ಯಾರ ಸೋಲು, ಯಾರ ಗೆಲುವು

ಯಾರ ಸೋಲು, ಯಾರ ಗೆಲುವು

ಬೆಂಗಳೂರು ನಗರ ಕಾತುರದಿಂದ ಕಾಯುತ್ತಿದ್ದ ಕ್ರಿಕೆಟ್ ವಿಶ್ವ ಕಪ್ ಪಂದ್ಯಾವಳಿಯ ಭಾರತ ಇಂಗ್ಲೆಂಡ್ ನಡುವಿನ ಹಣಾಹಣಿ ರೋಮಾಂಚಕಾರಿಯಾಗಿ ಕೊನೆಗೊಂಡಿತು. ಗೆಲ್ಲಲು ೩೩೮ ರ ಗುರಿಯನ್ನು ಕೆಚ್ಚೆಯಿಂದ ಸ್ವೀಕರಿಸಿದ ಅಂಡ್ರೂ ಸ್ಟ್ರಾಸ್ ನ ಬಂಟರು ಗೆಲುವಿನ ಹೊಸ್ತಿಲಿನವರೆಗೂ ಬಂದು ಬರಿಗೈಲಿ ಹೋದರು. ಬರಿಗೈಲಿ ಹೋದರು ಆದ್ರೆ  ಹೋಗಿದ್ದು ಮಾತ್ರ ಹಿಗ್ಗುತ್ತಾ, ಮುಗುಳ್ನಗುತ್ತಾ. ಭಾರತೀಯರ ಹೃದಯಗಳು ಅವರ ಬಾಯಿಗಳಿಗೆ ಬರುವಂತೆ ಮಾಡಿದ ನಮ್ಮ ಮಾಜಿ ಯಜಮಾನರುಗಳು ತಾವೆಂಥಾ ಆಟಗಾರರೆಂದು ವಿಸ್ಮಯಕಾರಕವಾಗಿ ತೋರಿಸಿದರು. ವಿಪರೀತ ಕೇಕೆ ಹಾಕುವ ಬೆಂಗಳೂರಿನ ಜನರ  ಸದ್ದಡಗಿಸುತ್ತೇವೆ ಎನ್ನುವಂಥ ಸ್ಪಿನ್ನೆರ್ "ಸ್ವಾನ್" ನ ಹೇಳಿಕೆಗೆ ನ್ಯಾಯ ಒದಗಿಸುವಂತೆ ಆಡಿದ ಇಂಗ್ಲೆಂಡ್ ನಾಯಕ ತನ್ನ ಜೀವನದ ಅತ್ಯುತ್ತಮ ಇನ್ನಿಂಗ್ಸ್ ಅನ್ನು ಬೆಂಗಳೂರಿಗರಿಗೆ ಉಣಬಡಿಸಿದ.

ಆದರೆ ೩೩೯ ಮಾಡಿದ್ದು ನಮ್ಮ ಸಾಹಸವಲ್ಲವೇ? ಅಷ್ಟೇ ಅಲ್ಲ ಆ ಗುರಿ ಮುಟ್ಟದಂತೆ ತಡೆಯುವಲ್ಲಿ ನಾವು ಯಶಸ್ವಿಯಾಗಲಿಲ್ಲವೇ? no. a resounding NO. ೩೩೯ ಮಾಡಿ ಮುನ್ನೂರರ ಒಳಗೆ ಅವರ ಇನ್ನಿಂಗ್ಸ್ ಅನ್ನು ಕವುಚಿ ಬಿಟ್ಟಿದ್ದರೆ ನಾವು ಹೆಮ್ಮೆ ಪಡಬಹುದಿತ್ತು. ಆ ರೀತಿ ಮಾಡದೆ ಶತ್ರು ನಮ್ಮ ಅಡುಗೆ ಮನೆ ತನಕ ನುಸುಳಲು ಬಿಟ್ಟಿದ್ದು ನಮ್ಮ ಸೋಲು. ಇಲ್ಲಿ ನಮ್ಮ ಬೌಲಿಂಗ್ ನ ಬಂಡವಾಳ ಬಟಾ ಬಯಲಾಯಿತು. ನಮ್ಮದು mediocre bowling ಎನ್ನುವ ಹಣೆ ಪಟ್ಟಿ ಸಿಗುವಂತೆ ಮಾಡಿತು. ಹೌದು ಆಟದ ಗತಿಯನ್ನೇ ಬದಲಿಸಿದ ಜಹೀರ್ ಖಾನ್ ರ ಆ ಅದ್ಭುತ ಓವರ್ ಅನ್ನು unleash ಮಾಡದೆ ಇದ್ದಿದ್ದರೆ ಇಂಗ್ಲೆಂಡ್ ಆಟಗಾರರು ಚಿನ್ನಸ್ವಾಮಿ ಮೈದಾನದ ಪ್ರದಕ್ಷಿಣೆ ಹಾಕುತ್ತಿದ್ದರು ಕೇಕೆ ಹಾಕುತ್ತಾ.  ತನ್ನ ವಯಸ್ಸು ನಾಚುವಂತೆ ಶತಕಗಳ ಮೇಲೆ ಶತಕ ಸಿಡಿಸುತ್ತಿರುವ ತೆಂಡೂಲ್ಕರ್ ಅವರ ಈ ಶತಕವೂ ಮತ್ತೊಂದು ಅಂಕಿ ಅಂಶವಾಗಿ ಉಳಿಯಿತೇ ವಿನಃ “ಅಂತಿಮ ನಗು” ವಿನ ರೋಮಾಂಚನವನ್ನು ನೀಡಲು ವಿಫಲವಾಯಿತು.

 

 

Rating
No votes yet

Comments