ಲಿನಕ್ಸಾಯಣ - ೪೭ - ಏನಿದು ಸ್ವತಂತ್ರ ತಂತ್ರಾಂಶ?

ಲಿನಕ್ಸಾಯಣ - ೪೭ - ಏನಿದು ಸ್ವತಂತ್ರ ತಂತ್ರಾಂಶ?

ಸ್ವತಂತ್ರ ತಂತ್ರಾಂಶ” ಸ್ವಾತಂತ್ರ್ಯತೆಯ ಅಂಶ, ಬೆಲೆಯಲ್ಲ. ಇದನ್ನ ಅರಿಯಲು ನೀವು “ ಸ್ವತಂತ್ರ ಸಂವಾದ ” ದಲ್ಲಿನ “ಸ್ವತಂತ್ರ ” ಎಂಬುದಾಗಿ ಅರ್ಥೈಸಿಕೊಳ್ಳಬೇಕು, “ಉಚಿತ ಬಿಯರ್ ” ನಲ್ಲಿನ “ಉಚಿತ ” ವೆಂಬಂತಲ್ಲ.

ಸ್ವತಂತ್ರ ತಂತ್ರಾಂಶ ಬಳಕೆದಾರರ ಬಳಕೆ, ಅನುಕರಣೆ ಮತ್ತು ವಿತರಣೆ, ಅಧ್ಯಯನ, ಬದಲಿಸುವಿಕೆ ಮತ್ತು ಅಭಿವೃದ್ಧಿಯ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಅಂಶವಾಗಿದೆ. ವಿಸ್ತರಿಸಿ ಹೇಳುವುದಾದರೆ, ಇದು ನಾಲ್ಕು ರೀತಿಯ ಸ್ವಾತಂತ್ರ್ಯವನ್ನು ತಂತ್ರಾಂಶ ಬಳಕೆದಾರರಿಗೆ ಸೂಚಿಸುತ್ತದೆ :

  • ಪ್ರೊಗ್ರಾಮನ್ನು ಯಾವುದೇ ಉದ್ದೇಶಕ್ಕೆ ಬಳಸುವ ಸ್ವಾತಂತ್ರ್ಯ (ಸ್ವಾತಂತ್ರ್ಯ ೦).
  • ಪ್ರೊಗ್ರಾಮ್ ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಅದನ್ನು ನಮ್ಮ ಅವಶ್ಯಕತೆಗೆ ತಕ್ಕಂತೆ ಹೇಗೆ ಅಳವಡಿಸಿಕೊಳ್ಳುವುದು ಎಂಬುದನ್ನು ಅಧ್ಯಯನ ಮಾಡುವ ಸ್ವಾತಂತ್ರ್ಯ (ಸ್ವಾತಂತ್ರ್ಯ ೧).
    ಮೂಲ ಗ್ರಂಥ/ರೂಪ ನೋಡಲು (source code) ಮಾಡಿಕೊಡುವ ಪೂರ್ವ ಕರಾರು ಇದಕ್ಕೆ ಅನ್ವಯಿಸುತ್ತದೆ.
  • ಪ್ರತಿಗಳನ್ನು ಮರುವಿತರಣೆ ಮಾಡುವ ಸ್ವಾತಂತ್ರ್ಯ, ಇದರಿಂದ ನಿಮ್ಮ ನೆರೆಹೊರೆಯವರಿಗೆ ನೆರವಾಗಲು ಸಾದ್ಯವಾಗುತ್ತದೆ (ಸ್ವಾತಂತ್ರ್ಯ ೨).
  • ತಂತ್ರಾಂಶಗಳನ್ನ ಅಭಿವೃದ್ಧಿ ಮಾಡುವ, ಮತ್ತು ಪರಿಷ್ಕರಿಸಿದ ಆವೃತ್ತಿಗಳನ್ನು ಸಮುದಾಯದ ಒಳಿತಿಗಾಗಿ ಸಾರ್ವಜನಿಕರಿಗೆ ಬಿಡುಗಡೆಗೊಳಿಸುವ ಸ್ವಾತಂತ್ರ್ಯ. (ಸ್ವಾತಂತ್ರ್ಯ ೩). ಮೂಲ ಗ್ರಂಥ/ರೂಪ ನೊಡಲು (source code) ಮಾಡಿಕೊಡುವ ಪೂರ್ವ ಕರಾರು ಇದಕ್ಕೆ ಅನ್ವಯಿಸುತ್ತದೆ.
Rating
No votes yet