ಮಾಧ್ಯಮಗಳು ನಂಬಲನರ್ಹ

ಮಾಧ್ಯಮಗಳು ನಂಬಲನರ್ಹ

ಚಾರ್ಲ್ಸ್ ಶೋಭರಾಜ್ ಅಂತಾರಾಷ್ಟ್ರೀಯ ಕುಖ್ಯಾತಿಯ ಕ್ರಿಮಿನಲ್. ಸರಣಿ ಕೊಲೆಗಾರ, serial killer. ಹಲವಾರು ಹೆಣ್ಣು ಮಕ್ಕಳನ್ನು ಕೊಲೆಗೈದಿದ್ದ ಈತನನ್ನು ಬಿಕಿನಿ ಕಿಲ್ಲರ್ ಎಂದೂ ಕರೆಯುತ್ತಾರೆ. ಈತ ಪೂಲೀಸರಿಗೆ ಲಂಚ್ ಕೊಟ್ಟೋ ಚಳ್ಳೆ ಹಣ್ಣು ತಿನ್ನಿಸಿಯೋ ತಪ್ಪಿಸಿಕೊಳ್ಳುತ್ತಿದ್ದ. ಒಮ್ಮೆ ಯಾರೋ ಒಬ್ಬ ಭಾರತೀಯ ಪೊಲೀಸರು ಇವನ ಹಿಂದೆ ಬಿದ್ದಿದ್ದಾರೆ ಎಂದು  ಪ್ರಸ್ತಾಪಿಸಿದಾಗ ಶೋಭ ರಾಜ್, ಓಹ್, ಭಾರತೀಯ ಪೊಲೀಸರು ೫ ರೂಪಾಯಿ ಪೊಲೀಸರು, ಐದು ರೂಪಾಯಿಯ ನೋಟನ್ನು ಕೊಟ್ಟರೆ ಬಿಟ್ಟು ಬಿಡುತ್ತಾರೆ ಎಂದು ಗಹ ಗಹಿಸಿ ನಕ್ಕಿದ್ದ. ಕೊನೆಗೆ ಇವನಿಗೆ ಮುಳುವಾಗಿದ್ದು ಒಬ್ಬ ಒಬ್ಬ ದಕ್ಷ ಭಾರತೀಯ ಪೊಲೀಸ್ ಅಧಿಕಾರಿ. ಚಾಣಕ್ಷ  ಪೊಲೀಸ್ ಅಧಿಕಾರಿ  "ಮಧುಕರ್ ಜೆನ್ಡೇ" ೧೯೯೬ ರಲ್ಲಿ ಅತ್ಯದ್ಭುತವಾದ ಕಾರ್ಯಾಚರಣೆ ಯೊಂದರಲ್ಲಿ ಚಾರ್ಲ್ಸ್ ನನ್ನು ಅರೆಸ್ಟ್ ಮಾಡಿದ್ದರು. ಇವನ ದಸ್ತಗಿರಿಯೊಂದಿಗೆ ಭಾರತೀಯ ಪೊಲೀಸರು ಐದು ರೂಪಾಯಿ ಪೊಲೀಸರಲ್ಲ ಎಂದು ಸುಂದರವಾಗಿ ಸಾಬೀತಾಯಿತು. ಪೊಲೀಸ್ ಇಲಾಖೆಯ ವೃತ್ತಿಪರತೆ ವಿಜ್ರಂಭಿಸಿತು. 

ವಿಜಯ್ ಮಲ್ಯ ರವರ ಕಿಂಗ್ ಫಿಶರ್ ಆರ್ಥಿಕ ಸಂಕಟ ದಲ್ಲಿರುವ ವೈಮಾನಿಕ  ಸಂಸ್ಥೆ. ಉತ್ತರ ಭಾರತದ ಮೋಸಗಾರ, ವಂಚಕ ಉದ್ಯಮಿಗಳಲ್ಲಿ ರಕ್ತಗತವಾಗಿರುವ ಕಪಟತನ, ಸರಕಾರೀ  ವ್ಯವಸ್ಥೆಯನ್ನ ಸಲೀಸಾಗಿ ಜೇಬಿಗಿಳಿಸಿ ಕೊಳ್ಳುವ ಕಂತ್ರಿ ಗುಣ ಈ ಕನ್ನಡಿಗ ಉದ್ಯಮಿಯಲ್ಲಿ ಇಲ್ಲ. ಇವರ ಹಣಕಾಸು ತೊಂದರೆಗಳಿಗೆ ರೆಕ್ಕೆ ಪುಕ್ಕ ಕೊಟ್ಟಿದ್ದು ಮಾತ್ರವಲ್ಲದೆ ವರ್ಣರಂಜಿತವಾಗಿ ಪ್ರಕಟಿಸಿ ತೀಟೆ ತೀರಿಸಿ ಕೊಂಡವು ಪತ್ರಿಕೆಗಳು. ಬಹುಶಃ ಕೆಲವು ಉದ್ಯಮಿಗಳ ಹಾಗೆ ದಕ್ಷಿಣೆ ಬಿಸಾಕುವ ಗುಣ ಮಲ್ಯರಲ್ಲಿಲ್ಲದ್ದರಿಂದಲೋ ಏನೋ ಇವರ ಬೆನ್ನು ಹತ್ತಿದವು. ತಮ್ಮನ್ನು ಗುರಿಯಾಗಿಸಿ ನಡೆಯುತ್ತಿರವ witch hunting ಗೆ ಬೇಸತ್ತ ಮಲ್ಯ ಕೊನೆಗೆ ಉದುರಿಸಿದರು ನನಗೂ ನಿಮಗೂ ತಿಳಿದಿದ್ದ ನುಡಿ ಮುತ್ತುಗಳನ್ನು; indian media has no credibility. ಭಾರತೀಯ ಮಾಧ್ಯಮಗಳು "ನಂಬಲ'ನ'ರ್ಹ ಎಂದು.  ನಂಬಲನರ್ಹ ಅಥವಾ ಯೋಗ್ಯತೆಗೆಟ್ಟ  ಮಾಧ್ಯಮಗಳು ಎಂದರೂ ಸರಿಯೇ.

ಪತ್ರಕರ್ತರ ಮೇಲಿನ ವಿಶ್ವಾಸ ಕ್ರಮೇಣ ಜನರಲ್ಲಿ ಕಡಿಮೆಯಾಗುತ್ತಿದೆ ಎಂದು ಅಧ್ಯಯನಗಳು ಹೇಳುತ್ತಿವೆ. ೧೯೮೦ ರ ಕ್ಕಿಂತ ಮೊದಲಿದ್ದ  ಪತ್ರಕರ್ತರ ಮೇಲಿನ ವಿಶ್ವಾಸ ಈಗ ಇಲ್ಲ. ಈಗ ಮಾಧ್ಯಮಗಳು ಸರಕಾರೀ ಯಂತ್ರಗಳ, ರಾಜಕಾರಣಿಗಳ 'ಸ್ಟೆನೋ ಗ್ರಾಫರ್' ಗಳಾಗಿ ಮಾರ್ಪಟ್ಟಿದ್ದಾರೆ. ರಾಜಕಾರಣಿ ಅಥವಾ ಅಧಿಕಾರಿಗಳು ಹೇಳಿದ್ದು ಸರಿಯೇ ಎಂದು ತನಿಖೆ ನಡೆಸಿ ವರದಿ ಮಾಡುವ ವ್ಯವಧಾನ, ವೃತ್ತಿಪರತೆ  ಇವರಿಗಿಲ್ಲ. ಯಾವ ಆಮಿಷಕ್ಕಾಗಿ ಪತ್ರಕರ್ತನಿಗಿರಬೇಕಾದ ಗುಣಗಳನ್ನ ಇವರು ಬಲಿ ಕೊಟ್ಟಿದ್ದಾರೆ ಎನ್ನುವುದು ಜನರಿಗೆ ಗೊತ್ತಿಲ್ಲ. ಕೆಲವು ಪತ್ರಕರ್ತರು ತಮ್ಮ ರಾಜಕೀಯ ಅಜೆಂಡಾ ಗಳಿಗೆ ಹೊಂದುವ ವರದಿ ಪ್ರಕಟಿಸಿ ಪತ್ರಕರ್ತ ಹುದ್ದೆಗೆ ಕಳಂಕ ತರುವ, ಆ ಹುದ್ದೆಯ ಘನತೆ ಕುಗ್ಗಿಸುವ ಕೆಲಸ ಮಾಡುತ್ತಿರುವುದೂ ಸಹ ಜನ ಗಮನಿಸುತ್ತಿದ್ದಾರೆ.  ಒಂದು ಪತ್ರಿಕೆ ಬರೆದ ವರದಿಗಳ ಕಾರಣ ಕರ್ನಾಟಕದ ಒಂದು ಪಟ್ಟಣ  ಸಂಪೂರ್ಣ ಬಂದ್ ಅನ್ನೂ ಆಚರಿಸಿತಂತೆ. ಹಿಂದೆಂದೂ  ಇದನ್ನು ಹೋಲುವ ಘಟನೆ ಕರ್ನಾಟಕದಲ್ಲಿ ನಡೆದ ಬಗ್ಗೆ ನನಗೆ ನೆನಪಿಲ್ಲ. unprecedented ಎನ್ನಬಹುದು.  ನಮ್ಮ ನಾಡಿನಲ್ಲಿ ಪತ್ರಿಕೋದ್ಯಮ ಈ ಮಟ್ಟಕ್ಕೆ ಬಂದು ನಿಂತಿದೆ ಇಂದು.

ಒಬ್ಬ ಪತ್ರಕರ್ತ ಎನ್ನಿಸಿ ಕೊಳ್ಳಲು ನಾಲ್ಕು ವಾಕ್ಯಗಳನ್ನು ಹೆಣೆಯುವ ಕಲೆ ರೂಢಿಸಿ ಕೊಂಡರೆ ಸಾಲದು, ಕನಿಷ್ಠ ಓದು ಬರಹದ ವಿದ್ಯೆ ಮಾತ್ರ ಸಾಲದು. ಪಕ್ಷ ಅಥವಾ ಸಿದ್ಧಾಂತ ನಿಷ್ಠೆ ತೋರಿಸುವ 'ಪಟ್ಟೆ'ಗಳು ಸಹ ಇರಕೂಡದು   ಪತ್ರಕರ್ತನಲ್ಲಿ. ಬದಲಿಗೆ   ವೃತ್ತಿ ಪರತೆಯ ಗುಣಗಳು ಇರಬೇಕು, libel and libel law ಇವುಗಳ ಜ್ಞಾನವೂ ಇರಬೇಕು. ಓಹ್, ಇದು ಒಂದು ಬಹು ದೊಡ್ಡ ಬೇಡಿಕೆಯಾಗಿ ತೋರಬಹುದೇನೋ ಪತ್ರಕರ್ತರ ವೇಷ ತೊಟ್ಟ ಜನರಿಗೆ.

ತಮ್ಮ ಬಗೆಗಿನ ವಿಜಯ್ ಮಲ್ಯರವರ ಲೆಕ್ಕಾಚಾರ ತಪ್ಪು ಎಂದು ಜನರಿಗೆ ಮನವರಿಕೆ ಮಾಡುವ ಕೆಲಸ ಈ ಪತ್ರಕರ್ತ ಸಮೂಹ ಮಾಡೀತೆ? 

 

 

Rating
No votes yet