ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

 

ಬೇಂದ್ರೆಯವರ ಈ ಕವನದ  ಗುನುಗು  ನಿಮ್ಮೆಲ್ಲರಿಗು ಯುಗಾದಿಯ ಹುರುಪು ತರಲಿ 

ಯುಗಾದಿಯ ಶುಭ ಹಾರೈಕೆಗಳೊಡನೆ 

------------------------------------------------------------------

 

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ
 
ಹೊಂಗೆ ಹೂವ ತೊಂಗಲಲ್ಲಿ
ಭೃಂಗದ ಸಂಗೀತ ಕೇಳಿ
 ಮತ್ತೆ ಕೇಳ ಬರುತಿದೆ
 ಬೇವಿನ ಕಹಿ ಬಾಳಿನಲ್ಲಿ
ಹೂವಿನ ನಸುಗಂಪು ಸೂಸಿ ಜೀವಕಳೆಯ ತರುತಿದೆ
 
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ... !
 
 
ವರುಷಕೊಂದು ಹೊಸತು ಜನ್ಮ
ಹರುಷಕೊಂದು ಹೊಸತು ನೆನೆಯು
 ಅಖಿಲ ಜೀವ ಜಾತಕೆ
ಒಂದೆ ಒಂದು ಜನ್ಮದಲ್ಲಿ
ಒಂದೆ ಬಾಲ್ಯ ಒಂದೆ ಹರೆಯ
ನಮಗದಷ್ಟೆ ಏತಕೋ..
 
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ....!
 
 
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ
ಹೊಸತು ಹೊಸತು ತರುತಿದೆ
 
 ಯೂ_ಟ್ಯೂಬಿನ ಹಾಡನೊಮ್ಮೆ ಕೇಳಲು ಇಲ್ಲಿ ಕ್ಲಿಕ್ ಮಾಡಿ
 
 
 
Rating
No votes yet

Comments