
ಒಲುಮೆ ಸಿರಿ ಸಂತಸವ ಅನುದಿನವು ಉಣಿಸಿ

ಎದ್ದು ಬಂದಿದ್ದೆ ನಡುರಾತ್ರಿಯಲಿ, ಕೇಳಿ ಕಂದನ ಕೂಗು
ರಟ್ಟೆನೋವಾದರೂ ನೀ ಬಿಡಲಿಲ್ಲ ತೊಟ್ಟಿಲ ತೂಗು
ರಚ್ಚೆಹಿಡಿದತ್ತಾಗ ತೋಳ ತೆಕ್ಕೆಯಲಿ ಮಲಗಿಸಿ
ಮುದ್ದು ಕಂದನ ನಿನ್ನ ಕಣ್ರೆಪ್ಪೆಯಲಿ ಇರಿಸಿ

ಅಯ್ಯೋ ಕಂದನ ಒಡಲು ಬಿಸಿಯಾಯ್ತು
ಹೆತ್ತಕರುಳಿನ ಕೂಗು, ಚಿಂತೆ ನೂರಾಯ್ತು
ಗುಡಿ ಗೋಪುರದಿ ಪೂಜೆ, ಮನೆ ದೇವರಲಿ ಹರಕೆ
ಕಂದನಿಗೆ ಗುಣಮಾಡು, ನಗುತರಿಸು ಮೊಗಕೆ

ಅಪಾರ ಪ್ರೀತಿಯ ಮೊಗೆದು ಬೊಗಸೆಯಲಿ ತುಂಬಿ
ಮಮಕಾರ ತೋರಿ ಮುತ್ತಿನ ಮಳೆ ಸುರಿಸಿ
ನೋವುಗಳ ನುಂಗಿ, ಸಂತಸವ ಉಣಬಡಿಸಿ
ಕಣ್ಣೀರನು ಮರೆಸಿ, ನೋವನ್ನು ತೊರೆಸಿ

ಕೂಸದು ಗೆದ್ದಾಗ ನೀನೂ ಸಂಭ್ರಮಿಸಿ
ಸಿಹಿಯೂಟ ಪ್ರೋತ್ಸಾಹ, ಕಂದನಿಗೆ ಹರಸಿ
ನಿನ್ನೊಲುಮೆಯ ಧಾರೆ ಹರಿದಿರಲಿ ನಿರಂತರ
ನೀಜೊತೆಯಲಿದ್ದರೆ ಸಂಭ್ರಮದ ಸಡಗರ


 


ವಂದನೆಗಳೊಂದಿಗೆ,


ಪ್ರಶಾಂತ ಜಿ ಉರಾಳ

Rating
No votes yet

Comments