ವೇದೋಕ್ತ ಜೀವನ ಶಿಬಿರ
ಈಗಾಗಲೇ ಹಾಸನದಲ್ಲಿ ಒಂದು ವೇದೋಕ್ತಜೀವನ ಶಿಬಿರ ನಡೆದಿರುವುದು ಹಲವರ ಗಮನಕ್ಕೆ ಬಂದಿದೆ. ಹಲವರು ಅದರಲ್ಲಿ ಭಾಗವಹಿಸಿದ್ದಿರಿ. ಈಗ ಎರಡನೆಯ ಶಿಬಿರವನ್ನು ಚನ್ನರಾಯಪಟ್ಟಣದ ವೇದ ಭಾರತೀ ಸಂಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗಿದೆ. ಅದರ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.ಆಸಕ್ತರಿಂದ ಅರ್ಜಿಯನ್ನು ಪಡೆಯಲು ವ್ಯವಸ್ಥಾಪಕರು ಉದ್ಧೇಶಿಸಿದ್ದಾರೆ. ಶಿಬಿರದಲ್ಲಿ ಪಾಲ್ಗೊಳ್ಲಲು ಇಚ್ಚೆ ಇರುವ ವೇದಾಭಿಮಾನಿಗಳು ಅರ್ಜಿಯನ್ನು ನೇರವಾಗಿ ವ್ಯವಸ್ಥಾಪಕರ ವಿಳಾಸಕ್ಕೆ ಕಳಿಸಬಹುದು.
ವೇದಗಳಷ್ಟು ಪ್ರಾಚೀನವೂ, ಸರ್ವಜನಾದರಣೀಯವೂ, ಶ್ರೇಷ್ಠ ಸಂಸ್ಕೃತಿಯೂ, ಶ್ರೀಮಂತ ಕಲೆಯೂ, ಅನುಪಮ ಸಾಹಿತ್ಯ ಜ್ಞಾನಭಂಡಾರಗಳು ಮತ್ತೊಂದಿಲ್ಲ. ಅಂತೆಯೇ ಹೃದಯ ವೈಶಾಲ್ಯತೆಯನ್ನು ಹೊಂದಿರುವ ಈ ಸನಾತನ ಧರ್ಮದ ವೈಭವ ಮನುಕುಲಕ್ಕೆ ನೀಡಿರುವ ಅಭೂತಪೂರ್ವ ಕೊಡುಗೆಯ ಅರಿವು ಮೂಡಿಸಲು ವೇದಪ್ರಚಾರಕರಾಗಿ, ಪರಿಚಾರಕರಾಗಿ ದೇಶದ ಉದ್ದಗಲಗಳಲ್ಲಿಯೂ ಸಂಚರಿಸಿ ದುಡಿಯುತ್ತಿರುವ ಬೆರಳೆಣಿಕೆಯ ಮಹನೀಯರಲ್ಲಿ ವೇದಾಧ್ಯಾಯೀ ಶ್ರೀಯುತ ಸುಧಾಕರಶರ್ಮಾ ಒಬ್ಬರು. ವೇದ ಭಾಷ್ಯಕಾರರೂ, ವಿದ್ವಾಂಸರೂ, ಸಂಶೋಧಕರೂ, ಲೇಖಕರೂ, ಸಾಹಿತಿಗಳೂ ಬಹುಭಾಷಾ ಪ್ರವಚನಕಾರರೂ ಮತ್ತು ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರವಾದ ಜಗತ್ತಿನ ಪ್ರಪ್ರಥಮ ವೇದ- ವೈದಿಕ ಧಾರಾವಾಹಿ ಹೊಸಬೆಳಕು ಎಂಬ ಖ್ಯಾತಿಯ ರುವಾರಿಗಳೂ ಆದ ಶ್ರೀಯುತ ಶರ್ಮರು ವೇದಗಳಲ್ಲಿ ಹೇಳಿರುವ ಹಾಗೂ ಮಹರ್ಷಿಗಳ ಉದಾತ್ತ ಚಿಂತನೆಯ ವಿಚಾರಗಳು ಮತ್ತು ಆಧ್ಯಾತ್ಮ ವಿದ್ಯೆಯ ವಾಸ್ತವಿಕ ಸ್ವರೂಪವನ್ನು ಅತಿ ಸುಲಭ ಮತ್ತು ಸರಳ ರೀತಿಯನ್ನು ಅನುಸರಿಸಿ ಸುಲಲಿತವಾಗಿ ಜನರಿಗೆ ತಿಳಿಸಿಕೊಡುವುದರೊಂದಿಗೆ ಅವರು ವೇದಪ್ರಣೀತ ಜೀವನವನ್ನು ನಡೆಸುವಂತಾಗಬೇಕು ಎಂಬ ಇಚ್ಛೆಯಿಂದ ಚನ್ನರಾಯಪಟ್ಟಣದಲ್ಲಿ ವೇದೋಕ್ತ ಜೀವನ ಪಥ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಈ ಮೂಲಕ ಸಕಲ ವಿಚಾರಗಳಲ್ಲಿಯೂ ಜೀವನ ಪೋಷಕ ಆದರ್ಶಗಳನ್ನು ಆಕರ್ಷಣೀಯ ಮಾತುಗಳಲ್ಲಿ ಮನಮುಟ್ಟುವಂತೆ ತಿಳಿಸಿಕೊಡಲಿದ್ದಾರೆ. ಶಾಂತಿ ಮತ್ತು ಸೌಭಾಗ್ಯದ ಆನಂದಕ್ಕಾಗಿ ರೂಪಿಸಲಾದ ಈ ಪವಿತ್ರ ಸಂಕಲ್ಪವನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರದ್ದಾಗಿದೆ. ವೇದಾನುಭವ ಸಂಪನ್ನರಿಂದ ನಡೆಯುತ್ತಿರುವ ಶಿಬಿರದ ಚಟುವಟಿಕೆಗಳಲ್ಲಿ ಭಾಗವಹಿಸಿ, ಮುಕ್ತ ಮನಸ್ಸಿನಿಂದ ವಿಮರ್ಶಿಸಿ ತಿಳಿಯುವವರಿಗೆ ರಸದೌತಣ. ಈ ಮಾರ್ಗದರ್ಶನ ನಾಳಿನ ಬಾಳಿಗೆ ನಂದಾದೀವಿಗೆಯಾಗಬಲ್ಲದು.
ಶಿಬಿರದ ಬಗ್ಗೆ:
ನಿತ್ಯ ಸತ್ಯ ಸಂಸ್ಕೃತಿ ವಿಚಾರಗಳ ಅರಿವಿನಲ್ಲಿ ವ್ಯವಹರಿಸುವುದಕ್ಕೆ ಒತ್ತಡ ರಹಿತ ಸುಲಭ ಸೂತ್ರಗಳ ಪರಿಚಯ. ವಿಮರ್ಶೆ ಮಾಡಿ ಸತ್ಯ, ಸತ್ವ ಕಂಡರೆ ಮಾತ್ರ ಸ್ವೀಕರಿಸಿ.ಪುರುಷ-ಮಹಿಳೆಯರು ಎಂಬ ಭೇದವಿಲ್ಲ, ವಯಸ್ಸಿನ ಮಿತಿಯಿಲ್ಲ. ವೇದ ಮಂತ್ರಗಳು ತಿಳಿದಿರಬೇಕೆಂದಿಲ್ಲ. ಕಟುವಾದ ನಿಯಮಗಳಾವುದೂ ಇಲ್ಲ.ಕಾರ್ಯಕ್ರಮದ ಸ್ಥಳದಲ್ಲಿ ವೇದ ಸಾಹಿತ್ಯ ಕೃತಿಗಳ ಮಾರಾಟ ವ್ಯವಸ್ಥೆ ಇರುತ್ತದೆ.ವೇದದ ಬಗ್ಗೆ ಸಾಮಾನ್ಯ ಅರಿವು ಮತ್ತು ಆಸಕ್ತಿ ಇರುವ ೫೦ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ. ಸರಳವಾದ ಊಟೋಪಚಾರದ ವ್ಯವಸ್ಥೆ ಇರುತ್ತದೆ.
ಅರ್ಜಿ ಪಡೆಯಲು ಕೆಳಗಿನ ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸಿ:
9980813162/9448033817/9448868531
ಇ-ಮೇಲ್: vedasudhe@gmail.com
ಅಂಚೆ ವಿಳಾಸ:
ವ್ಯವಸ್ಥಾಪಕರು
ವೇದಭಾರತೀ ಸಂಪ್ರತಿಷ್ಠಾನ
ಶಾಖೆ, ಚನ್ನರಾಯಪಟ್ಟಣ
-------------------------------------------------------------------------------------------
ಪ್ರವೇಶ ಅರ್ಜಿ
ವೇದಭಾರತಿ ಸಂಪ್ರತಿಷ್ಠಾನ
ಜಾಗೃತಿ ಟ್ರಸ್ಟ್ ಕಾರ್ಯಾಲಯ
ಕೋಟೆ, ಚನ್ನರಾಯಪಟ್ಟಣ-೫೭೩೧೧೬
ವೇದೋಕ್ತ ಜೀವನ ಪಥದ
ಶಿಬಿರ
ಮಾನ್ಯರೇ,
ಮುಂಬರುವ ೨೦೧೪ನೇ ಏಪ್ರಿಲ್ ತಿಂಗಳಲ್ಲಿ ಕೈಗೊಂಡಿರುವ ಜೀವನ ಪೋಷಕ ಆದರ್ಶಗಳನ್ನೊಳಗೊಂಡಿರುವ ಕಾರ್ಯಕ್ರಮದ ಧ್ಯೇಯೊದ್ದೇಶಗಳನ್ನು ನಾನು ಮನಸಾರೆ ಒಪ್ಪಿ ಈ ಮೂಲಕ ಸತ್ಯ ಜೀವನ ನಡೆಸಲು ಅದರ ಅರ್ಥ ಮತ್ತು ಉದ್ದೇಶವನ್ನು ಪಡೆಯಲಿಚ್ಚಿಸುತ್ತೇನೆ. ತಾವು ನನ್ನನ್ನು ಶಿಬಿರಾರ್ಥಿಯಾಗಿ ಸ್ವೀಕರಿಸಬೇಕೆಂದು ಪ್ರಾರ್ಥನೆ.
ನನ್ನ ವಿಳಾಸ: ದೂರವಾಣಿ ಸಂಖ್ಯೆ:
_________________ ಸ್ಥಿರ : ________________
_________________ ಸಂಚಾರಿ:
_________________
ಸಹಿ/-